ಬ್ರಿಟನ್‍ ಪ್ರಧಾನಿ ಹುದ್ದೆ ರೇಸ್‍ನಿಂದ ಹಿಂದೆ ಸರಿದ ಬೋರಿಸ್ ಜಾನ್ಸನ್: ರಿಷಿ ಸುನಕ್‍ ಹಾದಿ ಸುಗಮ, ವ್ಯಾಪಕ ಬೆಂಬಲ

ಕನ್ಸರ್ವೇಟಿವ್ ಪಕ್ಷದ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಭಾನುವಾರ ಹೇಳಿದ್ದಾರೆ.
ರಿಷಿ ಸುನಕ್
ರಿಷಿ ಸುನಕ್

ಲಂಡನ್ : ಕನ್ಸರ್ವೇಟಿವ್ ಪಕ್ಷದ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಭಾನುವಾರ ಹೇಳಿದ್ದಾರೆ.

ಪ್ರಧಾನಿ ಹುದ್ದೆ ರೇಸ್‍ನಿಂದ ಹಿಂದೆ ಸರಿದಿರುವುದಾಗಿ ಬೋರಿಸ್ ಜಾನ್ಸನ್ ಪ್ರಕಟಿಸಿರುವ  ಹಿನ್ನೆಲೆಯಲ್ಲಿ ಭಾರತೀಯ ಮೂಲದ ರಿಷಿ ಸುನಕ್ ಹಾದಿ ಸುಗಮವಾಗಿದೆ ಎಂದು ಹೇಳಲಾಗುತ್ತಿದೆ.

100ಕ್ಕೂ ಹೆಚ್ಚು ಮಂದಿ ಟೋರಿ ಸಂಸದರ ಬೆಂಬಲ ಹೊಂದಿರುವ ಭಾರತೀಯ ಮೂಲದ ರಿಷಿ ಸುನಕ್ ಅವರು ಪ್ರಧಾನಿ ಹುದ್ದೆಗೆ ಕನ್ಸರ್ವೇಟಿವ್ ಪಾರ್ಟಿಯ ಅಭ್ಯರ್ಥಿಯಾಗಿ ಆಯ್ಕೆಯಾಗುವ ಸಾಧ್ಯತೆ ನಿಚ್ಚಳವಾಗಿದೆ.

ಪ್ರಧಾನಿ ಹುದ್ದೆ ರೇಸ್‍ನಲ್ಲಿ ಗೆದ್ದವರು ಹಾಲಿ ಪ್ರಧಾನಿ ಲಿಝ್ ಟ್ರುಸ್ ಅವರ ಉತ್ತರಾಧಿಕಾರಿಯಾಗಲಿದ್ದಾರೆ. ತಮಗೆ 102 ಸಂಸದರ ಬೆಂಬಲ ಇದೆ ಎಂದು ಬೋರಿಸ್ ಜಾನ್ಸನ್ ಹೇಳಿಕೊಂಡಿದ್ದಾರೆ. ಆದರೆ ಇದು ಸೂಕ್ತ ಸಮಯವಲ್ಲ ಎಂಬ ಕಾರಣಕ್ಕೆ ತಾವು ಸ್ಪರ್ಧೆಯಿಂದ ಹಿಂದೆ ಸರಿಯುತ್ತಿರುವುದಾಗಿ ಅವರು ಪ್ರಕಟಿಸಿದ್ದಾರೆ.

ಸ್ಪರ್ಧೆಯ ಮುಂಚೂಣಿಯಲ್ಲಿರುವ ಸುನಕ್‌ ಅವರು ಬೋರಿಸ್‌ ಜಾನ್ಸನ್‌ ಅವರಿಗಿಂತಲೂ ಹೆಚ್ಚಿನ ಸದಸ್ಯರ ಬೆಂಬಲ ಹೊಂದಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್‌ ವರದಿ ಮಾಡಿದೆ.  ಕನ್ಸರ್ವೇಟಿವ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ರಿಷಿ ಸುನಕ್‌ ಭಾನುವಾರ ಘೋಷಣೆ ಮಾಡಿದ್ದರು.

ಭಾನುವಾರ ಈ ಕುರಿತು ಟ್ವೀಟ್ ಮಾಡಿದ್ದ ಅವರು, ‘ಬ್ರಿಟನ್ ಒಂದು ದೊಡ್ಡ ದೇಶ. ಆದರೆ, ಸದ್ಯ ನಾವು ತೀವ್ರವಾದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇವೆ. ಕನ್ಸರ್ವೇಟಿವ್ ಪಕ್ಷದ ಮುಂದಾಳಾಗಿ ನಾನು ಬ್ರಿಟನ್‌ನ ಪ್ರಧಾನಿಯಾಗಲು ಇಚ್ಚಿಸುತ್ತೇನೆ. ಆ ಮೂಲಕ ಪ್ರಸ್ತುತ ಸಮಸ್ಯೆಗಳನ್ನು ಬಗೆಹರಿಸುವ ವಿಶ್ವಾಸ ಹೊಂದಿದ್ದೇನೆ’ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com