ಅಫ್ಘಾನಿಸ್ತಾನದ ರಾಜಧಾನಿ ಕಾಬುಲ್‌ನಲ್ಲಿನ ಶಿಕ್ಷಣ ಕೇಂದ್ರದಲ್ಲಿ ಆತ್ಮಹತ್ಯಾ ಬಾಂಬ್ ದಾಳಿ, 19 ಮಂದಿ ಸಾವು

ಅಫ್ಘಾನಿಸ್ತಾನದ ರಾಜಧಾನಿ ಕಾಬುಲ್‌ನ ಶೈಕ್ಷಣಿಕ ಕೇಂದ್ರದಲ್ಲಿ ಶುಕ್ರವಾರ ಬೆಳಗ್ಗೆ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾಗ ನಡೆದ ಆತ್ಮಹತ್ಯಾ ದಾಳಿಯಲ್ಲಿ 19 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕಾಬುಲ್: ಅಫ್ಘಾನಿಸ್ತಾನದ ರಾಜಧಾನಿಯ ಶೈಕ್ಷಣಿಕ ಕೇಂದ್ರವೊಂದರಲ್ಲಿ ಶುಕ್ರವಾರ ಬೆಳಗ್ಗೆ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾಗ ಆತ್ಮಹತ್ಯಾ ದಾಳಿಯಲ್ಲಿ 19 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಹಜಾರಾ ಸಮುದಾಯದ ಪ್ರಧಾನವಾಗಿ ಶಿಯಾ ಮುಸ್ಲಿಂರು ವಾಸಿಸುತ್ತಿರುವ ಪ್ರದೇಶವಾಗಿರುವ ಪಶ್ಚಿಮ ಕಾಬೂಲ್‌ನ ದಶ್ತ್-ಎ-ಬರ್ಚಿ ಸಮೀಪದಲ್ಲಿ ದಾಳಿ ಸಂಭವಿಸಿದೆ. ಅಫ್ಘಾನಿಸ್ತಾನದಲ್ಲಿ ನಡೆದ ಕೆಲವು ಮಾರಣಾಂತಿಕ ದಾಳಿಗಳಲ್ಲಿ ಇದು ಒಂದಾಗಿದೆ.

ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾಗ ಶೈಕ್ಷಣಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ದುರದೃಷ್ಟವಶಾತ್, 19 ಜನರು ಸಾವಿಗೀಡಾಗಿದ್ದು, 27 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ವಕ್ತಾರ ಖಾಲಿದ್ ಝದ್ರಾನ್ ಹೇಳಿದ್ದಾರೆ.

ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ ವಿಡಿಯೋಗಳು ಮತ್ತು ಸ್ಥಳೀಯ ಮಾಧ್ಯಮಗಳು ಪ್ರಸಾರ ಮಾಡಿರುವ ಫೊಟೋಗಳು ರಕ್ತಸಿಕ್ತ ಸಂತ್ರಸ್ತರನ್ನು ಸ್ಥಳದಿಂದ ಒಯ್ಯುತ್ತಿರುವುದನ್ನು ಕಾಣಬಹುದು.

ಸದ್ಯ ಭದ್ರತಾ ತಂಡಗಳು ಸ್ಥಳಕ್ಕೆ ಆಗಮಿಸಿದ್ದು, ದಾಳಿಯ ಸ್ವರೂಪ ಮತ್ತು ಸಾವುನೋವುಗಳ ವಿವರಗಳನ್ನು ನಂತರ ಬಿಡುಗಡೆ ಮಾಡಲಾಗುವುದು. ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವುದು ಶತ್ರುಗಳ ಅಮಾನವೀಯ ಕ್ರೌರ್ಯ ಮತ್ತು ನೈತಿಕ ಮಾನದಂಡಗಳ ಕೊರತೆಯನ್ನು ಸಾಬೀತುಪಡಿಸುತ್ತದೆ ಎಂದು ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ನಫಿ ಟಾಕೋರ್ ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷ ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದಿರುವ ತಾಲಿಬಾನ್ ಅಧಿಕಾರಕ್ಕೆ ಮರಳಿದ್ದು, ಎರಡು ದಶಕಗಳ ಯುದ್ಧವನ್ನು ಕೊನೆಗೊಳಿಸಿದೆ ಮತ್ತು ಹಿಂಸಾಚಾರದಲ್ಲಿ ಗಮನಾರ್ಹವಾದ ಕಡಿತ ಉಂಟಾಗಿದೆ. ಆದರೆ ಇತ್ತೀಚಿನ ತಿಂಗಳುಗಳಲ್ಲಿ ಅಫ್ಘಾನಿಸ್ತಾನದಲ್ಲಿ ಭದ್ರತೆಯು ಹದಗೆಡಲು ಪ್ರಾರಂಭಿಸಿದೆ.

ಅಫ್ಘಾನಿಸ್ತಾನದ ಶಿಯಾ ಹಜಾರಾಗಳು ದಶಕಗಳಿಂದ ಕಿರುಕುಳವನ್ನು ಎದುರಿಸುತ್ತಿದ್ದಾರೆ. 1996 ರಿಂದ 2001 ರವರೆಗೆ ತಾಲಿಬಾನ್ ಮೊದಲ ಬಾರಿಗೆ ಆಳ್ವಿಕೆ ನಡೆಸಿದಾಗಿನಿಂದಲೂ ಇದು ಮುಂದುವರಿದಿದೆ. ಇದೀಗ ಅವರು  ಮತ್ತೆ ಅಧಿಕಾರಕ್ಕೆ ಬಂದ ನಂತರ ಅಂತಹ ಆರೋಪಗಳು ಮತ್ತೆ ಕಾಣಿಸಿಕೊಂಡವು.

ತಾಲಿಬಾನ್‌ನ ಶತ್ರುವಾಗಿರುವ ಇಸ್ಲಾಮಿಕ್ ಸ್ಟೇಟ್ ಗುಂಪಿನಿಂದ ಹಜಾರಾಗಳು ಆಗಾಗ್ಗೆ ದಾಳಿಗೆ ಗುರಿಯಾಗುತ್ತಾರೆ. ಇಬ್ಬರೂ ಅವರನ್ನು ಧರ್ಮದ್ರೋಹಿಗಳೆಂದು ಪರಿಗಣಿಸಿದ್ದಾರೆ. ಲೆಕ್ಕವಿಲ್ಲದಷ್ಟು ದಾಳಿಗಳು ಈ ಪ್ರದೇಶವನ್ನು ಧ್ವಂಸಗೊಳಿಸಿವೆ. ಅನೇಕ ದಾಳಿಗಳು ಮಕ್ಕಳು, ಮಹಿಳೆಯರು ಮತ್ತು ಶಾಲೆಗಳನ್ನು ಗುರಿಯಾಗಿಸಿಕೊಂಡಿವೆ.

ಸದ್ಯ ಯಾವುದೇ ಸಂಘಟನೆ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. ಆದರೆ, ಒಂದು ವರ್ಷದ ಹಿಂದೆ ಐಎಸ್ ಅದೇ ಪ್ರದೇಶದ ಶೈಕ್ಷಣಿಕ ಕೇಂದ್ರದ ಮೇಲೆ ಆತ್ಮಾಹುತಿ ದಾಳಿ ನಡೆಸಿತ್ತು. ದಾಳಿಯಲ್ಲಿ ವಿದ್ಯಾರ್ಥಿಗಳು ಸೇರಿದಂತೆ 24 ಜನರು ಸಾವಿಗೀಡಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com