ಕಾಬೂಲ್ ನಲ್ಲಿ ಸ್ಫೋಟ: ರಷ್ಯಾದ ಇಬ್ಬರು ರಾಜತಾಂತ್ರಿಕರು ಸೇರಿದಂತೆ 20 ಮಂದಿ ಸಾವು

ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕ ದಾಳಿಗಳು ಹೆಚ್ಚಾಗುತ್ತಿದ್ದು ತಾಲಿಬಾನ್ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಕಾಬೂಲ್ ನಲ್ಲಿರುವ ದೇಶದ ರಾಯಭಾರ ಕಚೇರಿಯ ಹೊರಗೆ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ರಷ್ಯಾದ ರಾಜತಾಂತ್ರಿಕರು ಸೇರಿದಂತೆ 20 ಮಂದಿ ಸಾವನ್ನಪ್ಪಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕ ದಾಳಿಗಳು ಹೆಚ್ಚಾಗುತ್ತಿದ್ದು ತಾಲಿಬಾನ್ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಕಾಬೂಲ್ ನಲ್ಲಿರುವ ದೇಶದ ರಾಯಭಾರ ಕಚೇರಿಯ ಹೊರಗೆ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ರಷ್ಯಾದ ರಾಜತಾಂತ್ರಿಕರು ಸೇರಿದಂತೆ 20 ಮಂದಿ ಸಾವನ್ನಪ್ಪಿದ್ದಾರೆ.

ಕಾಬೂಲ್ ನ ದಾರುಲಾಮನ್ ರಸ್ತೆಯಲ್ಲಿರುವ ರಷ್ಯಾದ ರಾಯಭಾರ ಕಚೇರಿಯ ಪ್ರವೇಶದ್ವಾರದ ಬಳಿ ಆತ್ಮಾಹುತಿ ಬಾಂಬರ್ ಆಗಮಿಸುತ್ತಿದ್ದಂತೆ ಶಸ್ತ್ರಸಜ್ಜಿತ ಗಾರ್ಡ್ ಗಳು ಆತನ ಮೇಲೆ ಗುಂಡು ಹಾರಿಸಿದ್ದರು. ಈ ವೇಳೆ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ ಎಂದು ಅಫ್ಘಾನ್ ಪೊಲೀಸರು ತಿಳಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿರುವ ರಷ್ಯಾದ ರಾಯಭಾರಿ ಕಚೇರಿಯ ಜನರು ವೀಸಾಕ್ಕಾಗಿ ಕಾಯುತ್ತಿದ್ದರು. ಇದನ್ನೇ ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬರ್ ಆತ್ಮಾಹುತಿ ದಾಳಿಗೆ ಮುಂದಾಗಿದ್ದನು. ಆತನನ್ನು ಗಾರ್ಡ್ ಗಳು ಗುರುತಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ ಎಂದು ಪೊಲೀಸ್ ಮುಖ್ಯಸ್ಥ ಮೌಲಾವಿ ಸಬೀರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com