ಪಾಕ್ ಶಾಸಕಿಯ ಅಶ್ಲೀಲ ವಿಡಿಯೋ ವೈರಲ್: ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲು

ಪಾಕಿಸ್ತಾನದ ಮಹಿಳಾ ಶಾಸಕಿಯೊಬ್ಬರ ಅಶ್ಲೀಲ ವಿಡಿಯೋ ಎನ್ನಲಾದ ತುಣುಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್​ ಆಗಿದೆ.
ಸಾನಿಯಾ ಆಶಿಕ್
ಸಾನಿಯಾ ಆಶಿಕ್

ಲಾಹೋರ್:  ಪಾಕಿಸ್ತಾನದ ಮಹಿಳಾ ಶಾಸಕಿಯೊಬ್ಬರ ಅಶ್ಲೀಲ ವಿಡಿಯೋ ಎನ್ನಲಾದ ತುಣುಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್​ ಆಗಿದೆ.

ಶಾಸಕಿ ಸಾನಿಯಾ ಆಶಿಕ್ ಅವರು ಇದೀಗ ಸೈಬರ್​ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪಾಕಿಸ್ತಾನದ ಪಂಜಾಬ್‌ನ ತಕ್ಷಿಲಾ ವಿಧಾನಸಭಾ ಕ್ಷೇತ್ರದ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಶಾಸಕಿ ಸಾನಿಯಾ ಆಶಿಕ್ ಅವರದ್ದು ಎನ್ನಲಾದ ವಿಡಿಯೋವೊಂದು ವೈರಲ್​ ಆಗಿದೆ.

ಸುದೀರ್ಘ ತನಿಖೆ ನಡೆಸಿದ ನಂತರ ಪೊಲೀಸರು ಇತ್ತೀಚೆಗೆ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆದರೆ ಅವರು ಈ ಬಗ್ಗೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಸುದ್ದಿ ವರದಿಗಳ ಪ್ರಕಾರ, ಕಳೆದ ತಿಂಗಳು ಈ ವಿಡಿಯೋ ಬಗ್ಗೆ ಸಾನಿಯಾ ಅವರಿಗೆ ತಿಳಿದಿದೆ. ಈ ಬಗ್ಗೆ ತಿಳಿದ ತಕ್ಷಣ ಅವರು ಅಕ್ಟೋಬರ್ ಅಂತ್ಯದ ವೇಳೆಗೆ ಇಡೀ ವಿಷಯದ ಬಗ್ಗೆ ಸರ್ಕಾರ ಮತ್ತು ಕೇಂದ್ರ ತನಿಖಾ ಸಂಸ್ಥೆಗೆ ತಿಳಿಸಿದ್ದಾರೆ.

ಕಾಮಪ್ರಚೋದಕ ವಿಡಿಯೋದಲ್ಲಿ ಇಬ್ಬರು ವ್ಯಕ್ತಿಗಳು ಇದ್ದಾರೆ. ದುರುದ್ದೇಶದಿಂದ ತಿರುಚಿದ ವಿಡಿಯೋ ಬಿಡುಗಡೆ ಮಾಡಲಾಗಿದ ಎಂದು ಶಾಸಕಿ ಆರೋಪಿಸಿದ್ದಾರೆ.

ಪಾಕಿಸ್ತಾನದ ಆರಿ ನ್ಯೂಸ್ ವರದಿ ಪ್ರಕಾರ, ಅಕ್ಟೋಬರ್ 26 ರಂದು ಸಾನಿಯಾ ಆಶಿಕ್ ಅವರು ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ (ಎಫ್‌ಐಎ) ಗೆ ದೂರು ನೀಡಿದ್ದಾರೆ. ಹಲವಾರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋ ವೈರಲ್ ಆಗುತ್ತಿದೆ ಎಂದು ಆರೋಪಿಸಿದ್ದಾರೆ. ವಿಡಿಯೋದಲ್ಲಿರುವ ಮಹಿಳೆ ಅವರೇ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಲಾಗುತ್ತಿದೆ. ಆದರೆ ಅವರು ಈ ಹೇಳಿಕೆಯನ್ನು ಬಲವಾಗಿ ನಿರಾಕರಿಸಿದ್ದಾರೆ. ಈ ಬಗ್ಗೆ ಶಾಸಕ ಇಮ್ರಾನ್ ಖಾನ್ ಕೇಂದ್ರ ಸರ್ಕಾರಕ್ಕೂ ದೂರು ನೀಡಿದ್ದಾರೆ.

ಇದನ್ನೂ ಓದಿ: ಅತ್ಯಾಚಾರಿಗಳ ಕಾಮಾಸಕ್ತಿ ಕುಗ್ಗಿಸಲು ಕೆಮಿಕಲ್‌ ಕ್ಯಾಸ್ಟ್ರೇಶನ್‌: ಮಸೂದೆಗೆ ಪಾಕ್ ಸಂಸತ್​​ ಅಂಗೀಕಾರ! ಏನಿದು ಕೆಮಿಕಲ್ ಕ್ಯಾಸ್ಟ್ರೇಶನ್?

ದೂರು ದಾಖಲಾದ ನಂತರ, ಪಂಜಾಬ್ ಪ್ರಾಂತ್ಯದ ಪೊಲೀಸರು ಮತ್ತು ಎಫ್‌ಐಎ ತನಿಖೆಯನ್ನು ಪ್ರಾರಂಭಿಸಿವೆ. ಪೊಲೀಸರು ಲಾಹೋರ್​ನಲ್ಲಿ ವ್ಯಕ್ತಿಯನ್ನು ಬಂಧಿಸಿದ್ದಾರೆ, ಆದರೆ ವ್ಯಕ್ತಿಯ ಗುರುತು ಬಹಿರಂಗಗೊಂಡಿಲ್ಲ. ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಮಹಿಳೆ ಸಾನಿಯಾನೋ ಅಥವಾ ಬೇರೆ ಯಾರೋ ಎಂದು ಪೊಲೀಸರು ಖಚಿತಪಡಿಸಿಲ್ಲ. ಹೊಸ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ ಎಂದು ತಿಳಿದಿದೆ.

ಶಾಸಕಿ ಸಾನಿಯಾ ಅವರು ತಮಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಕೂಡ ಹೇಳಿದ್ದಾರೆ ಎಂದು ಕೆಲವು ಮಾಧ್ಯಮ ವರದಿ ಮಾಡಿವೆ. ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪುತ್ರಿ ಮರ್ಯಮ್ ನವಾಜ್ ಅವರಿಗೆ ಸಾನಿಯಾ ಆಪ್ತರು ಎಂದು ಹೇಳಲಾಗುತ್ತಿದೆ. ಸಾನಿಯಾ ಹಲವಾರು ವಿಷಯಗಳಲ್ಲಿ ಇಮ್ರಾನ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com