ಕೊನೆಗೂ ರಾಜಪಕ್ಸೆ ರಾಜಿನಾಮೆ: ಶ್ರೀಲಂಕಾ ಹಂಗಾಮಿ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಪ್ರಮಾಣವಚನ ಸ್ವೀಕಾರ

ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕರಿಸಿದರು.
ರಾನಿಲ್ ವಿಕ್ರಮಸಿಂಘೆ
ರಾನಿಲ್ ವಿಕ್ರಮಸಿಂಘೆ

ಕೊಲಂಬೊ: ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕರಿಸಿದರು.

ಗೋತಬಯ ರಾಜಪಕ್ಸೆ ಅವರ ರಾಜೀನಾಮೆಯನ್ನು ಅಧಿಕೃತವಾಗಿ ಅಂಗೀಕರಿಸಿದ ನಂತರ ಪ್ರಧಾನಿ ರನಿಲ್ ವಿಕ್ರಮಸಿಂಘೆ ಶುಕ್ರವಾರ ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸಂಸತ್ತಿನಲ್ಲಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವವರೆಗೆ ವಿಕ್ರಮಸಿಂಘೆ ಅವರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಾರೆ. ಸಂಸತ್ತಿನ ನಂತರ ಮುಂದಿನ ಏಳು ದಿನಗಳಲ್ಲಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ಶ್ರೀಲಂಕಾದ ಸ್ಪೀಕರ್ ಹೇಳಿದ್ದಾರೆ.

ಈ ವಾರದ ಆರಂಭದಲ್ಲಿ ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ ಕೆಲವೇ ಗಂಟೆಗಳ ನಂತರ ಗೋತಬಯ ರಾಜಪಕ್ಸೆ ವಿಕ್ರಮಸಿಂಘೆ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com