ಪ್ರಧಾನಿ ಮೋದಿ ಭೇಟಿ ಮಾಡಿದ ಫ್ರೆಂಚ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್: ಹಿಂದಿಯಲ್ಲಿ ಟ್ವೀಟ್

ಜಿ20 ಶೃಂಗಸಭೆ ನಿಮಿತ್ತ ಇಟಲಿಗೆ ತೆರಳಿರುವ ಪ್ರಧಾನಿ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಇದೇ ಹೊತ್ತಿನಲ್ಲೇ ಫ್ರೆಂಚ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಮೋದಿ-ಮ್ಯಾಕ್ರನ್
ಮೋದಿ-ಮ್ಯಾಕ್ರನ್

ರೋಮ್: ಜಿ20 ಶೃಂಗಸಭೆ ನಿಮಿತ್ತ ಇಟಲಿಗೆ ತೆರಳಿರುವ ಪ್ರಧಾನಿ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಇದೇ ಹೊತ್ತಿನಲ್ಲೇ ಫ್ರೆಂಚ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಫ್ರೆಂಚ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್, 'ರೋಮ್‌ನಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದು ಖುಷಿ ತಂದಿತು. ನಾವು ಭಾರತದೊಂದಿಗೆ ಪರಿಸರ, ಆರೋಗ್ಯ ಮತ್ತು ನಾವೀನ್ಯತೆಯ ಸಾಮಾನ್ಯ ಮಹತ್ವಾಕಾಂಕ್ಷೆಗಳನ್ನು ಹಂಚಿಕೊಳ್ಳುತ್ತೇವೆ. ನಾವು ವಿಶೇಷವಾಗಿ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಸ್ಪಷ್ಟವಾದ ಫಲಿತಾಂಶಗಳಿಗಾಗಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಅಂತೆಯೇ ಇದೇ ವಿಚಾರವಾಗಿ ಪ್ರಧಾನಿ ಮೋದಿ, 'ನನ್ನ ಸ್ನೇಹಿತ, ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ರೋಮ್‌ನಲ್ಲಿ ಭೇಟಿಯಾಗಿದ್ದು ಸಂತೋಷವಾಯಿತು. ನಮ್ಮ ಮಾತುಕತೆಗಳು ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಮತ್ತು ಜನರ-ಜನರ ನಡುವಿನ ಸಂಬಂಧವನ್ನು ಹೆಚ್ಚಿಸುವ ಸುತ್ತ ಸುತ್ತಿಕೊಂಡಿದೆ ಎಂದು ಟ್ವೀಟ್ ಮಾಡಿದ್ದಾರೆ. 

ಅಲ್ಲದೆ ನಾವು ಭಾರತದೊಂದಿಗೆ ಪರಿಸರ, ಆರೋಗ್ಯ ಮತ್ತು ನಾವೀನ್ಯತೆಯ ಸಾಮಾನ್ಯ ಮಹತ್ವಾಕಾಂಕ್ಷೆಗಳನ್ನು ಹಂಚಿಕೊಳ್ಳುತ್ತೇವೆ. ನಾವು ವಿಶೇಷವಾಗಿ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಸ್ಪಷ್ಟವಾದ ಫಲಿತಾಂಶಗಳಿಗಾಗಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com