ಚೀನಾದಲ್ಲಿ ಅನಿಲ ಸ್ಫೋಟ: 11 ಸಾವು, 37 ಜನರಿಗೆ ಗಾಯ

ಮಧ್ಯ ಚೀನಾದ ಹುಬೈ ಪ್ರಾಂತ್ಯದಲ್ಲಿ ಭಾನುವಾರ ಸಂಭವಿಸಿದ ಭಾರಿ ಅನಿಲ ಸ್ಫೋಟದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು 37 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮಾಧ್ಯಮ ವರದಿ ಮಾಡಿದೆ.
ಬಾಂಬ್ ಸ್ಫೋಟ ಸಂಭವಿಸಿದ ಸ್ಥಳ
ಬಾಂಬ್ ಸ್ಫೋಟ ಸಂಭವಿಸಿದ ಸ್ಥಳ

ಬೀಜಿಂಗ್:  ಮಧ್ಯ ಚೀನಾದ ಹುಬೈ ಪ್ರಾಂತ್ಯದಲ್ಲಿ ಭಾನುವಾರ ಸಂಭವಿಸಿದ ಭಾರಿ ಅನಿಲ ಸ್ಫೋಟದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು 37 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮಾಧ್ಯಮ ವರದಿ ಮಾಡಿದೆ.

ಶಿಯಾನ್ ಜಿಲ್ಲೆಯ ಶಿಯಾನ್ ತರಕಾರಿ ಮಾರುಕಟ್ಟೆ ಬಳಿ ಸ್ಥಳೀಯ ಕಾಲಮಾನ 6.30 ವೇಳೆಗೆ ಸ್ಫೋಟ ಸಂಭವಿಸಿದ್ದು, ಅನೇಕ ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಸಿಜಿಟಿನ್ ಟಿವಿ ವರದಿ ಮಾಡಿದೆ. 

ಅನೇಕ ನಿವಾಸಿಗಳು ಮಾರುಕಟ್ಟೆಯಲ್ಲಿ ತರಕಾರಿಗಳನ್ನು ಖರೀದಿಸುತ್ತಿದ್ದಾಗ, ಕೆಲವರು ಉಪಹಾರ ಸೇವಿಸುತ್ತಿದ್ದಾಗ ಶಿಯಾನ್‌ ನ ಯಾನ್ಹು ಮಾರುಕಟ್ಟೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಹಾಂಗ್ ಕಾಂಗ್ ಮೂಲದ ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. 

ಘಟನೆ ನಂತರ ಅನೇಕ ಮಂದಿ ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆಯಿದೆ ಎಂದು ನಗರದ ಮುನ್ಸಿಪಲ್ ಅಧಿಕಾರಿಗಳು ಹೇಳಿದ್ದಾರೆ. ಕಟ್ಟಡ ಅವಶೇಷಗಳನ್ನು ತೆರವುಗೊಳಿಸುವಲ್ಲಿ ರಕ್ಷಣಾ ಸಿಬ್ಬಂದಿಗಳು ಮುಂದಾಗಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವ ಹಲವು ಫೋಟೋಗಳಿಂದ ತಿಳಿದುಬಂದಿದೆ. ಘಟನೆ ಬಗ್ಗೆ ತನಿಖೆ ಮುಂದುವರೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com