ಶ್ರೀಲಂಕಾ ಅಧ್ಯಕ್ಷರ ನಿವಾಸದ ಎದುರು ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: 45 ಮಂದಿ ಬಂಧನ

ಶ್ರೀಲಂಕಾದ ಆರ್ಥಿಕ ಸ್ಥಿತಿ ನಿರಂತರವಾಗಿ ಕುಸಿಯ ತೊಡಗಿದೆ. ಖರ್ಚು ಕಡಿತ ಕಾರ್ಯದಲ್ಲಿ ಮಗ್ನವಾಗಿರುವ ಶ್ರೀಲಂಕಾ ಸರ್ಕಾರ, ಈಗ ವಿದ್ಯುತ್ ಉಳಿಸಲು ಬೀದಿ ದೀಪಗಳನ್ನು ಆಫ್ ಮಾಡುವ ನಿರ್ಧಾರ ಕೈಗೊಂಡಿದೆ.

Published: 01st April 2022 08:23 AM  |   Last Updated: 01st April 2022 02:22 PM   |  A+A-


File photo

ಸಂಗ್ರಹ ಚಿತ್ರ

Online Desk

ಕೊಲಂಬೊ: ಶ್ರೀಲಂಕಾದ ಆರ್ಥಿಕ ಸ್ಥಿತಿ ನಿರಂತರವಾಗಿ ಕುಸಿಯ ತೊಡಗಿದೆ. ಖರ್ಚು ಕಡಿತ ಕಾರ್ಯದಲ್ಲಿ ಮಗ್ನವಾಗಿರುವ ಶ್ರೀಲಂಕಾ ಸರ್ಕಾರ, ಈಗ ವಿದ್ಯುತ್ ಉಳಿಸಲು ಬೀದಿ ದೀಪಗಳನ್ನು ಆಫ್ ಮಾಡುವ ನಿರ್ಧಾರ ಕೈಗೊಂಡಿದೆ.

ಇಲ್ಲಿನ ಪ್ರಮುಖ ಷೇರುಪೇಟೆಯ ವಹಿವಾಟನ್ನೂ ಈಗಾಗಲೇ ಸ್ಥಗಿತಗೊಳಿಸಲಾಗಿದೆ. 22 ಮಿಲಿಯನ್ ಜನರಿರುವ ದ್ವೀಪ ರಾಷ್ಟ್ರದಲ್ಲಿ ಇಂಧನ ಆಮದು ಮಾಡಿಕೊಳ್ಳಲು ಸರ್ಕಾರಕ್ಕೆ ಸಾಕಷ್ಟು ವಿದೇಶಿ ವಿನಿಮಯವಿಲ್ಲದ ಕಾರಣ ದಿನಕ್ಕೆ 13 ಗಂಟೆಗಳ ಕಾಲ ಕತ್ತಲೆಯಲ್ಲಿ ಬದುಕು ತಳ್ಳುತ್ತಿದ್ದಾರೆ.

ವಿದ್ಯುತ್ ಉಳಿತಾಯ ಮಾಡಲು ದೇಶಾದ್ಯಂತ ಬೀದಿ ದೀಪಗಳನ್ನು ಬಂದ್ ಮಾಡುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ವಿದ್ಯುತ್ ಸಚಿವೆ ಪವಿತ್ರಾ ವನ್ನಿಯಾರಾಚಿ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: ಶ್ರೀಲಂಕಾ: ಭಾರತಕ್ಕೆ ಮೂರು ಬೃಹತ್ ಪವನಶಕ್ತಿ ಉತ್ಪಾದನಾ ಪ್ರಾಜೆಕ್ಟ್ ಹಸ್ತಾಂತರಿಸಲು ನಿರ್ಧಾರ

ಆಹಾರ ಹಣದುಬ್ಬರ ಶೇಕಡ 30.2
ವಿದ್ಯುತ್ ಕಡಿತವು ಈಗಾಗಲೇ ಅಗತ್ಯ ವಸ್ತುಗಳ ಕೊರತೆಯಿಂದ ತತ್ತರಿಸುತ್ತಿರುವ ಶ್ರೀಲಂಕಾದ ಸಂಕಷ್ಟಗಳನ್ನು ಹೆಚ್ಚಿಸಿದೆ. ಅಲ್ಲದೆ ಪ್ರತಿಯೊಂದು ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿವೆ. ಒಂದು ವರ್ಷದ ಹಿಂದಿನ ಅವಧಿಗೆ ಹೋಲಿಸಿದರೆ ಮಾರ್ಚ್‌ನಲ್ಲಿ ಚಿಲ್ಲರೆ ಹಣದುಬ್ಬರವು 18.7% ಕ್ಕೆ ಏರಿದೆ ಎಂದು ಅಂಕಿಅಂಶ ಇಲಾಖೆ ತಿಳಿಸಿದೆ.

