ಮುರಿದು ಬಿತ್ತು 27 ವರ್ಷದ ದಾಂಪತ್ಯ: ಬಿಲ್ ಗೇಟ್ಸ್ ದಂಪತಿ ವಿಚ್ಛೇದನ ಘೋಷಣೆ

ಮೈಕ್ರೋಸಾಫ್ಟ್‌ ಸಂಸ್ಥಾಪಕ ಬಿಲ್ ಗೇಟ್ಸ್‌ ಮತ್ತು ಮೆಲಿಂಡಾ ಗೇಟ್ಸ್‌ ದಂಪತಿ ಮದುವೆಯಾಗಿ 27 ವರ್ಷದ ದಾಂಪತ್ಯದ ನಂತರ ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದಾರೆ. 

Published: 04th May 2021 11:32 AM  |   Last Updated: 04th May 2021 12:24 PM   |  A+A-


Microsoft co-founder Bill Gates and entrepreneur Melinda

ಬಿಲ್ ಗೇಟ್ಸ್ ದಂಪತಿ

Posted By : Shilpa D
Source : AFP

ವಾಷಿಂಗ್ಟನ್‌: ಮೈಕ್ರೋಸಾಫ್ಟ್‌ ಸಂಸ್ಥಾಪಕ ಬಿಲ್ ಗೇಟ್ಸ್‌ ಮತ್ತು ಮೆಲಿಂಡಾ ಗೇಟ್ಸ್‌ ದಂಪತಿ ಮದುವೆಯಾಗಿ 27 ವರ್ಷದ ದಾಂಪತ್ಯದ ನಂತರ ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದಾರೆ. 

ವಿಶ್ವದ ಶ್ರೀಮಂತ ದಂಪತಿಗಳಲ್ಲಿ ಈ ಜೋಡಿಯು ಒಂದಾಗಿದೆ. ಇವರ ಜಂಟಿ ಸಂಪತ್ತನ್ನು 13,000 ಕೋಟಿ ಡಾಲರ್ ಇದೆ ಎಂದು ಅಂದಾಜಿಸಲಾಗಿದೆ. ಬಿಲ್‌ ಗೇಟ್ಸ್‌ ಅವರ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಷನ್‌ ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ.

ವಿಚ್ಛೇದನ ನೀಡಿರುವ ಕುರಿತು ಟ್ವೀಟ್‌ ಮಾಡಿರುವ ಬಿಲ್‌ ಗೇಟ್ಸ್‌, ‘27 ವರ್ಷಗಳ ದಾಂಪತ್ಯದ ನಂತರ ನಾವು ವಿಚ್ಛೇದನ ಘೋಷಿಸಿದ್ದೇವೆ. ಜಾಗತಿಕ ಆರೋಗ್ಯ, ಲಿಂಗ ಸಮಾನತೆ, ಶಿಕ್ಷಣ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳಿಗೆ ಧನಸಹಾಯ ನೀಡುವ ಕೆಲಸವನ್ನು ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್‌ನಲ್ಲಿ ತಮ್ಮ ಜಂಟಿ ಸಹಭಾಗಿತ್ವವನ್ನು ಮುಂದುವರಿಸುತ್ತೇವೆ’ ಎಂದು ಹೇಳಿದ್ದಾರೆ.

ಕಳೆದ 27 ವರ್ಷದಲ್ಲಿ ನಾವು ಮೂವರು ಮಕ್ಕಳನ್ನು ಬೆಳೆಸಿದ್ದು, ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಫೌಂಡೇಷನ್ ಸ್ಥಾಪಿಸಿದ್ದೇವೆ. ಆದರೀಗ ಈ ದಾಂಪತ್ಯ ಜೀವನ ಕೊನೆಗೊಳಿಸುವ ನಿರ್ಧಾರವನ್ನು ಕೈಗೊಂಡಿದ್ದೇವೆ’ ಎಂದು ಹೇಳಿಕೆ ನೀಡಿರುವ ಪ್ರತಿಯನ್ನು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

Stay up to date on all the latest ಅಂತಾರಾಷ್ಟ್ರೀಯ news
Poll
Rahul_Gandhi1

ರಾಹುಲ್ ಗಾಂಧಿ ಟೀಕೆ ಮಾಡುವುದನ್ನು ನಿಲ್ಲಿಸಿ ಕೋವಿಡ್ ಬಿಕ್ಕಟ್ಟಿನ ವಿರುದ್ಧ ಹೋರಾಡಲು ಪಕ್ಷವನ್ನು ಸಜ್ಜುಗೊಳಿಸಬೇಕೇ?


Result
ಹೌದು, ರಾಹುಲ್ ಮುಂದಾಳತ್ವ ವಹಿಸಬೇಕು.
ಇಲ್ಲ, ಇದು ಕೇಂದ್ರ ಸರ್ಕಾರದ ಜವಾಬ್ದಾರಿ.
flipboard facebook twitter whatsapp