The New Indian Express
ಕರಾಚಿ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐ ಎಸ್ ಐ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ ಅಫ್ಘಾನಿಸ್ತಾನ ಬಿಕ್ಕಟ್ಟಿನ ಕುರಿತು ಸಮಾಲೋಚನೆ ನಡೆಸಲು 5 ರಾಷ್ಟ್ರಗಳೊಂದಿಗೆ ಸಭೆ ನಡೆಸಿದ್ದಾರೆ. ಚೀನಾ, ಇರಾನ್, ಉಜ್ಬೀಕಿಸ್ತಾನ್, ತಜಿಕಿಸ್ತಾನ್ ಮತ್ತು ತುರ್ಕ್ ಮೆನಿಸ್ತಾನ್ ದೇಶಗಳ ಗುಪ್ತಚರ ಮುಖ್ಯಸ್ಥರು ಈ ಸಭೆಯಲ್ಲಿ ಭಾಗವಹಿಸಿದ್ದಾರೆ.
ಇದನ್ನೂ ಓದಿ: ಹೊಸ ಸರ್ಕಾರ ರಚನೆಗೆ ತಾಂತ್ರಿಕ ಅಡಚಣೆ; ಚೀನಾ- ಪಾಕಿಸ್ತಾನ ಆರ್ಥಿಕ ಕಾರಿಡಾರ್ ಯೋಜನೆ ಸೇರಲು ತಾಲಿಬಾನ್ ಇಂಗಿತ
ದಕ್ಷಿಣ ಏಷ್ಯಾ ಭಾಗದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಬಗ್ಗೆ ಸಭೆಯಲ್ಲಿ ಮಾತುಕತೆ ನಡೆಯಿತು ಎನ್ನಲಾಗಿದೆ. ಈ ಸಭೆ ಬಗ್ಗೆ ಅಧಿಕೃತ ಮಾಹಿತಿಯನ್ನು ಪಾಕ್ ಬಹಿರಂಗಪಡಿಸಿಲ್ಲ.
ಇತ್ತೀಚಿಗಷ್ಟೆ ಐ ಎಸ್ ಐ ಮುಖ್ಯಸ್ಥ ಅಫ್ಘಾನಿಸ್ತಾನಕ್ಕೆ ಭೇಟಿ ನೀಡಿ ತಾಲಿಬಾನ್ ಜೊತೆ ಮಾತುಕತೆ ನಡೆಸಿ ಬಂದಿದ್ದರು ಎನ್ನುವುದು ಗಮನಾರ್ಹ.
ಇದನ್ನೂ ಓದಿ: ಕಾಶ್ಮೀರ ಸಮಸ್ಯೆ ಬಗೆಹರಿಸದೆ ಭಾರತದೊಂದಿಗೆ ಶಾಂತಿ ಮಾತುಕತೆ ಸಾಧ್ಯವೇ ಇಲ್ಲ: ಪಾಕಿಸ್ತಾನ ಪುನರುಚ್ಛಾರ