ಅಧ್ಯಕ್ಷ ಗೋಟಬಯ ಮಾಲ್ಡೀವ್ಸ್ ಗೆ ಪರಾರಿ: ಶ್ರೀಲಂಕಾದಲ್ಲಿ ಆಂತರಿಕ ತುರ್ತು ಪರಿಸ್ಥಿತಿ ಜಾರಿ; ತೀವ್ರಗೊಂಡ ಪ್ರತಿಭಟನೆ

ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದ ಜನರ ಆಕ್ರೋಶಕ್ಕೆ ತುತ್ತಾಗಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಲ್ಡೀವ್ಸ್ ಪರಾರಿಯಾದ ಬೆನ್ನಲ್ಲೇ ಇದೀಗ ಶ್ರೀಲಂಕಾದಲ್ಲಿ ಆಂತರಿಕ ತುರ್ತು ಪರಿಸ್ಥಿತಿ ಜಾರಿ ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.
ಶ್ರೀಲಂಕಾದಲ್ಲಿ ಪ್ರತಿಭಟನೆ
ಶ್ರೀಲಂಕಾದಲ್ಲಿ ಪ್ರತಿಭಟನೆ

ಕೊಲಂಬೋ: ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದ ಜನರ ಆಕ್ರೋಶಕ್ಕೆ ತುತ್ತಾಗಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಲ್ಡೀವ್ಸ್ ಪರಾರಿಯಾದ ಬೆನ್ನಲ್ಲೇ ಇದೀಗ ಶ್ರೀಲಂಕಾದಲ್ಲಿ ಆಂತರಿಕ ತುರ್ತು ಪರಿಸ್ಥಿತಿ ಜಾರಿ ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.

ಈ ಕುರಿತು ಎಎಫ್ ಪಿ ಸುದ್ದಿಸಂಸ್ಥೆ ವರದಿ ಮಾಡಿದ್ದು, ಅಧ್ಯಕ್ಷ ಗೊಟಬಯ ರಾಜಪಕ್ಸೆ ಪಲಾಯನ ಮಾಡಿದ ನಂತರ ಶ್ರೀಲಂಕಾ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದು, ಈ ಕುರಿತು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ ಎಂದು ವರದಿ ಮಾಡಿದೆ. 

ಶ್ರೀಲಂಕಾದಲ್ಲಿ ತೊರೆದಿರುವ ಅಧ್ಯಕ್ಷ ಗೋಟಬಯ ರಾಜಪಕ್ಸ ವಿರುದ್ಧ ಜನರ ಆಕ್ರೋಶ ಮುಂದುವರಿದಿದ್ದು, ರಾಜಧಾನಿ ಕೊಲಂಬೊದಲ್ಲಿ ಜನರು ಬೃಹತ್ ಪ್ರತಿಭಟನಾ ಯಾರ್ಲಿ ನಡೆಸಿದರು. ಪ್ರತಿಭಟನೆ ವೇಳೆ ಹಲವೆಡೆ ಕಲ್ಲುತೂರಾಟ ನಡೆದಿದೆ. ಘರ್ಷಣೆಯಲ್ಲಿ 100ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಉದ್ರಿಕ್ತರನ್ನ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಚ್ ಮಾಡಿದ್ದಾರೆ.

ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಆಶ್ರುವಾಯು ಶೆಲ್​​ಗಳನ್ನು ಸಿಡಿಸಿದರು. ಇದೀಗ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ ಎಂದು ಪ್ರಧಾನಿ ಕಚೇರಿ ಈ ಬಗ್ಗೆ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com