ಭಾರಿ ಮುಖಭಂಗ; ಅಮೆರಿಕ ಇತಿಹಾಸದಲ್ಲೇ ಎರಡು ಬಾರಿ ದೋಷಾರೋಪಣೆಗೆ ಗುರಿಯಾದ ಮೊದಲ ಅಧ್ಯಕ್ಷ ಟ್ರಂಪ್

ಅಮೆರಿಕದ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರಿ ಮುಖಭಂಗ ಅನುಭವಿಸಿದ್ದು, ಕ್ಯಾಪಿಟಲ್ ಗಲಭೆಗೆ ಸಂಬಂಧಿಸಿದಂತೆ ಅಮೆರಿಕ ಸಂಸತ್ ಟ್ರಂಪ್ ಮೇಲೆ ದೋಷಾರೋಪಣೆಯನ್ನು(ಮಹಾಭಿಯೋಗ) ಹೊರಿಸಿದೆ.

Published: 14th January 2021 07:50 AM  |   Last Updated: 14th January 2021 07:50 AM   |  A+A-


Donald_Trump1

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

Posted By : Srinivasamurthy VN
Source : PTI

ವಾಷಿಂಗ್ಟನ್‌: ಅಮೆರಿಕದ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರಿ ಮುಖಭಂಗ ಅನುಭವಿಸಿದ್ದು, ಕ್ಯಾಪಿಟಲ್ ಗಲಭೆಗೆ ಸಂಬಂಧಿಸಿದಂತೆ ಅಮೆರಿಕ ಸಂಸತ್ ಟ್ರಂಪ್ ಮೇಲೆ ದೋಷಾರೋಪಣೆಯನ್ನು(ಮಹಾಭಿಯೋಗ) ಹೊರಿಸಿದೆ.

ಆ ಮೂಲಕ ಅಮೆರಿಕ ಇತಿಹಾಸದಲ್ಲೇ 2 ಬಾರಿ ದೋಷಾರೋಪಣೆಗೆ ಗುರಿಯಾದ ಮೊದಲ ಅಧ್ಯಕ್ಷ ಎಂಬ ಕುಖ್ಯಾತಿಗೆ ಟ್ರಂಪ್ ಗುರಿಯಾಗಿದ್ದಾರೆ. 

ಅಧಿಕೃತವಾಗಿ ಹುದ್ದೆ ತೊರೆದು ಹೋಗಲು ಡೊನಾಲ್ಡ್ ಟ್ರಂಪ್‌ಗೆ ಒಂದು ಕೊನೆಯ ಅವಕಾಶವನ್ನು ಡೆಮೋಕ್ರಾಟ್ಸ್ ನೀಡಿದ್ದಾರೆ. ಟ್ರಂಪ್ ಅಧ್ಯಕ್ಷೀಯ ಅವಧಿ ಕೊನೆಯಾಗಲು ಒಂದು ವಾರ ಮಾತ್ರ ಬಾಕಿ ಉಳಿದಿದ್ದು, ಯಾವಾಗ ಹುದ್ದೆ ಬಿಟ್ಟು ನಿರ್ಗಮಿಸುವರು ಎನ್ನುವುದು ಇನ್ನೂ ಖಚಿತವಾಗಿಲ್ಲ.

ಅಮೆರಿಕದ ಕ್ಯಾಪಿಟಲ್ ಕಟ್ಟಡದ ಮೇಲೆ ನಡೆದ ದಾಳಿ ಮತ್ತು ಹಿಂಸಾಚಾರ, ಐವರ ಸಾವು ಪ್ರಕರಣ ದೊಡ್ಡ ಸಮಸ್ಯೆ ಸೃಷ್ಟಿಸಿದೆ. ಡೊನಾಲ್ಡ್ ಟ್ರಂಪ್ ಬೆಂಬಲಿಗರ ಕೃತ್ಯ ಇದಾಗಿರುವುದರಿಂದ, ಟ್ರಂಪ್ ಅಮೆರಿಕ ಸಂಸತ್‌ನಲ್ಲಿ ತೀವ್ರ ಮುಖಭಂಗಕ್ಕೆ ಒಳಗಾಗಿದ್ದಾರೆ.

ಡೊನಾಲ್ಡ್‌ ಟ್ರಂಪ್‌ ಎರಡನೇ ಬಾರಿಗೆ ವಾಗ್ದಂಡನೆಗೂ ಗುರಿಯಾಗಿದ್ದಾರೆ. ಬುಧವಾರ ಜನಪ್ರತಿನಿಧಿಗಳ ಸಭೆಯಲ್ಲಿ(ಹೌಸ್‌ ಆಫ್‌ ರೆಪ್ರಸೆಂಟೇಟಿವ್ಸ್‌) ವಾಗ್ದಂಡನೆ ಕುರಿತು ಸುದೀರ್ಘ ಚರ್ಚೆ ನಡೆದಿದೆ. ನಿರ್ಣಯವನ್ನು ಮತಕ್ಕೆ ಹಾಕುವ ಮುನ್ನ ಬಹುತೇಕ ಸದಸ್ಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಸುಮಾರು 2 ಗಂಟೆಗಳ ಚರ್ಚೆ ಬಳಿಕ 433 ಸದಸ್ಯರು ಹಾಜರಿದ್ದ ಸೆನೆಟ್ ನಲ್ಲಿ ನಡೆದ ಮತದಾನದಲ್ಲಿ ಟ್ರಂಪ್ ವಿರುದ್ಧ 232 ಮತಗಳು (ಡೆಮಾಕ್ರೆಟ್ಸ್) ಬಂದಿವೆ. ಈ ಪೈಕಿ 10 ರಿಪಬ್ಲಿಕನ್ಸ್ ಮತಗಳು ಸೇರಿವೆ. ಟ್ರಂಪ್ ಪರ 197 ಮತ ಬಿದ್ದಿವೆ. ಈ ಮೂಲಕ ಎರಡು ಬಾರಿ ವಾಗ್ದಂಡನೆ ಎದುರಿಸಿದ ಮೊದಲ ಯುಎಸ್ ಅಧ್ಯಕ್ಷ ಎಂಬ ಅಪಕೀರ್ತಿಗೆ ಟ್ರಂಪ್ ಒಳಗಾಗಿದ್ದಾರೆ.
 

Stay up to date on all the latest ಅಂತಾರಾಷ್ಟ್ರೀಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp