ಮಾತುಕತೆಗೆ ಪೂರಕ ವಾತಾವರಣ ನಿರ್ಮಿಸುವುದು ಮುಖ್ಯವಾಗಿದೆ: ಪ್ರಧಾನಿ ಮೋದಿ ಪತ್ರಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪ್ರತಿಕ್ರಿಯೆ

ಪಾಕಿಸ್ತಾನ ದಿನಕ್ಕೆ ಪತ್ರ ಬರೆದ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಕಾಶ್ಮೀರ ವಿವಾದ ಸೇರಿದಂತೆ ಎರಡೂ ದೇಶಗಳ ನಡುವಿನ ಎಲ್ಲಾ ವಿವಾದಗಳನ್ನು ಮಾತುಕತೆ ಮೂಲಕವೇ ಪರಿಹರಿಸಲು ಸಾಧ್ಯ ಎಂದು ಹೇಳಿದ್ದಾರೆ.

Published: 31st March 2021 12:18 PM  |   Last Updated: 31st March 2021 12:50 PM   |  A+A-


PM Narendra Modi and Pakistan PM Imran Khan(File photo)

ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್(ಸಂಗ್ರಹ ಚಿತ್ರ)

Posted By : Sumana Upadhyaya
Source : PTI

ನವದೆಹಲಿ: ಪಾಕಿಸ್ತಾನ ದಿನಕ್ಕೆ ಪತ್ರ ಬರೆದ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಕಾಶ್ಮೀರ ವಿವಾದ ಸೇರಿದಂತೆ ಎರಡೂ ದೇಶಗಳ ನಡುವಿನ ಎಲ್ಲಾ ವಿವಾದಗಳನ್ನು ಮಾತುಕತೆ ಮೂಲಕವೇ ಪರಿಹರಿಸಲು ಸಾಧ್ಯ ಎಂದು ಹೇಳಿದ್ದಾರೆ.

ಪಾಕಿಸ್ತಾನ ಜನತೆ ಕೂಡ ಭಾರತದ ಜತೆ ಶಾಂತಿ, ಸಹಕಾರ ಸಂಬಂಧವನ್ನು ಬಯಸುತ್ತಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಬಾಕಿ ಇರುವ ಎಲ್ಲಾ ಸಮಸ್ಯೆಗಳನ್ನು, ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರ ವಿವಾದವನ್ನು ಬಗೆಹರಿಸುವಲ್ಲಿ ದಕ್ಷಿಣ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆಯು ಅನಿಶ್ಚಿತವಾಗಿದೆ ಎಂದು ನಮಗೆ ಮನವರಿಕೆಯಾಗಿದೆ ಎಂದು ಮೊನ್ನೆ 29ರಂದು ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಇಮ್ರಾನ್ ಖಾನ್ ಹೇಳಿದ್ದಾರೆ.

ಕಳೆದ ಮಾರ್ಚ್ 22ರಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಗೆ ಪತ್ರ ಬರೆದಿದ್ದ ಪ್ರಧಾನಿ ಮೋದಿ, ಪಾಕಿಸ್ತಾನ ಜನತೆ ಜೊತೆ ಸೌಹಾರ್ದಯುತ ಸಂಬಂಧವನ್ನು ಬಯಸುತ್ತಿರುವುದಾಗಿ ಹೇಳಿದ್ದರು. ನಂಬಿಕೆ, ವಿಶ್ವಾಸ, ಶಾಂತಿ ವಾತಾವರಣಕ್ಕೆ, ಭಯೋತ್ಪಾದನೆ ಮತ್ತು ಹಗೆತನದಿಂದ ಹೊರಬರಬೇಕಿದೆ ಎಂದಿದ್ದರು. ಪಾಕಿಸ್ತಾನದ ಜೊತೆ ಸೌಹಾರ್ದಯುತ ವಾತಾವರಣ ಕಲ್ಪಿಸಲು ಈ ಪತ್ರ ಬರೆದಿದ್ದರು ಎಂದು ವಿಶ್ಲೇಷಿಸಲಾಗಿತ್ತು. ಆದರೆ ಪಾಕಿಸ್ತಾನ ದಿನದಂದು ಅಲ್ಲಿನ ಪ್ರಧಾನ ಮಂತ್ರಿಯನ್ನುದ್ದೇಶಿಸಿ ಪತ್ರ ಬರೆಯುವುದು ನಿಗದಿತ ಸಂಪ್ರದಾಯ ಎಂದು ಅಧಿಕಾರಿಗಳು ಹೇಳಿದ್ದರು.

ಇದಕ್ಕೆ ಉತ್ತರವಾಗಿ ಇಮ್ರಾನ್ ಖಾನ್ ಬರೆದ ಪತ್ರದಲ್ಲಿ, ರಚನಾತ್ಮಕ ಮತ್ತು ಸಂಬಂಧ ಸುಧಾರಣೆಗೆ ಅನುವು ಮಾಡಿಕೊಡುವ ವಾತಾವರಣವನ್ನು ಸೃಷ್ಟಿಸುವುದು ಕಡ್ಡಾಯವಾಗಿದೆ. ಫೆಬ್ರವರಿಯಲ್ಲಿ ಡಿಜಿಎಂಒಗಳು ಬಿಡುಗಡೆ ಮಾಡಿದ ಜಂಟಿ ಹೇಳಿಕೆಯು 2003 ರ ಕದನ ವಿರಾಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬದ್ಧತೆಯನ್ನು ಪುನರುಚ್ಚರಿಸಿದ್ದರಿಂದ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಗಳು ಮತ್ತಷ್ಟು ಹದಗೆಟ್ಟವು ಎಂದು ಹೇಳಿದ್ದಾರೆ.

Stay up to date on all the latest ಅಂತಾರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp