ಐಎಸ್ ನಿಂದ ಕಾಬೂಲ್ ನಲ್ಲಿ ಅವಳಿ ಬಾಂಬ್ ಸ್ಫೋಟ; 50 ಮಂದಿಗೆ ಗಾಯ 19 ಕ್ಕೂ ಹೆಚ್ಚು ಸಾವು

ಕಾಬೂಲ್ ನಲ್ಲಿ ನ.02 ರಂದು ಅವಳಿ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಪ್ರಕಟಿಸಿವೆ.
ಬಾಂಬ್ ಸ್ಫೋಟ
ಬಾಂಬ್ ಸ್ಫೋಟ

ಕಾಬೂಲ್: ಕಾಬೂಲ್ ನಲ್ಲಿ ನ.02 ರಂದು ಅವಳಿ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 19 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರೆ 50 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಪ್ರಕಟಿಸಿವೆ.

ಕಾಬೂಲ್ ನ ಪಿಡಿ10 ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದರ ಪರಿಣಾಮ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಇಟಾಲಿಯನ್ ಮಾನವೀಯ ಸಂಘಟನೆಯೊಂದು ಟ್ವೀಟ್ ಮೂಲಕ ತಿಳಿಸಿದೆ.

ಅಫ್ಘಾನಿಸ್ತಾನದ ರಾಜಧಾನಿಯ ಆಸ್ಪತ್ರೆಯ ಮೇಲೆ ದಾಳಿ ನಡೆದಿದ್ದು, ಇಸ್ಲಾಮಿಕ್ ಸ್ಟೇಟ್ ನಿಂದ ಈ ದಾಳಿ ನಡೆದಿರುವ ಸಾಧ್ಯತೆ ಇದೆ ಎಂದು ಸ್ಪುಟ್ನಿಕ್ ವರದಿ ಪ್ರಕಟಿಸಿದೆ.

ಆಸ್ಪತ್ರೆಯ ಮುಂಭಾಗದಲ್ಲಿ ಐಎಸ್ ನ ಉಗ್ರನೋರ್ವ ಆತ್ಮಾಹುತಿ ದಾಳಿ ನಡೆಸಿದ್ದು, ಇನ್ನೂ ಹಲವು ದಾಳಿಕೋರರು ಆಸ್ಪತ್ರೆಯನ್ನು ಪ್ರವೇಶಿಸಿದ್ದು ತಾಲೀಬಾನ್ ನೊಂದಿಗೆ ಸಂಘರ್ಷಕ್ಕೆ ಇಳಿದಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com