ಕಳೆದ ವರ್ಷ ಕರೆನ್ಸಿ ಅಪಮೌಲ್ಯೀಕರಣ ಮತ್ತು ರಾಸಾಯನಿಕ ಗೊಬ್ಬರಗಳ ಮೇಲಿನ ನಿಷೇಧದ ನಂತರ ಆಹಾರ ಹಣದುಬ್ಬರವು ಮಾರ್ಚ್‌ನಲ್ಲಿ 30.2%ಕ್ಕೆ ಏರಿಕೆಯಾಯಿತು. ಫಸ್ಟ್ ಕ್ಯಾಪಿಟಲ್ ರಿಸರ್ಚ್‌ನ ಸಂಶೋಧನಾ ಮುಖ್ಯಸ್ಥ ಡಿಮಂತ ಮ್ಯಾಥ್ಯೂ, ದಶಕವೊಂದರಲ್ಲಿ ಶ್ರೀಲಂಕಾ ತನ್ನ ಕೆಟ್ಟ ಹಣದುಬ್ಬರದ ಹಂತವನ್ನು ಅನುಭವಿಸುತ್ತಿದೆ ಎಂದು ಹೇಳಿದರು.

ಶನಿವಾರದಂದು ಭಾರತದಿಂದ 500 ಮಿಲಿಯನ್ ಡಾಲರ್ ಆರ್ಥಿಕ ನೆರವಿನಡಿಯಲ್ಲಿ ಡೀಸೆಲ್ ಸಾಗಣೆಯನ್ನು ನಿರೀಕ್ಷಿಸಲಾಗಿದೆ ಎಂದು ವನ್ನಿಯಾರಾಚಿ ತಿಳಿಸಿದರು. ಆದರೂ ಇದರಿಂದ ಪರಿಸ್ಥಿತಿ ಸುಧಾರಿಸುವ ನಿರೀಕ್ಷೆ ಇಲ್ಲ. ಒಮ್ಮೆ ಬಂದರೆ ಲೋಡ್ ಶೆಡ್ಡಿಂಗ್ ಅವಧಿಯನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದು ಸಚಿವರು ಹೇಳಿದರು. ಆದರೆ ಮಳೆ ಬಾರದೆ ಇದ್ದರೆ ಬಹುಶಃ ಮೇ ತಿಂಗಳಲ್ಲಿ ಸ್ವಲ್ಪ ಸಮಯದವರೆಗೆ ವಿದ್ಯುತ್ ಕಡಿತವನ್ನು ಮುಂದುವರಿಸಬೇಕಾಗುತ್ತದೆ. ನಾವು ಬೇರೇನೂ ಮಾಡಲು ಸಾಧ್ಯವಿಲ್ಲ. ಜಲವಿದ್ಯುತ್ ಯೋಜನೆಗಳನ್ನು ನಡೆಸುತ್ತಿರುವ ಜಲಾಶಯಗಳಲ್ಲಿನ ನೀರಿನ ಮಟ್ಟವು ದಾಖಲೆಯ ಮಟ್ಟಕ್ಕೆ ಕುಸಿದಿದೆ ಎಂದು ತಿಳಿಸಿದರು.

ಶ್ರೀಲಂಕಾ ಅನೇಕ ದೇಶಗಳಿಂದ ಸಾಲವನ್ನು ಪಡೆದುಕೊಂಡಿದೆ. ಅಲ್ಲದೆ ಜನವರಿಯಲ್ಲಿ ವಿದೇಶಿ ವಿನಿಮಯ ಸಂಗ್ರಹವು ಶೇಕಡ 70ಕ್ಕಿಂತ ಕುಸಿದು 2.36 ಬಿಲಿಯನ್‌ ಡಾಲರ್ ಗೆ ತಲುಪಿದೆ. ವಿದೇಶಿ ವಿನಿಮಯ ಕೊರತೆಯಿಂದ ದೇಶದಲ್ಲಿರುವ ಬಹುತೇಕ ಅಗತ್ಯ ವಸ್ತುಗಳು, ಔಷಧಗಳು, ಪೆಟ್ರೋಲ್, ಡೀಸೆಲ್ ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತಿಲ್ಲ. ದೇಶದಲ್ಲಿ ಅಡುಗೆ ಅನಿಲ ಮತ್ತು ವಿದ್ಯುತ್ ಕೊರತೆಯಿಂದಾಗಿ ಸುಮಾರು 1,000 ಬೇಕರಿಗಳನ್ನು ಮುಚ್ಚಲಾಗಿದೆ. ಅಲ್ಲದೆ ಅಳಿದುಳಿದ ಬೇಕರಿಗಳಲ್ಲಿ ಸರಿಯಾಗಿ ಉತ್ಪಾದನೆಯಾಗುತ್ತಿಲ್ಲ.

