ರಾಯಭಾರಿ ಮಗಳ ಅಪರಹಣ: ಜಾಗತಿಕ ಮಟ್ಟದಲ್ಲಿ ಪಾಕ್ ಗೆ ಮುಖಭಂಗ; ರಾಯಭಾರಿ, ಹಿರಿಯ ಅಧಿಕಾರಿಗಳ ವಾಪಸ್ ಕರೆಸಿಕೊಂಡ ಆಫ್ಘಾನ್ ಸರ್ಕಾರ

ಆಫ್ಘಾನಿಸ್ತಾನ ರಾಯಭಾರಿ ಮಗಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪಾಕಿಸ್ತಾನ ಸರ್ಕಾರ ಜಾಗತಿಕವಾಗಿ ತೀವ್ರ ಮುಖಭಂಗ ಅನುಭವಿಸುವಂತಾಗಿದ್ದು, ಆಫ್ಘಾನಿಸ್ತಾನ ಸರ್ಕಾರ ಪಾಕ್ ನಲ್ಲಿನ ತನ್ನ ರಾಯಭಾರಿ ಮತ್ತು ಹಿರಿಯ ಅಧಿಕಾರಿಗಳನ್ನು ವಾಪಸ್ ಕರೆಸಿಕೊಂಡಿದೆ.

Published: 19th July 2021 10:28 AM  |   Last Updated: 19th July 2021 01:58 PM   |  A+A-


Afghan envoy

ಆಫ್ಘಾನಿಸ್ತಾನ-ಪಾಕಿಸ್ತಾನ

Posted By : Srinivasamurthy VN
Source : PTI

ಇಸ್ಲಾಮಾಬಾದ್: ಆಫ್ಘಾನಿಸ್ತಾನ ರಾಯಭಾರಿ ಮಗಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪಾಕಿಸ್ತಾನ ಸರ್ಕಾರ ಜಾಗತಿಕವಾಗಿ ತೀವ್ರ ಮುಖಭಂಗ ಅನುಭವಿಸುವಂತಾಗಿದ್ದು, ಆಫ್ಘಾನಿಸ್ತಾನ ಸರ್ಕಾರ ಪಾಕ್ ನಲ್ಲಿನ ತನ್ನ ರಾಯಭಾರಿ ಮತ್ತು ಹಿರಿಯ ಅಧಿಕಾರಿಗಳನ್ನು ವಾಪಸ್ ಕರೆಸಿಕೊಂಡಿದೆ.

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಎದುರಾಗಿದ್ದು, ತನ್ನ ರಾಯಭಾರಿಯ ಮಗಳನ್ನು ಅಪಹರಿಸಿ ಹಿಂಸಿಸಿದ ನಂತರ ಇಸ್ಲಾಮಾಬಾದ್‌ನಿಂದ ರಾಯಭಾರಿ ಮತ್ತು ಇತರ ಹಿರಿಯ ಸಿಬ್ಬಂದಿಯನ್ನು ಹಿಂತೆಗೆದುಕೊಳ್ಳುವುದಾಗಿ ಆಫ್ಘಾನಿಸ್ತಾನ ಸರ್ಕಾರ ಘೋಷಿಸಿದೆ. 

'ಪಾಕಿಸ್ತಾನದಲ್ಲಿ ಅಫ್ಘಾನ್ ರಾಯಭಾರಿಯ ಮಗಳನ್ನು ಅಪಹರಿಸಿದ ನಂತರ, ಅಪಹರಣದ ದುಷ್ಕರ್ಮಿಗಳ ಬಂಧನ ಮತ್ತು ವಿಚಾರಣೆ ಸೇರಿದಂತೆ ಎಲ್ಲಾ ಭದ್ರತಾ ಬೆದರಿಕೆಗಳನ್ನು ಪರಿಹರಿಸುವವರೆಗೆ ಆಫ್ಘಾನಿಸ್ತಾನದ ರಾಯಭಾರಿ ಮತ್ತು ಪಾಕಿಸ್ತಾನದ ಹಿರಿಯ ರಾಜತಾಂತ್ರಿಕರನ್ನು ಆಫ್ಘನ್ ಸರ್ಕಾರ ವಾಪಸ್ ಕರೆಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅಫ್ಘಾನ್ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಅಂತೆಯೇ ಪಾಕಿಸ್ತಾನಕ್ಕೆ ಅಫ್ಘನ್ ನಿಯೋಗವು ಶೀಘ್ರದಲ್ಲೇ ಭೇಟಿ ನೀಡಲಿದ್ದು, ಈ ಪ್ರಕರಣ ಮತ್ತು ಎಲ್ಲಾ ಸಂಬಂಧಿತ ಸಮಸ್ಯೆಗಳನ್ನು' ನಿರ್ಣಯಿಸಲು ಮತ್ತು ಅನುಸರಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದೆ.

'ಇಸ್ಲಾಮಾಬಾದ್‌ನಲ್ಲಿ ಶುಕ್ರವಾರ ಅಂದರೆ ಜುಲೈ 16ರಂದು ಅಫ್ಘಾನಿಸ್ತಾನದ ರಾಯಭಾರಿಯ ಮಗಳಾದ ಸಿಲ್‌ಸಿಲಾ ಅಲಿಖಿಲ್ ಅವರನ್ನು ಅಪಹರಣ ಮಾಡಲಾಗಿದೆ. ಅವರು ಬಾಡಿಗೆ ವಾಹನದಲ್ಲಿ ತಮ್ಮ ಮನೆಗೆ ತೆರಳುತ್ತಿದ್ದ ಮಾರ್ಗಮಧ್ಯೆ ಅಪರಿಚಿತರಿಂದ ಕೆಲ ಗಂಟೆಗಳ ಕಾಲ ಅಪಹರಣಕ್ಕೊಳಗಾಗಿದ್ದಾರೆ. ನಂತರ ಸಿಲ್‌ಸಿಲಾ ಅವರಿಗೆ ತೀವ್ರತರನಾದ ಚಿತ್ರಹಿಂಸೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಆದರೆ, ಅಪಹರಣದ ವಿವರಗಳನ್ನು ಹಂಚಿಕೊಂಡಿಲ್ಲ. ಅಪಹರಣಕಾರರಿಂದ ಬಿಡುಗಡೆ ಹೊಂದಿದ ಬಳಿಕ ಸಿಲ್‌ಸಿಲಾ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


Stay up to date on all the latest ಅಂತಾರಾಷ್ಟ್ರೀಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp