ಜಿ20: ರಷ್ಯಾ ವಿದೇಶಾಂಗ ಸಚಿವರಿಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು, ಹೃದಯ ಸಂಬಂಧಿ ಸಮಸ್ಯೆ ಶಂಕೆ 

ಜಿ20 ಶೃಂಗಸಭೆಗಾಗಿ ಬಾಲಿಗೆ ಆಗಮಿಸಿದ್ದ ರಷ್ಯಾ ವಿದೇಶಾಂಗ ಸಚಿವರಿಗೆ ಅನಾರೋಗ್ಯ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. 
ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್
ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್
Updated on

ಬಾಲಿ: ಜಿ20 ಶೃಂಗಸಭೆಗಾಗಿ ಬಾಲಿಗೆ ಆಗಮಿಸಿದ್ದ ರಷ್ಯಾ ವಿದೇಶಾಂಗ ಸಚಿವರಿಗೆ ಅನಾರೋಗ್ಯ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಸಚಿವ ಸೆರ್ಗೆ ಲಾವ್ರೊವ್ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಎದುರಾಗಿರಬಹುದು ಎಂದು ಶಂಕಿಸಲಾಗಿದೆ.

ಈ ಮಾಹಿತಿಯನ್ನು ಇಂಡೋನೇಷ್ಯಾದ ಅಧಿಕಾರಿಗಳು ದೃಢಪಡಿಸಿದ್ದು,  ರಷ್ಯಾದ ಸಚಿವರಿಗೆ ದ್ವೀಪ ರಾಷ್ಟ್ರದ ರೆಸಾರ್ಟ್ ನಲ್ಲಿ ಇಂಡೋನೇಶ್ಯಾ ಸರ್ಕಾರದ ಮೂವರು ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. 

ಘಟನೆಗೆ ಸಂಬಂಧಿಸಿದಂತೆ ಯಾರೊಬ್ಬರೂ ತಮ್ಮ ಗುರುತು ಬಹಿರಂಗಪಡಿಸಲು ಅಥವಾ ಸಾರ್ವಜನಿಕವಾಗಿ ಈ ವಿಷಯವನ್ನು ಚರ್ಚಿಸಲು ನಿರಾಕರಿಸಿದ್ದಾರೆ. ಲಭ್ಯವಿರುವ ಮಾಹಿತಿಗಳ ಪ್ರಕಾರ, ಲಾವ್ರೊವ್ ಅವರಿಗೆ ಹೃದಯ ಸಂಬಂಧಿತ ಚಿಕಿತ್ಸೆ ಕೊಡಿಸಲಾಗುತ್ತಿದೆ, ಅಲ್ಲಿನ ರಷ್ಯಾ ರಾಯಭಾರ ಕಚೇರಿ ಅಧಿಕಾರಿಗಳು ತಕ್ಷಣದ ಪ್ರತಿಕ್ರಿಯೆಗೆ ಲಭ್ಯವಿರಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com