ಇದನ್ನೂ ಓದಿ: ಇಂಧನ ಕೊರತೆಯಿಂದ ತೀವ್ರ ಪ್ರತಿಭಟನೆ, ಹತ್ಯೆ: ಭದ್ರತಾ ಪಡೆ ನಿಯೋಜಿಸಿದ ಶ್ರೀಲಂಕಾ ಸರ್ಕಾರ

ಶ್ರೀಲಂಕಾ ಅಧ್ಯಕ್ಷರ ಮನೆ ಮುಂದೆ ಹಿಂಸಾತ್ಮಕ ಪ್ರತಿಭಟನೆ: 45 ಮಂದಿ ಬಂಧನ
ಆರ್ಥಿಕ ಬಿಕ್ಕಟ್ಟಿನಿಂದ ನಲುಗುತ್ತಿರುವ ಶ್ರೀಲಂಕಾದಲ್ಲಿ ಗುರುವಾರ ತಡರಾತ್ರಿ ಪ್ರತಿಭಟನೆಗಳು ಆರಂಭವಾಗಿದ್ದು, ಈ ಪ್ರತಿಭಟನೆಗಳು ಇದೀಗ ಹಿಂಸಾತ್ಮರ ರೂಪ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರ ನಿವಾಸದ ಮುಂದೆ ಸುಮಾರು ಐದು ಸಾವಿರಕ್ಕೂ ಹೆಚ್ಚು ಜನರು ಪ್ರತಿಭಟನೆ ನಡೆಸಿದ್ದಾರೆ. ರಾಜಪಕ್ಸೆ ಅವರ ರಾಜೀನಾಮೆಗೆ ಒತ್ತಾಯಿಸಿರುವ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ.

ಪ್ರತಿಭಟನೆಯನ್ನು ಹತ್ತಿಕ್ಕಲು ಅರೆಸೇನಾ ಪೊಲೀಸ್ ಘಟಕ, ವಿಶೇಷ ಕಾರ್ಯಪಡೆಯನ್ನು ನಿಯೋಜಿಸಲಾಗಿತ್ತು. ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಸಿಡಿಸಲಾಗಿದೆ. ಆಕ್ರೋಶಭರಿತ ಪ್ರತಿಭಟನಾಕಾರರು ಪೊಲೀಸರ ಮೇಲೆ ಬಾಟಲಿ ಹಾಗೂ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಗಳು ತಿಳಿಸಿವೆ.

ಪ್ರತಿಭಟನೆ ಹಿಂಸಾತ್ಮಕ ರೂಪಪಡೆದುಕೊಂಡ ಹಿನ್ನೆಲೆಯಲ್ಲಿ ಹಲವೆಡೆ ಕರ್ಫ್ಯೂ ಕೂಡ ಜಾರಿ ಮಾಡಲಾಗಿತ್ತು. ನಂತರ ಬೆಳಿಗ್ಗೆ 5 ಗಂಟೆಗೆ ಹಿಂತೆಗೆದುಕೊಳ್ಳಲಾಯಿತು. ಹಿಂಸಾಚಾರದಲ್ಲಿ ಪೊಲೀಸರು, ಪತ್ರಕರ್ತರು ಸೇರಿದಂತೆ ಒಟ್ಟು 50 ಮಂದಿ ಗಾಯಗೊಂಡಿದ್ದು, ಎಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ನಡುವೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 45 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Stay up to date on all the latest ವಿದೇಶ news
Poll
Kharge-tharoor

ಕಾಂಗ್ರೆಸ್ ಎದುರಿಸುತ್ತಿರುವ ಸವಾಲುಗಳನ್ನು ನಿಭಾಯಿಸಲು ಯಾರು ಹೆಚ್ಚು ಸೂಕ್ತರು?


Result
ಮಲ್ಲಿಕಾರ್ಜುನ ಖರ್ಗೆ
ಶಶಿ ತರೂರ್

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp