ಇಸ್ರೇಲ್ ಪ್ರಧಾನಿಯಾಗಿ ಬೆಂಜಮಿನ್ ನೆತನ್ಯಾಹು ಮತ್ತೆ ಅಧಿಕಾರಕ್ಕೆ

ಇಸ್ರೇಲ್ ಪ್ರಧಾನಿಯಾಗಿ ಬೆಂಜಮಿನ್ ನೆತನ್ಯಾಹು ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆಯಾಗುವುದು ಖಚಿತವಾಗಿದೆ.
ಬೆಂಜಮಿನ್ ನೇತಾನ್ಯಹು
ಬೆಂಜಮಿನ್ ನೇತಾನ್ಯಹು

ಇಸ್ರೇಲ್ ಪ್ರಧಾನಿಯಾಗಿ ಬೆಂಜಮಿನ್ ನೆತನ್ಯಾಹು ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆಯಾಗುವುದು ಖಚಿತವಾಗಿದೆ.

ಇತ್ತೀಚೆಗೆ ನಡೆದಿದ್ದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಇಂದು ಮುಕ್ತಾಯಗೊಂಡಿದ್ದು, ನೆತನ್ಯಾಹು ಭರ್ಜರಿ ಗೆಲುವು ಸಾಧಿಸಿದ್ದು ಎದುರಾಳಿ ಯೇರ್ ಲ್ಯಾಪಿಡ್ ಅವರಿಗೆ ಹಿನ್ನೆಡೆಯುಂಟಾಗಿದೆ.

ಬೆಂಜಮಿನ್ ನೆತನ್ಯಾಹು ಇಸ್ರೇಲ್ ಪ್ರಧಾನಿ ಗೆಲುವಿಗೆ  ಯೈರ್ ಲ್ಯಾಪಿಡ್ ಅಭಿನಂದನೆ ಸಲ್ಲಿಸಿದ್ದಾರೆ. ಬೆಂಜಮಿನ್ ನೆತನ್ಯಾಹು 1996-99 ಮತ್ತು 2009 ರಿಂದ 2021ರ ವರೆಗೆ ಇಸ್ರೆಲ್ ಪ್ರಧಾನಿಯಾಗಿದ್ದರು.

ಮಾಜಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಪಕ್ಷ ಹಾಗೂ ಮಿತ್ರಪಕ್ಷಗಳು 120-ಸೀಟುಗಳ ನೆಸೆಟ್‌ನಲ್ಲಿ ಬಹುಮತವನ್ನು ಪಡೆದುಕೊಳ್ಳುವ ಸಾಧ್ಯತೆಯಿದೆ ಎಂದು ಚುನಾವಣೋತ್ತರ ಸಮೀಕ್ಷೆ ವರದಿ ಹೇಳಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com