ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಲಾಹೋರ್ ಫಸ್ಟ್

ಯುಎಸ್ ಏರ್ ಕ್ವಾಲಿಟಿ ಇಂಡೆಕ್ಸ್ ಬಿಡುಗಡೆ ಮಾಡಿದ ವಾಯು ಮಾಲಿನ್ಯದ ಅಂಕಿಅಂಶಗಳ ಪ್ರಕಾರ, ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಪಾಕಿಸ್ತಾನದ ಲಾಹೋರ್ ಅಗ್ರಸ್ಥಾನದಲ್ಲಿದೆ.
ಲಾಹೋರ್ ನಗರ
ಲಾಹೋರ್ ನಗರ

ಇಸ್ಲಾಮಾಬಾದ್: ಯುಎಸ್ ಏರ್ ಕ್ವಾಲಿಟಿ ಇಂಡೆಕ್ಸ್ ಬಿಡುಗಡೆ ಮಾಡಿದ ವಾಯು ಮಾಲಿನ್ಯದ ಅಂಕಿಅಂಶಗಳ ಪ್ರಕಾರ, ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಪಾಕಿಸ್ತಾನದ ಲಾಹೋರ್ ಅಗ್ರಸ್ಥಾನದಲ್ಲಿದೆ.

ಪಾಕಿಸ್ತಾನದ ರಾಜಧಾನಿ ಲಾಹೋರ್​ನಲ್ಲಿ ಬುಧವಾರ ವಾಯು ಗುಣಮಟ್ಟ ಸೂಚ್ಯಂಕವು 600ಕ್ಕೂ ಹೆಚ್ಚು ಪ್ರಮಾಣದಲ್ಲಿ ದಾಖಲಾಗಿದೆ. ಪಟ್ಟಿಯಲ್ಲಿ ಕರಾಚಿ ಐದನೇ ಸ್ಥಾನದಲ್ಲಿದೆ. ಕಳೆದ ವರ್ಷ ಕೂಡ ಲಾಹೋರ್​ ವಿಶ್ವದ ಅತ್ಯಂತ ಕಲುಷಿತ ನಗರ ಎಂಬ ಹಣೆಪಟ್ಟಿ ಪಡೆದಿತ್ತು. 

ಲಾಹೋರ್​ನ ಗುಲ್ಬರ್ಗ್ ನಲ್ಲಿ 681, ರೈವಿಂಡ್ ನಲ್ಲಿ 626, ಅನಾರ್ಕಲಿ ಮಾರುಕಟ್ಟೆಯಲ್ಲಿ 541 ಮತ್ತು ಮಾಡೆಲ್ ಟೌನ್ ನಲ್ಲಿ 532 ಮಟ್ಟ ದಾಖಲಾಗಿದೆ ಎಂದು SAMAA TV ವರದಿ ಮಾಡಿದೆ.

ಈ ನಡುವೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಹೊಗೆ ಆವರಿಸಿರುವುದು ಅಧಿಕಾರಿಗಳ ಆತಂಕಕ್ಕೆ ಕಾರಣವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com