ಹಿಂದೂ ಮಹಾಸಾಗರ ಮತ್ತು ಪೆಸಿಫಿಕ್ ಭಾಗದಲ್ಲಿ ಚೀನಾಕ್ಕೆ ಪ್ರತಿಸ್ಪರ್ಧಿಯಾಗಿ ಭಾರತ ನಿಲ್ಲಬಲ್ಲದು: ಅಮೆರಿಕ

ಹಿಂದೂ ಮಹಾಸಾಗರ ಮತ್ತು ಪೆಸಿಫಿಕ್ ಭಾಗಗಳಲ್ಲಿ ಭಾರತ ಬಲಿಷ್ಠವಾಗುತ್ತಿದ್ದು, ಚೀನಾಕ್ಕೆ ಪ್ರತಿಸ್ಪರ್ಧಿಯಾಗಿ ಭಾರತ ನಿಲ್ಲಬಲ್ಲದು ಎಂದ ಅಮೆರಿಕ ಹೇಳಿದೆ.

Published: 13th January 2021 03:20 PM  |   Last Updated: 13th January 2021 03:23 PM   |  A+A-


National Security Advisor Robert O'Brien

ರಾಬರ್ಟ್‌ ಒಬ್ರಿಯಾನ್‌ (ಸಂಗ್ರಹ ಚಿತ್ರ)

Posted By : Srinivasamurthy VN
Source : PTI

ವಾಷಿಂಗ್ಟನ್‌: ಹಿಂದೂ ಮಹಾಸಾಗರ ಮತ್ತು ಪೆಸಿಫಿಕ್ ಭಾಗಗಳಲ್ಲಿ ಭಾರತ ಬಲಿಷ್ಠವಾಗುತ್ತಿದ್ದು, ಚೀನಾಕ್ಕೆ ಪ್ರತಿಸ್ಪರ್ಧಿಯಾಗಿ ಭಾರತ ನಿಲ್ಲಬಲ್ಲದು ಎಂದ ಅಮೆರಿಕ ಹೇಳಿದೆ.

ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್‌ ಒಬ್ರಿಯಾನ್‌ ಅವರು 10 ಪುಟಗಳ ಈ ದಾಖಲೆಯನ್ನು ಇತ್ತೀಚೆಗೆ ಶ್ವೇತಭವನದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು. ಭಾರತ ಹಿಂದೂಮಹಾಸಾಗರ–ಪೆಸಿಫಿಕ್‌ ಪ್ರದೇಶದಲ್ಲಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಸಮಾನ ಮನಸ್ಕ ದೇಶಗಳೊಂದಿಗೆ ಮೈತ್ರಿ ಹೊಂದಿದ ಭಾರತ, ಚೀನಾಕ್ಕೆ ಪ್ರತಿಸ್ಪರ್ಧಿಯಾಗಿ ನಿಲ್ಲಬಲ್ಲದು ಎಂದು ಹೇಳಲಾಗಿದೆ.

ಇಂಡೊ–ಪೆಸಿಫಿಕ್‌ ಪ್ರದೇಶದಲ್ಲಿ ಅಭಿವೃದ್ಧಿ, ಸ್ಥಿರತೆ ಕಾಪಾಡುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸಲಿದೆ. ಭದ್ರತೆ ವಿಷಯದಲ್ಲಿ ಭಾರತ ಮತ್ತು ಅಮೆರಿಕ ಸ್ನೇಹ ಗಟ್ಟಿಯಾಗಿದೆ. ದಕ್ಷಿಣ ಮತ್ತು ಆಗ್ನೇಯ ಏಷ್ಯಾದಲ್ಲಿ ಚೀನಾದ ಪ್ರಭಾವ, ಆಕ್ರಮಣಶೀಲತೆಯನ್ನು ತಗ್ಗಿಸಲು ಭಾರತ ಮತ್ತು ಅಮೆರಿಕ ಜಂಟಿಯಾಗಿ ಕಾರ್ಯ ನಿರ್ವಹಿಸುವ ಅಗತ್ಯ ಇದೆ. ಗಡಿ ವಿಷಯವಾಗಿ ಚೀನಾದೊಂದಿಗೆ ಉಂಟಾಗಿರುವ ಸಂಘರ್ಷಮಯ ಸ್ಥಿತಿಯನ್ನು ನಿಭಾಯಿಸುವ ಸಾಮರ್ಥ್ಯವನ್ನೂ ಭಾರತ ಹೊಂದಿದೆ ಎಂದು ಈ ದಾಖಲೆಗಳಲ್ಲಿ ವಿವರಿಸಲಾಗಿದೆ.

ಚೀನೀ ಕಮ್ಯುನಿಸ್ಟ್ ಪಕ್ಷವು ತಮ್ಮ ಸರ್ಕಾರಕ್ಕೆ ಇತರೆ ದೇಶಗಳು ಸ್ವಾತಂತ್ರ್ಯ ಮತ್ತು ಸಾರ್ವಭೌಮತ್ವವನ್ನು ಅಧೀನಗೊಳಿಸುವಂತೆ ಬೀಜಿಂಗ್ ಇಂಡೋ-ಪೆಸಿಫಿಕ್ ರಾಷ್ಟ್ರಗಳ ಮೇಲೆ ಹೆಚ್ಚು ಒತ್ತಡ ಹೇರುತ್ತಿದೆ. ಆದರೆ ಅಮೆರಿಕದ ವಿಧಾನವು ವಿಭಿನ್ನವಾಗಿದ್ದು, ನಮ್ಮ ಮಿತ್ರರಾಷ್ಟ್ರಗಳು ಮತ್ತು ಪಾಲುದಾರರು - ಮುಕ್ತ ಮತ್ತು ಸ್ವತಂತ್ರ ಇಂಡೋ-ಪೆಸಿಫಿಕ್ ಮೌಲ್ಯಗಳು ಮತ್ತು ಆಕಾಂಕ್ಷೆಗಳನ್ನು ಹಂಚಿಕೊಳ್ಳುವ ಎಲ್ಲರೂ - ತಮ್ಮ ಸಾರ್ವಭೌಮತ್ವವನ್ನು ಕಾಪಾಡಿಕೊಳ್ಳಬಹುದು ಮತ್ತು ರಕ್ಷಿಸಬಹುದು ಎಂದು ಖಚಿತಪಡಿಸಿಕೊಳ್ಳಲು ನಾವು ಪ್ರಯತ್ನಿಸುತ್ತೇವೆ ಎಂದು ಹೇಳಲಾಗಿದೆ.
 

Stay up to date on all the latest ಅಂತಾರಾಷ್ಟ್ರೀಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp