ಬಾಲಾಕೋಟ್ ದಾಳಿ ಕುರಿತು ಅರ್ನಬ್ ವಾಟ್ಸ್ ಆಪ್ ಚಾಟ್ ಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆಕ್ರೋಶ
2019ರ ಬಾಲಾಕೋಟ್ ವಾಯು ದಾಳಿಗೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿಯ ವಾಟ್ಸ್ಆಪ್ ಚಾಟ್ಗಳು ಲೀಕ್ ಆಗಿದ್ದು, ಈ ಕುರಿತು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಸೋಮವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Published: 19th January 2021 03:23 PM | Last Updated: 19th January 2021 03:53 PM | A+A A-

ಅರ್ನಬ್ ಗೋಸ್ವಾಮಿ - ಇಮ್ರಾನ್ ಖಾನ್
ಇಸ್ಲಾಮಾಬಾದ್: 2019ರ ಬಾಲಾಕೋಟ್ ವಾಯು ದಾಳಿಗೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿಯ ವಾಟ್ಸ್ಆಪ್ ಚಾಟ್ಗಳು ಲೀಕ್ ಆಗಿದ್ದು, ಈ ಕುರಿತು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಸೋಮವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಲಾಕೋಟ್ ಮೇಲಿನ ದಾಳಿ ಬಿಜೆಪಿ ಚುನಾವಣಾ ಲಾಭಕ್ಕಾಗಿ ನಡೆಸಿದ ತೋರಿಕೆಯ ದಾಳಿಯಾಗಿತ್ತು. ಇದು ಪ್ರಧಾನಿ ನರೇಂದ್ರ ಮೋದಿ ಮರು ಆಯ್ಕೆಯ ಅವಕಾಶಗಳನ್ನು ಹೆಚ್ಚಿಸಲು ಮಾಡಿದ ದಾಳಿ ಎಂದು ಇರ್ಮಾನ್ ಖಾನ್ ಆರೋಪಿಸಿದ್ದಾರೆ. ಅಲ್ಲದೆ ಭಾರತ ಬೇಜವಾಬ್ದಾರಿಯುತ ಸೇನಾ ಕಾರ್ಯಾಚಾರಣೆಯನ್ನು ನಿಲ್ಲಿಸಬೇಕು ಎಂದು ಜಾಗತಿಕ ಸಮುದಾಯವನ್ನು ಒತ್ತಾಯಿಸಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದ ಭಾರತದ ಫ್ಯಾಶಿಸ್ಟ್ ಸರ್ಕಾರ ಬಾಲಾಕೋಟ್ ಬಿಕ್ಕಟ್ಟನ್ನು ತನ್ನ ಚುನಾವಣಾ ಲಾಭಕ್ಕಾಗಿ ಬಳಸಿಕೊಂಡಿತು ಎಂದು ಪಾಕ್ ಪ್ರಧಾನಿ ಹೇಳಿದ್ದಾರೆ.
ಟಿಆರ್ಪಿ ಪ್ರಕರಣ ತನಿಖೆ ವೇಳೆ ಮುಂಬೈ ಪೊಲೀಸರು ಕಲೆ ಹಾಕಿದ್ದ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಹಾಗೂ ಮಾಜಿ ಬಾರ್ಕ್ ಸಿಇಒ ಪಾರ್ಥೋ ದಾಸ್ ಗುಪ್ತಾ ನಡುವಿನ 500 ಪುಟಗಳ ವಾಟ್ಸಾಪ್ ಚಾಟ್ ಸೋಶಿಯಲ್ ಮೀಡಿಯಾದಲ್ಲಿ ಸೋರಿಕೆಯಾಗಿದ್ದು, ಇವುಗಳಲ್ಲಿ ಫೆ.23ರಂದು ನಡೆದಿದ್ದ ಚಾಟ್ನಲ್ಲಿ ದೊಡ್ಡ ವೈಮಾನಿಕ ದಾಳಿ ನಡೆಯಬಹುದು ಎಂಬ ಬಗ್ಗೆ ಉಲ್ಲೇಖಿಸಲಾಗಿತ್ತು. ಇಬ್ಬರ ನಡುವಿನ ಈ ಸಂಭಾಷಣೆ ಬಾಲಾಕೋಟ್ ವೈಮಾನಿಕ ದಾಳಿ ನಡೆಯುವುದಕ್ಕೂ ಮೂರು ದಿನಗಳ ಮುನ್ನವೇ ನಡೆದಿದ್ದು, ಸದ್ಯ ಇದೇ ವಿಚಾರವನ್ನಿಟ್ಟುಕೊಂಡು ಪಾಕಿಸ್ತಾನ ಭಾರತದ ವಿರುದ್ಧ ತನ್ನ ಅಸ್ತ್ರ ಪ್ರಯೋಗಿಸಿದೆ.