ಪಿಒಕೆ ಚುನಾವಣೆ: ಇಮ್ರಾನ್ ಖಾನ್‌ ನೇತೃತ್ವದ ಪಕ್ಷಕ್ಕೆ ಗೆಲುವು

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ಪಾಕ್ ಪ್ರಧಾನಿ ಇಮ್ರಾನ್‌ ಖಾನ್‌ ನೇತೃತ್ವದ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷವು ಭರ್ಜರಿ ಜಯಭೇರಿ ಭಾರಿಸಿ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ.
ಇಮ್ರಾನ್ ಖಾನ್
ಇಮ್ರಾನ್ ಖಾನ್

ಇಸ್ಲಾಮಾಬಾದ್‌: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ಪಾಕ್ ಪ್ರಧಾನಿ ಇಮ್ರಾನ್‌ ಖಾನ್‌ ನೇತೃತ್ವದ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷವು ಭರ್ಜರಿ ಜಯಭೇರಿ ಭಾರಿಸಿ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ.

ಆ ಮೂಲಕ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ. ಸ್ಥಳೀಯ ಸುದ್ದಿವಾಹಿನಿಗಳು ವರದಿ ಮಾಡಿರುವಂತೆ, 'ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಿಟಿಐ ಪಕ್ಷವು 23 ಸ್ಥಾನಗಳನ್ನು ಗೆದ್ದರೆ, ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಪಾಕಿಸ್ತಾನ ಮುಸ್ಲಿಂ  ಲೀಗ್-ನವಾಜ್ (ಪಿಎಂಎಲ್-ಎನ್) 6 ಸ್ಥಾನಗಳಲ್ಲಿ ತನ್ನದಾಗಿಸಿಕೊಂಡಿದೆ. ಇದಲ್ಲದೆ ಮುಸ್ಲಿಂ ಕಾನ್ಫರೆನ್ಸ್ ‌(ಎಂಸಿ), ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್‌ ಪಾರ್ಟಿ(ಜೆಕೆಪಿಪಿ) ತಲಾ ಒಂದು ಸ್ಥಾನವನ್ನು ಗೆದ್ದಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

ಗೆಲುವಿನ ಸಂಭ್ರಮದ ನಡುವೆಯೇ ಚುನಾವಣಾ ವಂಚನೆ ಆರೋಪ
ಈ ಚುನಾವಣೆಯಲ್ಲಿ ವಂಚನೆ ನಡೆದಿದೆ. ಇದಕ್ಕೆ ಸಾಕ್ಷ್ಯಾಧಾರಗಳು ಇವೆ ಎಂದು ಪಿಪಿಪಿಯ ಉಪಾಧ್ಯಕ್ಷೆ ಶೆರಿ ರೆಹಮಾನ್‌ ದೂರಿದ್ದಾರೆ. ಮತದಾನದ ವೇಳೆ ಪಿಟಿಐ ಕಾರ್ಯಕರ್ತರು ಪಿಪಿಪಿ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ. ಹಲವಾರು ಮತಗಟ್ಟೆಗಳಲ್ಲಿ ಮತದಾರರ ಪಟ್ಟಿಯಲ್ಲಿ ವ್ಯತ್ಯಾಸಗಳಿದ್ದವು ಎಂದು  ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com