ಚೀನಾದಿಂದ ಹೊಸ ಭೂ ಗಡಿ ಕಾನೂನು ಮಂಡನೆ: ಭಾರತಕ್ಕೆ ಪರೋಕ್ಷ ಎಚ್ಚರಿಕೆ

ಭಾರತದೊಂದಿಗೆ ಗಡಿ ಬಿಕ್ಕಟ್ಟನ್ನು ಹೊಂದಿರುವ ಚೀನಾ ನೂತನ ಕಾನೂನನ್ನು ತಂದಿರುವುದು ಭಾರತಕ್ಕೆ ಪರೋಕ್ಷ ಎಚ್ಚರಿಕೆಯಾಗಿದೆ ಎಂದು ರಾಜಕೀಯ ಪರಿಣತರು ಅಭಿಪ್ರಾಯಪಟ್ಟಿದ್ದಾರೆ. 
ಚೀನಾ ಅಧ್ಯಕ್ಷ ಶಿಜಿನ್ ಪಿಂಗ್
ಚೀನಾ ಅಧ್ಯಕ್ಷ ಶಿಜಿನ್ ಪಿಂಗ್

ಬೀಜಿಂಗ್: ಚೀನಾ ದೇಶದ ಅಖಂಡತೆ ಹಾಗೂ ಸಾರ್ವಭೌಮತ್ಯವನ್ನು ಕಾಪಾಡಿಕೊಳ್ಳುವ ಸಲುವಾಗಿ ಚೀನಾ ತಾನು ನೂತನ ಭೂ ಗಡಿ ಕಾನೂನನ್ನು ಜಾರಿಗೆ ತರುತ್ತಿರುವುದಾಗಿ ಘೋಷಿಐದೆ. ಚೀನಾ ಸಂಸತ್ತಿನಲ್ಲಿ ಈ ಕಾನೂನಿಗೆ ಒಪ್ಪಿಗೆ ದೊರೆತಿದ್ದು ಮುಂದಿನ ವರ್ಷ ಜನವರಿ1 ರಿಂದ ಅನುಷ್ಠಾನಕ್ಕೆ ಬರಲಿದೆ.

ಭಾರತದೊಂದಿಗೆ ಗಡಿ ಬಿಕ್ಕಟ್ಟನ್ನು ಹೊಂದಿರುವ ಚೀನಾ ನೂತನ ಕಾನೂನನ್ನು ತಂದಿರುವುದು ಭಾರತಕ್ಕೆ ಪರೋಕ್ಷ ಎಚ್ಚರಿಕೆಯಾಗಿದೆ ಎಂದು ರಾಜಕೀಯ ಪರಿಣತರು ಅಭಿಪ್ರಾಯಪಟ್ಟಿದ್ದಾರೆ. 

ಚೀನಾ ಭೂಗಡಿಯಲ್ಲಿ ಯಾವುದೇ ರೀತಿಯಲ್ಲಿ ಉಲ್ಲಂಘನೆ ಕಂಡುಬಂದರೆ ಹಾಗೂ ತನ್ನ ದೇಶದ ಅಖಂಡತೆಗೆ ಧಕ್ಕೆ ಒದಗಿಬಂಡರೆ ತನ್ನ ರಕ್ಷಣೆಗೆ ಯಾವುದೇ ಕ್ರಮ ಕೈಗೊಳ್ಳಲು ಈ ಕಾನೂನು ಚೀನಾಗೆ ಅನುವು ಮಾಡಿಕೊಡಲಿದೆ. 

ಈ ನೂತನ ಕಾನೂನಿನಲ್ಲಿ ಗಡಿ ಬಲವರ್ಧನೆ ಮಾತ್ರವಲ್ಲದೆ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಗಡಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ನಿರ್ಮಾಣ ಹಾಗೂ ಅಲ್ಲಿನ ಜನರ ಜೀವನ ಸದೃಢಗೊಳಿಸುವ ಕಾರ್ಯಕ್ರಮಗಳ ಕುರಿತಾಗಿ ಉಲ್ಲೇಖವಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com