ವಿದೇಶ

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹತ್ಯೆಗೆ ವಿಫಲ ಯತ್ನ; ವರದಿ

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹತ್ಯೆಗೆ ವಿಫಲ ಯತ್ನ ನಡೆದಿರುವುದು ಬೆಳಕಿಗೆ ಬಂದಿದೆ.

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹತ್ಯೆಗೆ ವಿಫಲ ಯತ್ನ; ವರದಿ
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್
Published On :

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹತ್ಯೆಗೆ ವಿಫಲ ಯತ್ನ ನಡೆದಿರುವುದು ಬೆಳಕಿಗೆ ಬಂದಿದೆ. 

ಯೂರೋ ವೀಕ್ಲೀ ಈ ಮಾಹಿತಿಯನ್ನು ವರದಿ ಮಾಡಿದ್ದು, ವರದಿಯ ಪ್ರಕಾರ, ಪುಟಿನ್ ಈ ದಾಳಿಯಲ್ಲಿ ಯಾವುದೇ ಅಪಾಯವಾಗದೇ ಪಾರಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕೆಲವರನ್ನು ಈಗಾಗಲೇ ಬಂಧಿಸಲಾಗಿದೆ. 

ರಷ್ಯಾದಲ್ಲಿ ಮಾಧ್ಯಮಗಳಿಗೆ ನಿರ್ಬಂಧವಿದ್ದು, ಹತ್ಯೆ ಯತ್ನ ಯಾವಾಗ ನಡೆಯಿತು ಎಂಬುದರ ಬಗ್ಗೆ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಆದರೆ ಈ ಘಟನೆ ಸಂಬಂಧ ಒಂದಷ್ಟು ಮಂದಿಯನ್ನು ಬಂಧಿಸಲಾಗಿದೆ.

ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಪುಟಿನ್ ಸಂಚರಿಸುತ್ತಿದ್ದ ಕಾರಿನ ಎಡ ಭಾಗದ ಚಕ್ರದ ಬಳಿ ಜೋರಾದ ಶಬ್ದವಾಗಿದ್ದು, ಬೆಂಗಾವಲು ವಾಹನಗಳ ಪೈಕಿ ಮೊದಲ ವಾಹನಕ್ಕೆ ಆಂಬುಲೆನ್ಸ್ ಅಡ್ಡ ಬಂದಿದೆ, ಏಕಾ ಏಕಿ ಅಡಚಣೆ ಉಂಟಾದ ಹಿನ್ನೆಲೆಯಲ್ಲಿ ಎರಡನೇ ವಾಹನ ನಿಲ್ಲಿಸದೇ ವೇಗವಾಗಿ ಸಂಚರಿಸಿದೆ ಎಂದು ಯುರೋ ವೀಕ್ಲೀ ವರದಿಯಲ್ಲಿ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.