ಮುಂಬೈ ಭಯೋತ್ಪಾದಕ ದಾಳಿ ಮಾಸ್ಟರ್ ಮೈಂಡ್ ಹಫೀಸ್ ಸಯೀದ್ ಮನೆ ಎದುರು ಕಾರ್ ಬಾಂಬ್ ಸ್ಫೋಟ: ಮೂವರು ಸಾವು! 

ಮುಂಬೈ ಭಯೋತ್ಪಾದಕ ದಾಳಿ ಮಾಸ್ಟರ್ ಮೈಂಡ್ ಹಫೀಸ್ ಸಯೀದ್ ನ ಲಾಹೋರ್ ನಲ್ಲಿರುವ ಮನೆ ಎದುರು ಕಾರ್ ಬಾಂಬ್ ಸ್ಫೋಟ ನಡೆದಿದ್ದು ಮೂವರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 
ಲಾಹೋರ್ ನಲ್ಲಿ ಸಂಭವಿಸಿದ ಸ್ಫೋಟದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ
ಲಾಹೋರ್ ನಲ್ಲಿ ಸಂಭವಿಸಿದ ಸ್ಫೋಟದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ

ಲಾಹೋರ್: ಮುಂಬೈ ಭಯೋತ್ಪಾದಕ ದಾಳಿ ಮಾಸ್ಟರ್ ಮೈಂಡ್ ಹಫೀಸ್ ಸಯೀದ್ ನ ಲಾಹೋರ್ ನಲ್ಲಿರುವ ಮನೆ ಎದುರು ಕಾರ್ ಬಾಂಬ್ ಸ್ಫೋಟ ನಡೆದಿದ್ದು ಮೂವರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 

ಜೌಹಾರ್ ಟೌನ್ ನಲ್ಲಿರುವ ಬಿಒಆರ್ ಸೊಸೈಟಿಯಲ್ಲಿನ ಪೊಲೀಸ್ ಪಿಕೆಟ್ ನ ಬಳಿ ಸ್ಫೋಟ ಸಂಭವಿಸಿದೆ. ಪಂಜಾಬ್ ಪೊಲೀಸ್ ಮುಖ್ಯಸ್ಥ ಇನಾಮ್ ಘನಿ ಈ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸ್ ಪಿಕೆಟ್ ಇಲ್ಲದೇ ಇದ್ದಿದ್ದಲ್ಲಿ ಮತ್ತಷ್ಟು ಹಾನಿ ಸಂಭವಿಸುತ್ತಿತ್ತು ಎಂದು ಹೇಳಿದ್ದಾರೆ. 

ಕಾರ್ ನಲ್ಲಿ ಸ್ಫೋಟಕ ಸಾಮಗ್ರಿಗಳನ್ನು ಇರಿಸಲಾಗಿತ್ತು. ಪೊಲೀಸ್ ಚೌಕಿಯನ್ನು ದಾಟದ ಕಾರಣ ಕಡಿಮೆ ಹಾನಿ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಜಿನ್ನಾ ಆಸ್ಪತ್ರೆಗೆ ದಾಖಲಾಗಿದ್ದು, 6 ಮಂದಿಯ ಸ್ಥಿತಿ ಗಂಭೀರವಾಗಿದೆ.

ಭಯೋತ್ಪಾದನಾ ನಿಗ್ರಹ ಇಲಾಖೆ (ಸಿಟಿಡಿ) ಸ್ಥಳಕ್ಕೆ ತೆರಳಿದ್ದು, ಎಲ್ಲಾ ದೃಷ್ಟಿಯಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಘನಿ ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com