ಈಶಾನ್ಯ ಆಫ್ಘಾನಿಸ್ತಾನದಲ್ಲಿ ರಕ್ಷಣಾ ಪಡೆಗಳಿಂದ 30 ತಾಲಿಬಾನ್ ಉಗ್ರರ ಹತ್ಯೆ

ಆಫ್ಘಾನಿಸ್ತಾನದ ಈಶಾನ್ಯ ಪ್ರಾಂತ್ಯವಾದ ಕಪಿಸಾದಲ್ಲಿ ಆಫ್ಘಾನಿಸ್ತಾನ ರಕ್ಷಣಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಅಲ್-ಖೈದಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ  30 ತಾಲಿಬಾನ್ ಉಗ್ರರು ಹತರಾಗಿದ್ದಾರೆ

Published: 01st March 2021 05:35 PM  |   Last Updated: 02nd March 2021 12:47 PM   |  A+A-


terrorist

ಭಯೋತ್ಪಾದಕರು

Posted By : Srinivas Rao BV
Source : UNI

ಕಾಬೂಲ್: ಆಫ್ಘಾನಿಸ್ತಾನದ ಈಶಾನ್ಯ ಪ್ರಾಂತ್ಯವಾದ ಕಪಿಸಾದಲ್ಲಿ ಆಫ್ಘಾನಿಸ್ತಾನ ರಕ್ಷಣಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಅಲ್-ಖೈದಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ 16 ವ್ಯಕ್ತಿಗಳು ಸೇರಿದಂತೆ  ಸೇರಿದಂತೆ 30 ತಾಲಿಬಾನ್ ಉಗ್ರರು ಹತರಾಗಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಕಪಿಸಾದ ನಿಜ್ರಾಬ್ ಜಿಲ್ಲೆಯಲ್ಲಿ ಆಫ್ಘಾನಿಸ್ತಾನ ರಾಷ್ಟ್ರೀಯ ರಕ್ಷಣಾ ಪಡೆ ಮತ್ತು ಆಫ್ಘನ್ ರಾಷ್ಟ್ರೀಯ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿದ್ದವು.

ಕಾರ್ಯಾಚರಣೆಯಲ್ಲಿ ಉಗ್ರರ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ನಾಶಪಡಿಸಲಾಗಿದೆ. ಹಾಜಿಯಾನ್, ಖಲೀಫಾಗನ್, ಜಾಕಿರ್ ಖೇಲ್ ಕೊಚಕ್ ಮತ್ತು ಬಡಾಖೆಲ್ ಗ್ರಾಮಗಳಲ್ಲಿ ತಾಲಿಬಾನ್ ಉಗ್ರರನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದ್ದು, ಈ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು  ರಕ್ಷಣಾ ಸಚಿವಾಲಯ ತಿಳಿಸಿದೆ. 

Stay up to date on all the latest ಅಂತಾರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp