ವಾಷಿಂಗ್ಟನ್ ನಲ್ಲಿ ಬೆಂಬಲಿಗರಿಂದ ದಾಂಧಲೆ: ಟ್ರಂಪ್ ಸಾಮಾಜಿಕ ಜಾಲತಾಣ ಖಾತೆಗಳು ಸ್ಥಗಿತ
ಅಮೆರಿಕ ರಾಜಧಾನಿ ವಾಷಿಂಗ್ಟನ್ ನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರುವ ದಾಂಧಲೆ ನಡೆಸಿರುವ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ನೀಡಿದ ಪ್ರಚೋಧನಾತ್ಮಕ ಭಾಷಣದ ಹಿನ್ನಲೆಯಲ್ಲಿ ಟ್ರಂಪ್ ಅವರ ಸಾಮಾಜಿಕ ಜಾಲತಾಣ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ.
Published: 07th January 2021 09:01 AM | Last Updated: 07th January 2021 09:01 AM | A+A A-

ವಾಷಿಂಗ್ಟನ್ ನಲ್ಲಿ ಬೆಂಬಲಿಗರಿಂದ ದಾಂಧಲೆ
ವಾಷಿಂಗ್ಟನ್: ಅಮೆರಿಕ ರಾಜಧಾನಿ ವಾಷಿಂಗ್ಟನ್ ನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರುವ ದಾಂಧಲೆ ನಡೆಸಿರುವ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ನೀಡಿದ ಪ್ರಚೋಧನಾತ್ಮಕ ಭಾಷಣದ ಹಿನ್ನಲೆಯಲ್ಲಿ ಟ್ರಂಪ್ ಅವರ ಸಾಮಾಜಿಕ ಜಾಲತಾಣ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ.
ವಾಷಿಂಗ್ಟನ್ ಗೆ ತಮ್ಮ ಬೆಂಬಲಿಗರು ನುಗ್ಗಿ ಹಿಂಸಾಚಾರ ನಡೆಸಿದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸಂಬಂಧಿಸಿದಂತೆ ಪದೇ ಪದೇ ಸುಳ್ಳು ಆರೋಪಗಳನ್ನು ಮಾಡಿರುವ ಡೊನಾಲ್ಡ್ ಟ್ರಂಪ್ ಅವರ, ಫೇಸ್ ಬುಕ್, ಟ್ವಿಟರ್, ಇನ್ ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಖಾತೆಯನ್ನು ತಾತ್ಕಾಲಿಕ ಅಮಾನತಿನಲ್ಲಿಡಲಾಗಿದೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಎಲೆಕ್ಟೋರಲ್ ಕಾಲೇಜ್ ಮತಗಳನ್ನು ಎಣಿಸುವ ಮತ್ತು ಪ್ರಮಾಣೀಕರಿಸುವ ಪ್ರಕ್ರಿಯೆ ಸಾಗುತ್ತಿರುವ ನಡುವೆೇ ಭದ್ರತೆಯನ್ನು ಉಲ್ಲಂಘಿಸಿ ಕ್ಯಾಪಿಟಲ್ ಕಟ್ಟಡಕ್ಕೆ ಮುತ್ತಿಗೆ ಹಾಕಿದ ನೂರಾರು ಟ್ರಂಪ್ ಬೆಂಬಲಿಗರು ಪೊಲೀಸರ ವಿರುದ್ಧ ಘರ್ಷಣೆಗಿಳಿದು ಹಿಂಸಾಚಾರದಲ್ಲಿ ಭಾಗಿಯಾದರು. ಘಟನೆ ಸಂಬಂಧಿಸಿದಂತೆ ಡೊನಾಲ್ಡ್ ಟ್ರಂಪ್, ಟ್ವಿಟರ್ನಲ್ಲಿ ಪದೇ ಪದೇ ಸುಳ್ಳು ಆರೋಪಗಳನ್ನು ಪೋಸ್ಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಡೊನಾಲ್ಡ್ ಟ್ರಂಪ್ ಟ್ವಿಟರ್ ಖಾತೆ ಅಮಾನತಿನಲ್ಲಿಡಲಾಗಿದ್ದು, ಭವಿಷ್ಯದಲ್ಲಿ ನಿಯಮ ಉಲ್ಲಂಘಿದ್ದಲ್ಲಿ ಶಾಶ್ವತ ಅಮಾನತಿಗೆ ಕಾರಣವಾಗುತ್ತದೆ ಎಂದು ಟ್ವಿಟರ್ ಎಚ್ಚರಿಸಿದೆ.
ಕೇವಲ ಟ್ವಿಟರ್ ಮಾತ್ರವಲ್ಲದೇ ಡೊನಾಲ್ಡ್ ಟ್ರಂಪ್ ಪೋಸ್ಟ್ ಮಾಡಿರುವ ವಿಡಿಯೊವನ್ನು ಫೇಸ್ಬುಕ್, ಇನ್ ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಸಹ ತೆಗೆದು ಹಾಕಿದೆ. ತಮ್ಮ ಬೆಂಬಲಿಗರಲ್ಲಿ ಹಿಂಸಾಚಾರವನ್ನು ನಿಲ್ಲಿಸಿ ಮನೆಗೆ ಹೋಗುವಂತೆ ಮನವಿ ಮಾಡುತ್ತಿರುವ ಡೊನಾಲ್ಡ್ ಟ್ರಂಪ್, ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಮೋಸ ನಡೆದಿದೆ ಎಂದು ಸುಳ್ಳು ಸುದ್ದಿಗಳನ್ನು ಹಬ್ಬಿದ್ದರು. ಈ ಬಗ್ಗೆ ಹೇಳಿಕೆ ಕೊಟ್ಟಿರುವ ಫೇಸ್ಬುಕ್ ಸಮಗ್ರತೆಯ ಉಪಾಧ್ಯಕ್ಷ ಗಯ್ ರಾಸೆನ್, ಡೊನಾಲ್ಡ್ ಟ್ರಂಪ್ ಹೇಳಿಕೆಯು ಹಿಂಸಾಚಾರದ ಅಪಾಯವನ್ನು ಕಡಿಮೆ ಮಾಡುವ ಬದಲು ಮತ್ತಷ್ಟು ಹುರಿದುಂಬಿಸುತ್ತಿದೆ ಎಂದು ಹೇಳಿದ್ದಾರೆ.
We are locking President Donald Trump’s Instagram account for 24 hours as well: Adam Mosseri, Head of Instagram pic.twitter.com/3TSosVgfS7
— ANI (@ANI) January 7, 2021
An hour after Twitter suspended US President Donald Trump from posting to its platform, Facebook followed suit. The decisions came after posts Trump made about his supporters storming the U.S. Capitol, reports The Associated Press
— ANI (@ANI) January 7, 2021