ಪಾಕ್‌ನಲ್ಲಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಭುಗಿಲೆದ್ದ ಹಿಂಸಾಚಾರ: ನಾಲ್ವರು ಸಾವು

ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಪಾಕಿಸ್ತಾನದಲ್ಲಿ ಸರಣಿ ಪ್ರತಿಭಟನೆಗಳು ಆರಂಭಗೊಂಡಿವೆ. ಇಸ್ಲಾಮಿಸ್ಟ್ ಹಾಗೂ ಭದ್ರತಾ ಪಡೆಗಳ ಮಧ್ಯೆ ನಡದೆ ಘರ್ಷಣೆಯಲ್ಲಿ ಇಬ್ಬರು ಪೊಲೀಸರು ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಇಸ್ಲಾಮಿಸ್ಟ್ ಹೋರಾಟಗಾರರು ಅಸುನೀಗಿದ್ದಾರೆ.
ಇಮ್ರಾನ್ ಖಾನ್-ಪ್ರತಿಭಟನೆ ಚಿತ್ರ
ಇಮ್ರಾನ್ ಖಾನ್-ಪ್ರತಿಭಟನೆ ಚಿತ್ರ

ಲಾಹೋರ್: ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಪಾಕಿಸ್ತಾನದಲ್ಲಿ ಸರಣಿ ಪ್ರತಿಭಟನೆಗಳು ಆರಂಭಗೊಂಡಿವೆ. ಇಸ್ಲಾಮಿಸ್ಟ್ ಹಾಗೂ ಭದ್ರತಾ ಪಡೆಗಳ ಮಧ್ಯೆ ನಡದೆ ಘರ್ಷಣೆಯಲ್ಲಿ ಇಬ್ಬರು ಪೊಲೀಸರು ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಇಸ್ಲಾಮಿಸ್ಟ್ ಹೋರಾಟಗಾರರು ಮೃತಪಟ್ಟಿದ್ದಾರೆ.

ಫ್ರಾನ್ಸ್ ನಲ್ಲಿ ಇಸ್ಲಾಂ ಪ್ರವಾದಿ ಮೊಹಮ್ಮದ್ ಅವರ ವ್ಯಂಗ್ಯ ಚಿತ್ರ ರಚಿಸಿದ್ದಕ್ಕಾಗಿ ಕಳೆದ ವರ್ಷ ಪಾಕಿಸ್ತಾನದಲ್ಲಿ ಪ್ರತಿಭಟನೆಗಳು ನಡೆದಿದದ್ದವು. ಈ ವೇಳೆ ತೆಹ್ರಿಕ್-ಎ-ಲಬೈಕ್ ಪಾಕಿಸ್ತಾನ ಪಕ್ಷದ ಮುಖಂಡನಾದ ಸಾದ್ ರಿಜ್ವಿಯನ್ನು ಸಹ ಏಪ್ರಿಲ್ ನಲ್ಲಿ ಬಂಧಿಸಲಾಗಿತ್ತು. ಈ ಮಧ್ಯೆ ಸಾದ್ ರಿಜ್ವಿಯನ್ನು ಬಿಡುಗಡೆ ಮಾಡುವಂತೆ ಟಿ ಎಲ್ ಪಿ ಪಕ್ಷ ಲಾಂಗ್ ರಾಲಿಯನ್ನು ಆಯೋಜನೆ ಮಾಡಲಾಗಿತ್ತು.

ಲಾಹೋರ್ ನಿಂದ ಇಸ್ಲಾಮಾಬಾದ್ ನತ್ತ ತೆರಳುತ್ತಿದ್ದ ಈ ರಾಲಿಯನ್ನು ಹತ್ತಿಕ್ಕಲು ಪೊಲೀಸರು ಯತ್ನಿಸಿದರು. ಈ ವೇಳೆ ಇಸ್ಲಾಮಿಕ್ ಹೋರಾಟಗಾರರು ಹಾಗೂ ಪೊಲೀಸರ ಮಧ್ಯೆ ಘರ್ಷಣೆ ಉಂಟಾಗಿ ಹಿಂಸಾಚಾರ ಭುಗಿಲೆದ್ದಿತು. ಇಬ್ಬರು ಪೊಲೀಸರು ಸೇರಿದಂತೆ ನಾಲ್ಕು ಮಂದಿ ಘಟನೆಯಲ್ಲಿ ಸಾವಿಗೀಡಾಗಿದ್ದಾರೆ.

ತೆಹ್ರಿಕ್-ಎ-ಲಬೈಕ್ ಮುಖ್ಯಸ್ಥನನ್ನು ಬಿಡುಗಡೆಗೊಳಿಸುವುದು ಹಾಗೂ ಫ್ರಾನ್ಸ್ ರಾಯಭಾರಿಯನ್ನು ಪಾಕಿಸ್ತಾನದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಟಿಎಲ್ ಪಿಯ ಸಾವಿರಾರು ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಸ್ಲಾಮಿಸ್ಟ್ ಗಳ ಪ್ರತಿಭಟನೆ ನಿಯಂತ್ರಣಕ್ಕೆ ತರಲು ಪೊಲೀಸರು 2500 ಟಿಯರ್ ಗ್ಯಾಸ್ ಶೆಲ್ ಗಳನ್ನು ಸಿಡಿಸಿದ್ದಾರೆ ಎಂದು ಗೊತ್ತಾಗಿದೆ. ಲಾಹೋರ್ ನಗರದಲ್ಲಿ ಸದ್ಯ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು, ಹಿಂಸಾಚಾರ ಇನ್ನೂ ಹೆಚ್ಚಾಗಬಹುದು ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com