ಪಿಒಕೆಯಲ್ಲಿ ಮೋದಿ, ಆರ್'ಎಸ್ಎಸ್ ವಿರುದ್ಧ ಇಮ್ರಾನ್ ಖಾನ್ ವಾಗ್ದಾಳಿ: ಕಾಶ್ಮೀರದ ರಾಯಭಾರಿ ಎಂದು ಸ್ವತಃ ಬಿಂಬಿಸಿಕೊಂಡ ಪಾಕ್ ಪ್ರಧಾನಿ

ಪಾಕಿಸ್ತಾನ ಆಕ್ರಮಿಕ ಕಾಶ್ಮೀರದಲ್ಲಿ ಚುನಾವಣೆ ಪ್ರಚಾರ ನಡೆಸಿರುವ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್'ಎಸ್ಎಸ್) ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.
ಪಾಕ್ ಪ್ರಧಾನಿ ಇಮ್ರಾನ್ ಖಾನ್
ಪಾಕ್ ಪ್ರಧಾನಿ ಇಮ್ರಾನ್ ಖಾನ್

ಇಸ್ಲಾಮಾಬಾದ್; ಪಾಕಿಸ್ತಾನ ಆಕ್ರಮಿಕ ಕಾಶ್ಮೀರದಲ್ಲಿ ಚುನಾವಣೆ ಪ್ರಚಾರ ನಡೆಸಿರುವ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್'ಎಸ್ಎಸ್) ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಅಲ್ಲದೆ, ಸ್ವತಃ ತಮ್ಮನ್ನು ತಾವು ಕಾಶ್ಮೀರದ ರಾಯಭಾರಿ ಎಂದು ಬಿಂಬಿಸಿಕೊಂಡಿದ್ದಾರೆ. 

ಈ ಕುರಿತು ಡಾನ್ ಪತ್ರಿಕೆ ವರದಿ ಮಾಡಿದ್ದು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಿದ್ಧಾಂತವು ಭಾರತಕ್ಕೆ ದೊಡ್ಡ ಅಪಾಯವನ್ನುಂಟು ಮಾಡಿದೆ. ಏಕೆಂದರೆ ಅದು ಯಾರನ್ನೂ ಸಮಾನ ನಾಗರೀಕರೆಂದು ಪರಿಗಣಿಸುತ್ತಿಲ್ಲ. ಕೇವಲ ಮುಸ್ಲಿಮರನ್ನು ಮಾತ್ರವಲ್ಲ, ಸಿಖ್ಖರು, ಕ್ರಿಶ್ಚಿಯನ್ನರು ಮತ್ತು ಪರಿಶಿಷ್ಟ ಜಾತಿಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆಂದು ವರದಿ ಮಾಡಿದೆ. 

ಇದೇ ವೇಳೆ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370 ರದ್ದು ಪಡಿಸಿದ ಮೋದಿ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಾರೆ. 2019ರ ಆಗಸ್ಟ್ 5ರ ಬಳಿಕ ಕಾಶ್ಮೀರದಲ್ಲಿ ದೌರ್ಜನ್ಯ ಹೆಚ್ಚಾಗಿದೆ ಎಂದು ಹೇಳಿದ್ದಾರೆ. 

ಈ ವೇಳೆ ತಮ್ಮನ್ನು ತಾವು ಕಾಶ್ಮೀರದ ರಾಯಭಾರಿ ಎಂದು ಬಿಂಬಿಸಿಕೊಂಡಿರುವ ಇಮ್ರಾನ್ ಖಾನ್, ಕಾಶ್ಮೀರಿಗರ ಸಂಕಷ್ಟಗಳೊಂದಿಗೆ ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಪಾಕಿಸ್ತಾನ ನಿಲ್ಲಲಿದೆ ಎಂದು ತಿಳಿಸಿದ್ದಾರೆ. 

ಖುರಾನ್'ನ ವಾಕ್ಯವೊಂದನ್ನು ಉಲ್ಲೇಖಿಸಿ ಮಾತನಾಡಿರುವ ಅವರು, ಇತರೆ ರಾಷ್ಟ್ರಗಳಲ್ಲಿರುವ ಪಾಕಿಸ್ತಾನದ ರಾಯಭಾರಿಗಳ ಮೂಲಕ ಕಾಶ್ಮೀರಿಗರ ಸಂಕಷ್ಟವನ್ನು ವಿಶ್ವಕ್ಕೆ ತಿಳಿಸಲಾಗುತ್ತದೆ ಎಂದು ಹೇಳಿದ್ದಾರೆ. 

ಪಾಕಿಸ್ತಾನ ಆಕ್ರಮಿಕ ಕಾಶ್ಮೀರದಲ್ಲಿ ಜುಲೈ.25ರಿಂದ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪಿಒಕೆಯಲ್ಲಿ ಚುನಾವಣಾ ಪ್ರಚಾರಗಳು ಭರದಿಂದ ಸಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com