ಚೀನಾ ಲಸಿಕೆ ಪಡೆದ ನಂತರವೂ ಪಾಕ್ ಅಧ್ಯಕ್ಷರನ್ನು ಬಿಡದ ಕೋರೋನಾ ಸೋಂಕು!

ಕೊರೋನಾ ಲಸಿಕೆ ಹಾಕಿಸಿಕೊಂಡ ಮರುದಿನವೇ ಪಾಕಿಸ್ತಾನದ ಅಧ್ಯಕ್ಷ ಆರಿಫ್ ಅಲ್ವಿ ಅವರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

Published: 30th March 2021 01:22 PM  |   Last Updated: 30th March 2021 01:22 PM   |  A+A-


Arif Alvi

ಆರಿಫ್ ಅಲ್ವಿ

Posted By : Vishwanath S
Source : UNI

ಇಸ್ಲಾಮಾಬಾದ್: ಕೊರೋನಾ ಲಸಿಕೆ ಹಾಕಿಸಿಕೊಂಡ ಮರುದಿನವೇ ಪಾಕಿಸ್ತಾನದ ಅಧ್ಯಕ್ಷ ಆರಿಫ್ ಅಲ್ವಿ ಅವರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ತಮಗೆ ಕೊರೊನಾವೈರಸ್ ಸೋಂಕು ತಗುಲಿರುವ ಬಗ್ಗೆ ಸ್ವತಃ ಆರಿಫ್ ಅಲ್ವಿ ಅವರೇ ಟ್ವೀಟ್ ಮಾಡಿದ್ದಾರೆ. ನಾನು ಕೊವಿಡ್-19 ಲಸಿಕೆಯನ್ನು ಹಾಕಿಸಿಕೊಂಡಿದ್ದು, ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಯ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ ಎಂದು ತಮ್ಮ ಆರೋಗ್ಯದ ಬಗ್ಗೆ ಬರೆದುಕೊಂಡಿದ್ದಾರೆ.

"ನನಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಿಂದ ಗೊತ್ತಾಗಿದೆ. ಕೊವಿಡ್-19 ಸೋಂಕಿತರ ಮೇಲೆ ಅಲ್ಲಾನ ಕೃಪೆ ಇರುತ್ತದೆ. ಮೊದಲ ಡೋಸ್ ಲಸಿಕೆ ಹಾಕಿಸಿಕೊಂಡ ಸಂದರ್ಭದಲ್ಲಿ ರೋಗಿಗಳಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಸುವ ಪ್ರಕ್ರಿಯೆ ಆರಂಭವಾಗುವುದಿಲ್ಲ. ಎರಡನೇ ಡೋಸ್ ಲಸಿಕೆ ನಂತರದಲ್ಲಿ ಈ ಕ್ರಿಯೆ ಶುರುವಾಗಲಿದೆ. ದಯವಿಟ್ಟು ಕೊರೊನಾವೈರಸ್ ಬಗ್ಗೆ ಎಲ್ಲರೂ ಜಾಗೃತರಾಗಿರಿ ಎಂದು ಅಧ್ಯಕ್ಷರು ಟ್ವೀಟ್ ಮಾಡಿದ್ದಾರೆ.

ಇದೇ ತಿಂಗಳ ಆರಂಭದಲ್ಲಿ ಆರಿಫ್ ಅಲ್ವಿ ಮತ್ತು ಪತ್ನಿ ಸಮಿನಾ ಅಲ್ವ ಚೀನಾ ಲಸಿಕೆ ಸಿನೋಫಾರ್ಮ್ ಲಸಿಕೆ ಮೊದಲ ಡೋಸ್ ಪಡೆದುಕೊಂಡಿದ್ದರು.

Stay up to date on all the latest ಅಂತಾರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp