ಇಸ್ರೇಲ್ ನಲ್ಲಿ ಉಗ್ರರ ದಾಳಿ: ಇಬ್ಬರ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯ

ಇಸ್ರೇನ್'ನ ಟೆಲ್ ಅವೀವ್ನಲ್ಲಿ ಗುರುವಾರ್ ರಾತ್ರಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿ, 8ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

Published: 08th April 2022 07:48 AM  |   Last Updated: 08th April 2022 11:24 AM   |  A+A-


Photo of a suspect released by Israel Police

ದಾಳಿ ನಡೆಸಿದ ಉಗ್ರ

Online Desk

ಟೆಲ್ ಅವೀವ್: ಇಸ್ರೇನ್'ನ ಟೆಲ್ ಅವೀವ್ನಲ್ಲಿ ಗುರುವಾರ್ ರಾತ್ರಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿ, 8ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ದಾಳಿ ನಡೆಸಿದ ಉಗ್ರನ ಚಿತ್ರವನ್ನು ಇಸ್ರೇಲ್ ಪೊಲೀಸರು ಬಿಡುಗಡೆ ಮಾಡಿದ್ದು, ವ್ಯಕ್ತಿಯ ಕುರಿತು ಮಾಹಿತಿ ತಿಳಿದರೆ ಮಾಹಿತಿ ನೀಡುವಂತೆ ಜನತೆಗೆ ಮನವಿ ಮಾಡಿಕೊಂಡಿದೆ.

ಚಿತ್ರದಲ್ಲಿರುವ ವ್ಯಕ್ತಿ ಕಪ್ಪು ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿದ್ದು, ಆತನ ಬಳಿ ಪಿಸ್ತೂಲ್ ಇರುವ ಸಾಧ್ಯತೆ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ಪ್ರಧಾನಿಗೆ ಕೋವಿಡ್: ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ ದಿಢೀರ್ ರದ್ದು!

ಟೆಲ್ ಅವೀವ್ ನಗರದ ಡಿಜೆನ್‌ಗಾಫ್ ಸ್ಟ್ರೀಟ್‌ನ ಹಲವು ಸ್ಥಳಗಳಲ್ಲಿ ಈ ಭಯೋತ್ಪಾದಕರ ದಾಳಿ ನಡೆದಿದೆ ಎಂದು ಪೊಲೀಸ್ ವಕ್ತಾರ ಎಲಿ ಲೆವಿ ಮಾಹಿತಿ ನೀಡಿದ್ದಾರೆ.

ಟೆಲ್ ಅವಿವ್‌ನ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾದ ಡಿಜೆನ್‌ಗಾಫ್ ಸ್ಟ್ರೀಟ್‌ ಕೆಫೆಗಳು ಮತ್ತು ಬಾರ್‌ಗಳಿಂದ ಕೂಡಿದ್ದು, ಈ ಪ್ರದೇಶದಲ್ಲಿ ಉಗ್ರನೋರ್ವ ಗುಂಡಿನ ದಾಳಿ ನಡೆಸಿದ್ದಾನೆಂದು ತಿಳಿದುಬಂದಿದೆ.

ಈ ನಡುವೆ ದಾಳಿಯಲ್ಲಿ ಗಾಯಗೊಂಡಿದ್ದ 10 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಉಳಿದ 8 ಮಂದಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ಇಸ್ರೇಲ್ ಪ್ರಧಾನಿಗೆ ಕೋವಿಡ್ ಸೋಂಕು: ಭಾರತ ಪ್ರವಾಸಕ್ಕೆ ಗೈರು ಸಾಧ್ಯತೆ!!

ಘಟನೆ ತೀವ್ರ ನೋವನ್ನುಂಟು ಮಾಡಿದೆ. ಹತ್ಯೆಗೀಡಾದವರ ಕುಟುಂಬಗಳಿಗೆ ಸಂತಾಪವನ್ನು ಸೂಚಿಸುತ್ತೇನೆ ಮತ್ತು ಗಾಯಾಳುಗಳು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನಫ್ತಾಲಿ ಬೆನೆಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಟೆಲ್ ಅವಿವ್‌ನಲ್ಲಿ ಹತ್ಯಾಕಾಂಡವನ್ನು ನಡೆಸಿದ ಉಗ್ರನಿಗಾಗಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ.  ಭಯೋತ್ಪಾದಕ ಎಲ್ಲಿದ್ದರೂ ಆತನನ್ನು ಸುಮ್ಮನೆ ಬಿಡುವುದಿಲ್ಲ. ಉಗ್ರನಿಗೆ ಪರೋಕ್ಷವಾಗಿ ಅಥವಾ ನೇರವಾಗಿ ಸಹಾಯ ಮಾಡಿದ ಪ್ರತಿಯೊಬ್ಬರೂ ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.


Stay up to date on all the latest ಅಂತಾರಾಷ್ಟ್ರೀಯ news
Poll
BS yediyurappa

ಬಿಜೆಪಿ ಸಂಸದೀಯ ಮಂಡಳಿಗೆ ಬಿ.ಎಸ್. ಯಡಿಯೂರಪ್ಪ ಸೇರ್ಪಡೆಯಿಂದ 2023 ರ ಕರ್ನಾಟಕ ಚುನಾವಣೆಯಲ್ಲಿ ಪಕ್ಷಕ್ಕೆ ನೆರವಾಗುವುದೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp