ಇರಾಕ್: ಬಾಗ್ದಾದ್ನಲ್ಲಿ ಅವಳಿ ಆತ್ಮಾಹುತಿ ಬಾಂಬ್ ದಾಳಿ, ಕನಿಷ್ಠ 28 ಮಂದಿ ಸಾವು
ಇರಾಕ್ ರಾಜಧಾನಿ ಬಾಗ್ದಾದ್ನಲ್ಲಿ ಗುರುವಾರ ನಡೆದ ಅವಳಿ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 28 ಮಂದಿ ಸಾವನ್ನಪ್ಪಿದ್ದು, 73 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Published: 21st January 2021 05:44 PM | Last Updated: 21st January 2021 05:44 PM | A+A A-

ಸಾಂದರ್ಭಿಕ ಚಿತ್ರ
ಬಾಗ್ದಾದ್: ಇರಾಕ್ ರಾಜಧಾನಿ ಬಾಗ್ದಾದ್ನಲ್ಲಿ ಗುರುವಾರ ನಡೆದ ಅವಳಿ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 28 ಮಂದಿ ಸಾವನ್ನಪ್ಪಿದ್ದು, 73 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆ ಬಾಗ್ದಾದ್ನ ಕೇಂದ್ರ ವಲಯದ ಬಾಬ್ ಅಲ್ ಶಾರ್ಕಿಯಲ್ಲಿ ನಡೆದಿದೆ ಎಂದು ಭದ್ರತಾ ಮೂಲವನ್ನು ಉಲ್ಲೇಖಿಸಿ ಅಲ್ ಸುಮರಿಯಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಕೇಂದ್ರ ಬಾಗ್ದಾದ್ನ ವಾಣಿಜ್ಯ ಕೇಂದ್ರದ ಬಳಿ ಎರಡು ಕಡೆ ಸ್ಫೋಟಗಳು ಸಂಭವಿಸಿವೆ. ಇದು ಆತ್ಮಾಹುತಿ ದಳದವರು ಮಾಡಿರುವ ಸ್ಫೋಟ ಎಂದು ಇರಾಕ್ ಸೇನೆ ತಿಳಿಸಿದೆ.
ದಾಳಿಯಲ್ಲಿ ಕನಿಷ್ಠ 28 ಜನರು ಸಾವನ್ನಪ್ಪಿದ್ದಾರೆ ಮತ್ತು 73 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಕೆಲವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಇರಾಕ್ ಸೇನೆ ತಿಳಿಸಿದೆ.
ಇದುವರೆಗೂ ಯಾವ ಉಗ್ರ ಸಂಘಟನೆಯೂ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ.