ಮೆಕ್ಸಿಕನ್ ಅಧ್ಯಕ್ಷರಿಗೂ ಅಮರಿಕೊಂಡ ಕೊರೋನಾ: ಶೀಘ್ರಗತಿಯಲ್ಲಿ ಗುಣಮುಖರಾಗುವಂತೆ ಪ್ರಧಾನಿ ಮೋದಿ ಶುಭ ಹಾರೈಕೆ
ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಅವರಿಗೂ ಕೊರೋನ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಶೀಘ್ರಗತಿಯಲ್ಲಿ ಗುಣಮುಖರಾಗುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭ ಹಾರೈಸಿದ್ದಾರೆ.
Published: 26th January 2021 08:46 AM | Last Updated: 26th January 2021 08:46 AM | A+A A-

ಪ್ರಧಾನಿ ಮೋದಿ
ಮಾಸ್ಕೋ: ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಅವರಿಗೂ ಕೊರೋನ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಶೀಘ್ರಗತಿಯಲ್ಲಿ ಗುಣಮುಖರಾಗುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭ ಹಾರೈಸಿದ್ದಾರೆ.
ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಅವರಿಗೆ ಕೊರೋನಾ ಸೋಂಕಿನ ಸೌಮ್ಯ ರೋಗಲಕ್ಷಣಗಳು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.
ಕೋವಿಡ್ 19 ಸೋಂಕಿಗೆ ಒಳಗಾಗಿದ್ದೇನೆ ಎಂದು ತಿಳಿಸಲು ವಿಷಾದಿಸುವೆ ಎಂದು ಅವರು ಸಾಮಾಜಿಕ ಜಾಲ ತಾಣದ ಮೂಲಕ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಮಾಹಿತಿ ಬಹಿರಂಗಪಡಿಸಿದ್ದಾರೆ.
ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಬೇಸರ ತಂದಿದೆ. ಒಬ್ರಡಾರ್ ಅವರು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆಂದು ಪ್ರಧಾನಿ ಮೋದಿಯವರು ಹೇಳಿದ್ದಾರೆ.