ಭಾರತದ ಮುಂದೆ ಬಗ್ಗಿದ ಪಾಕ್: ಪಾಕ್ ಗೆ ಬೇಕೇ ಬೇಕು ಭಾರತದ ಸಕ್ಕರೆ, ಹತ್ತಿ!
ಕಳೆದ ಎರಡು ವರ್ಷಗಳಿಂದ ಭಾರತದಿಂದ ಸಕ್ಕರೆ ಮತ್ತು ಹತ್ತಿ ಆಮದಿಗೆ ನಿಷೇಧ ಹೇರಿದ್ದ ಪಾಕಿಸ್ತಾನ ಇದೀಗ ಶೀಘ್ರದಲ್ಲೇ ಸಕ್ಕರೆ ಮತ್ತು ಹತ್ತಿ ಆಮದು ಮಾಡಿಕೊಳ್ಳಲಿದೆ ಎಂದು ಪಾಕಿಸ್ತಾನದ ನೂತನ ಹಣಕಾಸು ಸಚಿವ ಹಮ್ಮದ್ ಅಜರ್ ಹೇಳಿದ್ದಾರೆ.
Published: 31st March 2021 07:34 PM | Last Updated: 31st March 2021 07:34 PM | A+A A-

ಇಮ್ರಾನ್ ಖಾನ್
ಇಸ್ಲಾಮಾಬಾದ್: ಕಳೆದ ಎರಡು ವರ್ಷಗಳಿಂದ ಭಾರತದಿಂದ ಸಕ್ಕರೆ ಮತ್ತು ಹತ್ತಿ ಆಮದಿಗೆ ನಿಷೇಧ ಹೇರಿದ್ದ ಪಾಕಿಸ್ತಾನ ಇದೀಗ ಶೀಘ್ರದಲ್ಲೇ ಸಕ್ಕರೆ ಮತ್ತು ಹತ್ತಿ ಆಮದು ಮಾಡಿಕೊಳ್ಳಲಿದೆ ಎಂದು ಪಾಕಿಸ್ತಾನದ ನೂತನ ಹಣಕಾಸು ಸಚಿವ ಹಮ್ಮದ್ ಅಜರ್ ಹೇಳಿದ್ದಾರೆ.
ಭಾರತದಿಂದ ಸಕ್ಕರೆ ಮತ್ತು ಹತ್ತಿ ವ್ಯಾಪಾರವನ್ನು ಪುನರಾರಂಭಿಸಲು ನಿರ್ಧರಿಸಿದ್ದೇವೆ. ಜೂನ್ ನಿಂದ ಆಮದು ಮಾಡಿಕೊಳ್ಳುತ್ತೇವೆ ಎಂದು ಹಮ್ಮದ್ ಅಜರ್ ಹೇಳಿದ್ದಾರೆ.
ಖಾಸಗಿ ವಲಯಕ್ಕೆ ಭಾರತದಿಂದ ಐದು ಲಕ್ಷ ಟನ್ ಬಿಳಿ ಸಕ್ಕರೆಯನ್ನು ಆಮದು ಮಾಡಿಕೊಳ್ಳಲು ಆರ್ಥಿಕ ಸಮನ್ವಯ ಸಮಿತಿ(ಇಸಿಸಿ)ಯು ಅವಕಾಶ ನೀಡಿದೆ. ಭಾರತದಲ್ಲಿ ಸಕ್ಕರೆಯ ಬೆಲೆ ಸಾಕಷ್ಟು ಕಡಿಮೆ. ಹೀಗಾಗಿ ನಾವು ಮತ್ತೆ ಭಾರತದೊಂದಿಗೆ ವ್ಯಾಪಾರವನ್ನು ಪುನರಾರಂಭಿಸಲು ನಿರ್ಧರಿಸಿದ್ದೇವೆ ಎಂದರು.
ಇನ್ನು ಹತ್ತಿ ನಿಷೇಧದ ಹಿನ್ನಲೆಯಲ್ಲಿ ನಮ್ಮ ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳ ಮೇಲೆ ನೇರ ಪರಿಣಾಮ ಬೀರಿತ್ತು. ಅವರ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಹತ್ತಿ ಆಮದಿಗೆ ಸರ್ಕಾರ ಮುಂದಾಗಿದೆ ಎಂದರು.