ಪಾಕ್ ನಲ್ಲಿ 1 ಕೋಟಿ ಕೋವಿಡ್ ಲಸಿಕೆ ನೀಡಿಕೆ; ಮೂರನೇ ಅಲೆ ನಿಯಂತ್ರಣದಲ್ಲಿ!

ಕೊರೋನಾ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನ ಇಂದಿಗೆ 10 ಮಿಲಿಯನ್(1 ಕೋಟಿ) ಕೋವಿಡ್ ಲಸಿಕೆ ನೀಡುವುದನ್ನು ಪೂರ್ಣಗೊಳಿಸಿದೆ. ಇನ್ನು ಮೂರನೇ ಅಲೆಯನ್ನು ಯಶಸ್ವಿಯಾಗಿ ನಿಭಾಯಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಇಸ್ಲಾಮಾಬಾದ್: ಕೊರೋನಾ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನ ಇಂದಿಗೆ 10 ಮಿಲಿಯನ್(1 ಕೋಟಿ) ಕೋವಿಡ್ ಲಸಿಕೆ ನೀಡುವುದನ್ನು ಪೂರ್ಣಗೊಳಿಸಿದೆ. ಇನ್ನು ಮೂರನೇ ಅಲೆಯನ್ನು ಯಶಸ್ವಿಯಾಗಿ ನಿಭಾಯಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪಾಕಿಸ್ತಾನ ಕೊರೋನಾ ಮೂರನೇ ಅಲೆಗೆ ಸಾಕ್ಷಿಯಾಗಿದೆ. ದೇಶಾದ್ಯಂತ ಕೊರೋನಾವೈರಸ್ ಸೋಂಕಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗುತ್ತಿದ್ದು ಎಲ್ಲಾ ವಯೋಮಾನದವರ ಸಾವಿಗೆ ಕಾರಣವಾಗಿದೆ. 

ದೇಶದಲ್ಲಿ ಸಾಂಕ್ರಾಮಿಕ ರೋಗವನ್ನು ನಿಭಾಯಿಸುತ್ತಿರುವ ರಾಷ್ಟ್ರೀಯ ಕಮಾಂಡ್ ಮತ್ತು ಆಪರೇಷನ್ ಸೆಂಟರ್(ಎನ್‌ಸಿಒಸಿ) ಮುಖ್ಯಸ್ಥ, ಯೋಜನಾ ಸಚಿವ ಅಸಾದ್ ಉಮರ್ 10 ಮಿಲಿಯನ್ ಡೋಸ್ ಲಸಿಕೆ ನೀಡುವಲ್ಲಿ ಯಶಸ್ಸು ಸಾಧಿಸಿರುವುದಾಗಿ ಘೋಷಿಸಿದರು. ಅಲ್ಲದೆ 70 ಮಿಲಿಯನ್ ನಾಗರಿಕರಿಗೆ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ. "ಈ ವರ್ಷದ ಅಂತ್ಯದ ವೇಳೆಗೆ 70 ಮಿಲಿಯನ್ ಜನರಿಗೆ ಲಸಿಕೆ ನೀಡುವುದು ನಮ್ಮ ಗುರಿ" ಎಂದರು.

ಮುಂಚೂಣಿಯ ಆರೋಗ್ಯ ಕಾರ್ಯಕರ್ತರೊಂದಿಗೆ ಫೆಬ್ರವರಿ 2ರಂದು ಪಾಕಿಸ್ತಾನ ತನ್ನ ವ್ಯಾಕ್ಸಿನೇಷನ್ ಡ್ರೈವ್ ಅನ್ನು ಆರಂಭಿಸಿತ್ತು. ನಂತರ 18 ವರ್ಷ ಮತ್ತು ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಪ್ರಕ್ರಿಯೆ ಕ್ರಮೇಣ ಹೆಚ್ಚಾಯಿತು. ಎಂದರು. 

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೇವಲ 1,118 ಹೊಸ ಪ್ರಕರಣಗಳು ಪತ್ತೆಯಾಗಿವೆ.ಇದರೊಂದಿಗೆ ಸೋಂಕಿತರ ಸಂಖ್ಯೆ 936,131ಕ್ಕೆ ಏರಿಕೆಯಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಸೇವೆಗಳ ಸಚಿವಾಲಯ ವರದಿ ಮಾಡಿದೆ.

ಕಳೆದ 24 ಗಂಟೆಗಳಲ್ಲಿ ಕನಿಷ್ಠ 77 ರೋಗಿಗಳು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 21,453ಕ್ಕೆ ತಲುಪಿದೆ. ಇಲ್ಲಿಯವರೆಗೆ 869,691 ಜನರು ಚೇತರಿಸಿಕೊಂಡಿದ್ದಾರೆ. ಸಕ್ರಿಯ ರೋಗಿಗಳ ಸಂಖ್ಯೆ 44,987 ರಷ್ಟಿದ್ದು ಸಕಾರಾತ್ಮಕ ದರ 2.55ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com