ಕುಲಭೂಷಣ್ ಜಾಧವ್ ಪ್ರಕರಣದ ವಿಚಾರಣೆ ಅಕ್ಟೋಬರ್ 5ಕ್ಕೆ ಮುಂದೂಡಿದ ಪಾಕಿಸ್ತಾನ ಕೋರ್ಟ್

ಗೂಢಚಾರಿಕೆ ಆರೋಪದ ಮೇರೆಗೆ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್‌ ಜಾಧವ್‌ ಕುರಿತ ಪ್ರಕರಣದ ವಿಚಾರಣೆಯನ್ನು ಪಾಕಿಸ್ತಾನ ಹೈ ಕೋರ್ಟ್ ಅಕ್ಟೋಬರ್‌ 5ಕ್ಕೆ ಮುಂದೂಡಿದೆ ಎಂದು ತಿಳಿದುಬಂದಿದೆ,
ಕುಲಭೂಷಣ್ ಜಾದವ್
ಕುಲಭೂಷಣ್ ಜಾದವ್

ಇಸ್ಲಾಮಾಬಾದ್: ಗೂಢಚಾರಿಕೆ ಆರೋಪದ ಮೇರೆಗೆ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್‌ ಜಾಧವ್‌ ಕುರಿತ ಪ್ರಕರಣದ ವಿಚಾರಣೆಯನ್ನು ಪಾಕಿಸ್ತಾನ ಹೈ ಕೋರ್ಟ್ ಅಕ್ಟೋಬರ್‌ 5ಕ್ಕೆ ಮುಂದೂಡಿದೆ ಎಂದು ತಿಳಿದುಬಂದಿದೆ,

ಕುಲಭೂಷಣ್ ಜಾಧವ್ ಪರ ವಾದ ಮಂಡಿಸಲು ವಕೀಲರನ್ನು ನೇಮಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಇಸ್ಲಾಮಾಬಾದ್‌ ಹೈಕೋರ್ಟ್‌ ಅಕ್ಟೋಬರ್‌ 5ಕ್ಕೆ ಮುಂದೂಡಿದೆ, 

ಪಾಕಿಸ್ತಾನದ ಅಟಾರ್ನಿ ಜನರಲ್‌ ಖಾಲೀದ್‌ ಜಾವೇದ್‌ ಖಾನ್‌ ಅವರು ಕುಲಭೂಷಣ್ ಜಾದವ್‌ ಪರವಾಗಿ ವಕೀಲರನ್ನು ನೇಮಿಸುವಂತೆ ಕೋರಿ ಇಸ್ಲಾಮಾಬಾದ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಅಥರ್ ಮಿನಾಲಾ, ಅಮರ್‌ ಫಾರೂಕ್ ಮತ್ತು ಮಿಯಾಂಗುಲ್  ಹಸನ್ ಔರಂಗಜೇಬ್‌ ಅವರನ್ನೊಳಗೊಂಡ ಪೀಠವು, ಮೇ 7ರಂದು ನಡೆದ ವಿಚಾರಣೆ ವೇಳೆ ಜೂನ್‌ 15ರೊಳಗೆ ಜಾಧವ್‌ ಪರ ವಾದ ಮಂಡಿಸಲು ವಕೀಲರನ್ನು ನೇಮಿಸುವಂತೆ ಸೂಚಿಸಿತ್ತು.

ಅಂತೆಯೇ ಮುಂದಿನ ವಿಚಾರಣೆಯ ದಿನಾಂಕದಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಭಾರತೀಯ ಹೈಕಮಿಷನ್‌ನ ವಕೀಲರಿಗೆ ನ್ಯಾಯಾಲಯ ನೋಟಿಸ್ ಕೂಡ ಜಾರಿಗೊಳಿಸಿದೆ. 

‘ಈ ಸಂಬಂಧ ಅಕ್ಟೋಬರ್‌ 5ರಂದು ವಿಚಾರಣೆ ನಡೆಸುವುದಾಗಿ ಇಸ್ಲಾಮಾಬಾದ್‌ ಹೈಕೋರ್ಟ್‌(ಐಎಚ್‌ಸಿ) ಹೇಳಿದೆ. ಅಲ್ಲದೆ ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಭಾರತೀಯ ಹೈಕಮಿಷನ್‌ನ ವಕೀಲರಿಗೂ ನ್ಯಾಯಾಲಯ ನೋಟಿಸ್‌ ಜಾರಿ ಮಾಡಿದೆ’ ಎಂದು ತಿಳಿದುಬಂದಿದೆ.

ಈ ಹಿಂದೆ ಹೇಗ್ ಮೂಲದ ಅಂತಾರಾಷ್ಟ್ರೀಯ ನ್ಯಾಯಾಲಯ 2019 ರ ಜುಲೈನಲ್ಲಿ ಪಾಕಿಸ್ತಾನವು ಜಾಧವ್ ಅವರ ಅಪರಾಧ ಮತ್ತು ಶಿಕ್ಷೆಯ "ಪರಿಣಾಮಕಾರಿ ವಿಮರ್ಶೆ ಮತ್ತು ಮರುಪರಿಶೀಲನೆ"ಯನ್ನು ಕೈಗೊಳ್ಳಬೇಕು ಮತ್ತು ಹೆಚ್ಚಿನ ವಿಳಂಬವಿಲ್ಲದೆ ಭಾರತಕ್ಕೆ ರಾಯಭಾರ ಕಚೇರಿ ಸಂಪರ್ಕ  ನೀಡಬೇಕು ಎಂದು ತೀರ್ಪು ನೀಡಿತ್ತು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com