ಎರಡು ಡೋಸ್ ಲಸಿಕೆ ಪಡೆದವರು ಮಾಸ್ಕ್ ಧರಿಸುವ ಅಗತ್ಯವಿಲ್ಲ: ಅಮೆರಿಕಾ ಅಧ್ಯಕ್ಷ ಬೈಡನ್

ಅಮೆರಿಕಾ ಅತಿ ಬೇಗ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಎರಡು ಡೋಸ್ ಲಸಿಕೆ ಪಡೆದವರು ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರು ಹೇಳಿದ್ದಾರೆ. 

Published: 14th May 2021 08:23 AM  |   Last Updated: 14th May 2021 12:33 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : Online Desk

ವಾಷಿಂಗ್ಟನ್: ಅಮೆರಿಕಾ ಅತಿ ಬೇಗ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಎರಡು ಡೋಸ್ ಲಸಿಕೆ ಪಡೆದವರು ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರು ಹೇಳಿದ್ದಾರೆ. 

ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡ ಜನರು ಇನ್ನು ಮುಂದೆ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ (ಸಿಡಿಸಿ) ಹೇಳಿದ್ದು, ಈ ಕುರಿತ ಘೋಷಣೆಯಾಗುತ್ತಿದ್ದಂತೆಯೇ ವೈಟ್ ಹೌಸ್'ನ ರೋಸ್ ಗಾರ್ಡನ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಮೆರಿಕ ಅಧ್ಯಕ್ಷ ಜಾಯ್ ಬೈಡೆನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮಾಸ್ಕ್ ಧರಿಸದೇ ಭಾಗವಹಿಸಿದರು. 

ಬಳಿಕ ಮಾತನಾಡಿದ ಬೈಡನ್ ಅವರು, ಇದೊಂದು ಅದ್ಭುತ ಮೈಲಿಗಲ್ಲು ಎಂದು ನಾನು ಭಾವಿಸುತ್ತೇನೆ. ಅಸಮಾನ್ಯ ಸಾಧನೆಯಿಂದ ಇದು ಸಾಧ್ಯವಾಗಿದೆ, ಅತೀ ವೇಗವಾಗಿ ಅಮೆರಿಕನ್ನರಿಗೆ ನಾವು ಲಸಿಕೆ ನೀಡುತ್ತಿದ್ದೇವೆ ಎಂದು ಹೇಳಿದರು. 

ಇದೇ ವೇಳೆ ಸಿಡಿಸಿಯ ಹೊರಡಸಿದ ಮಾರ್ಗಸೂಚಿಗಳನ್ನು ತಿಳಿಸಿದ ಅವರು, ಎರಡೂ ಡೋಸ್ ಲಸಿಕೆ ಪಡೆದವರಿಗೆ ಸೋಂಕು ತಗುಲುವುದು ವಿರಳಾತಿವಿರಳ. ಹೀಗಾಗಿ ನೀವು ಎರಡೂ ಡೋಸ್ ಲಸಿಕೆ ಪಡೆದಿದ್ದರೆ ಇನ್ನು ಮುಂದೆ ಮಾಸ್ಕ್ ಧರಿಸುವ ಅಗತ್ಯವಿಲ್ಲ. ಆದರೆ ಒಂದು ಡೋಸ್ ಪಡೆದು, ಮತ್ತೊಂದು ಡೋಸ್ ಪಡೆಯಲು ಕಾಯುತ್ತಿದ್ದರೆ ಎರಡನೇ ಡೋಸ್ ಲಸಿಕೆ ಪಡೆಯುವವರೆಗೆ ಕಾಯಬೇಕು, ಅಲ್ಲಿಯವರೆಗೆ ಮಾಸ್ಕ್ ಧರಿಸಬೇಕು ಎಂದು ಅವರು ವಿವರಿಸಿದ್ದಾರೆ.

ಅಮೆರಿಕಾದಲ್ಲಿ ಕೇವಲ 114 ದಿನಗಳಲ್ಲಿ 250 ಮಿಲಿಯನ್ ಡೋಸ್ ಲಸಿಕೆ ನೀಡಲಾಗಿದೆ. ಇದರ ಪ್ರತಿಫಲವಾಗಿ 50 ರಾಜ್ಯಗಳ ಪೈಕಿ 49 ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ತಗ್ಗುತ್ತಿದೆ. 

ಏಪ್ರಿಲ್ 2020ರಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಪ್ರಮಾಣ ತೀರಾ ಕಡಿಮೆಯಾಗುತ್ತಿದೆ. ಸಾವಿನ ಪ್ರಮಾಣ ಕೂಡ ಶೇ.80ರಷ್ಟು ಇಳಿಕೆಯಾಗಿದೆ. ಆದರೆ, ಇತರೆ ರಾಷ್ಟ್ರಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಬೇಸರದ ಸಂಗತಿಯಾಗಿದೆ. 4 ತಿಂಗಳೊಳಗೆ ನಾವು ಅಮೆರಿಕದಲ್ಲಿ ಶೇಕಡಾ 5ರಿಂದ ಶೇಕಡಾ 60ರಷ್ಟು ವಯಸ್ಕರಿಗೆ ಕನಿಷ್ಠ ಒಂದು ಡೋಸ್ ನೀಡಿದ್ದೇವೆ. ಆರ್ಥಿಕತೆಯು ನಿಶ್ಚಲತೆಯಿಂದ ಕಳೆದ 40 ವರ್ಷಗಳಲ್ಲೇ ವೇಗವಾಗಿ ಪ್ರಗತಿಯತ್ತ ಸಾಗುತ್ತಿದೆ. ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ ಎಂದು ತಿಳಿಸಿದ್ದಾರೆ. 

ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡವರು ಫೆಡರಲ್, ಸ್ಟೇಟ್, ಸ್ಥಳೀಯ ಅಥವಾ ಪ್ರಾದೇಶಿಕ ಕಾನೂನು, ನಿಯಮಗಳು, ಸ್ಥಳೀಯ ವ್ಯವಹಾರ ಹಾಗೂ ಕೆಲಸದ ಮಾರ್ಗಸೂಚಿಗಳು ಸೇರಿದಂತೆ ಅಗತ್ಯ ಸ್ಥಳಗಳಲ್ಲಿ ಹೊರತುಪಡಿಸಿ ಉಳಿದೆಡೆ ಮಾಸ್ಕ್ ಧರಿಸದೆ, ದೈಹಿಕ ಅಂತರ ಕಾಪಾಡದೆ ತಮ್ಮ ಕೆಲಸಗಳನ್ನು ನಿರಾತಂಕವಾಗಿ ಮಾಡಬಹುದು ಎಂದು ಸಿಡಿಸಿ ಮಾರ್ಗಸೂಚಿಯಲ್ಲಿ ತಿಳಿಸಿದೆ.


Stay up to date on all the latest ಅಂತಾರಾಷ್ಟ್ರೀಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp