ನೇಪಾಳದಲ್ಲಿ ಮೇಘಸ್ಫೋಟದಿಂದಾಗಿ ದಿಢೀರ್ ಪ್ರವಾಹ: ಕನಿಷ್ಠ 7 ಮಂದಿ ಸಾವು; 3 ಭಾರತೀಯರು ಸೇರಿ ಹಲವರು ನಾಪತ್ತೆ

ನೆರೆಯ ನೇಪಾಳದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಮೇಘಸ್ಫೋಟದಿಂದಾಗಿ ಹಿನ್ನಲೆಯಲ್ಲಿ ದಿಢೀರ್ ಪ್ರವಾಹ ಉಂಟಾಗಿದ್ದು, ದುರಂತದಲ್ಲಿ 7 ಮಂದಿ ಸಾವನ್ನಪ್ಪಿ 3 ಭಾರತೀಯರೂ ಸೇರಿ ಹಲವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೇಪಾಳದಲ್ಲಿ ಪ್ರವಾಹ
ನೇಪಾಳದಲ್ಲಿ ಪ್ರವಾಹ

ಕಠ್ಮಂಡು: ನೆರೆಯ ನೇಪಾಳದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಮೇಘಸ್ಫೋಟದಿಂದಾಗಿ ಹಿನ್ನಲೆಯಲ್ಲಿ ದಿಢೀರ್ ಪ್ರವಾಹ ಉಂಟಾಗಿದ್ದು, ದುರಂತದಲ್ಲಿ 7 ಮಂದಿ ಸಾವನ್ನಪ್ಪಿ 3 ಭಾರತೀಯರೂ ಸೇರಿ ಹಲವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ನೇಪಾಳದ ಸಿಂಧುಪಾಲಚೋಕ್ ಪ್ರಾಂತ್ಯದಲ್ಲಿ ಪ್ರವಾಹ ಸಂಭಸಿದ್ದು, ಮೇಲಮ್ಚಿ ನದಿ ಉಕ್ಕಿ ಹರಿಯುತ್ತಿದೆ. ಈ ದುರಂತದಲ್ಲಿ  ಮೇಲಮ್ಚಿ ಟೌನ್ ನಲ್ಲಿ 200 ಮನೆಗಳು ಪ್ರವಾಹಕ್ಕೆ ಆಹುತಿಯಾಗಿದ್ದು, ವಿವಿಧ ದುರ್ಘಟನೆಗಳಲ್ಲಿ ಕನಿಷ್ಟ 7 ಮಂದಿ ಸಾವನ್ನಪ್ಪಿ, ಹಲವರು  ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಿನ್ನೆ ತಡರಾತ್ರಿ 7 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಕನಿಷ್ಠ 50 ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಎಲ್ಲರೂ ಇದೇ ಮೇಲಮ್ಚಿ ಕುಡಿಯುವ ನೀರು ಯೋಜನೆ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಎಂದು ತಿಳಿದುಬಂದಿದೆ. 

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಚಿವ ಶೇರ್ ಬಹದ್ದೂರ್ ತಮಂಗ್ ಅವರು ಮಾಹಿತಿ ನೀಡಿದ್ದು, ಮೆಲಮ್ಚಿ ಮತ್ತು ಇಂದ್ರಾವತಿ ನದಿಗಳ ಪ್ರವಾಹದಲ್ಲಿ 50 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ಮೆಲಮ್ಚಿ ಕುಡಿಯುವ ನೀರಿನ ಯೋಜನೆ, ಟಿಂಬು ಬಜಾರ್, ಚಾನೌಟೆ ಬಜಾರ್,  ತಲಮರಂಗ್ ಬಜಾರ್ ಮತ್ತು ಮೆಲಮ್ಚಿ ಬಜಾರ್‌ನಲ್ಲೂ ಅಣೆಕಟ್ಟಿಗೆ ಹಾನಿಯಾಗಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com