ಲಕ್ಷದ್ವೀಪದ ನಿರ್ಮಾಪಕಿ ವಿರುದ್ಧ ದೇಶದ್ರೋಹದ ಆರೋಪದಡಿ ಎಫ್ಐಆರ್ ವಿರೋಧಿಸಿ ಬಿಜೆಪಿ ನಾಯಕರ ರಾಜೀನಾಮೆ 

ನಿರ್ಮಾಪಕಿ ಆಯೆಷಾ ಸುಲ್ತಾನಾ ವಿರುದ್ಧ ಲಕ್ಷದ್ವೀಪ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿರುವುದನ್ನು ವಿರೋಧಿಸಿ ಬಿಜೆಪಿ ನಾಯಕ ಅಬ್ದುಲ್ ಹಮೀದ್ ಮುಲ್ಲಿಪುಳ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. 
ಬಿಜೆಪಿ
ಬಿಜೆಪಿ

ಲಕ್ಷದ್ವೀಪ: ನಿರ್ಮಾಪಕಿ ಆಯೆಷಾ ಸುಲ್ತಾನಾ ವಿರುದ್ಧ ಲಕ್ಷದ್ವೀಪ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿರುವುದನ್ನು ವಿರೋಧಿಸಿ ಬಿಜೆಪಿ ನಾಯಕ ಅಬ್ದುಲ್ ಹಮೀದ್ ಮುಲ್ಲಿಪುಳ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. 

ಮುಲ್ಲಿಪುಳ ಜೊತೆಗೆ 14 ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪಕ್ಷ ತೊರೆದಿದ್ದಾರೆ. ಲಕ್ಷದ್ವೀಪ ಬಿಜೆಪಿ ಅಧ್ಯಕ್ಷ ಸಿ. ಅಬ್ದುಲ್ ಖಾದರ್ ಹಾಜಿ ಲಕ್ಷದ್ವೀಪದ ಚೆತಿಯಾತ್ ದ್ವೀಪ ನಿವಾಸಿ ಆಯೆಷಾ ಸುಲ್ತಾನಾ ವಿರುದ್ಧ ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್-19 ಬಗ್ಗೆ ಸುಳ್ಳು ಸುದ್ದಿ ಹರಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು. 

ಈ ದೂರಿನ ಅನ್ವಯ ಪೊಲೀಸರು  ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 124ಎ (ದೇಶದ್ರೋಹ) ಮತ್ತು 153 ಬಿ (ದ್ವೇಷಪೂರಿತ ಭಾಷಣ) ಅಡಿಯಲ್ಲಿ ನಿರ್ಮಾಪಕಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. 

ಮಲಯಾಳಂ ಟಿ.ವಿ ಚಾನೆಲ್‌ನಲ್ಲಿ ನಡೆದ ಚರ್ಚೆಯ ವೇಳೆ ಲಕ್ಷದ್ವೀಪದಲ್ಲಿ ಕೋವಿಡ್-19 ಹರಡಲು ಕೇಂದ್ರ ಸರ್ಕಾರವು ಜೈವಿಕ ಅಸ್ತ್ರಗಳನ್ನು ಬಳಸಿದೆ ಎಂದು ಆಯೆಷಾ ಆರೋಪಿಸಿದ್ದರು ಎಂಬ ಆರೋಪವಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com