ಕಳ್ಳರೊಂದಿಗೆ ಕುಳಿತುಕೊಳ್ಳಲ್ಲ: ಪಾಕಿಸ್ತಾನ ನ್ಯಾಷನಲ್ ಅಸೆಂಬ್ಲಿಗೆ ರಾಜೀನಾಮೆ ನೀಡಿದ ಇಮ್ರಾನ್ ಖಾನ್!

ಅವಿಶ್ವಾಸ ನಿರ್ಣಯದಲ್ಲಿ ಸೋಲು ಕಂಡ ಬಳಿಕ ಪಾಕಿಸ್ತಾನ ಪ್ರಧಾನಿ ಪಟ್ಟ ಕಳೆದುಕೊಂಡಿರುವ ತೆಹ್ರಿಕ್-ಎ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್, ಇದೀಗ ಪಾಕಿಸ್ತಾನದ ನ್ಯಾಷನಲ್ ಅಸೆಂಬ್ಲಿಯ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ.

Published: 11th April 2022 08:46 PM  |   Last Updated: 11th April 2022 08:46 PM   |  A+A-


Imran Khan Resigns

ಇಮ್ರಾನ್ ಖಾನ್

PTI

ಇಸ್ಲಾಮಾಬಾದ್: ಅವಿಶ್ವಾಸ ನಿರ್ಣಯದಲ್ಲಿ ಸೋಲು ಕಂಡ ಬಳಿಕ ಪಾಕಿಸ್ತಾನ ಪ್ರಧಾನಿ ಪಟ್ಟ ಕಳೆದುಕೊಂಡಿರುವ ತೆಹ್ರಿಕ್-ಎ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್, ಇದೀಗ ಪಾಕಿಸ್ತಾನದ ನ್ಯಾಷನಲ್ ಅಸೆಂಬ್ಲಿಯ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ.

ಪಾಕಿಸ್ತಾನದಲ್ಲಿ ಸರ್ಕಾರ ರಚಿಸುತ್ತಿರುವ ವಿಪಕ್ಷ ನಾಯಕರನ್ನು ಕಳ್ಳರೆಂದು ಕರೆದಿರುವ ಇಮ್ರಾನ್ ಖಾನ್, ಕಳ್ಳರೊಂದಿಗೆ ಅಸೆಂಬ್ಲಿಯಲ್ಲಿ ಕುಳಿತುಕೊಳ್ಳಲು ನನಗೆ ಇಷ್ಟವಿಲ್ಲ. ಹೀಗಾಗಿ ನ್ಯಾಷನಲ್ ಅಸೆಂಬ್ಲಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ. 16 ಬಿಲಿಯನ್ ಮತ್ತು 8 ಬಿಲಿಯನ್ ರೂಪಾಯಿಗಳ ಭ್ರಷ್ಟಾಚಾರ ನಡೆಸಿರುವ ಆರೋಪ ಎದುರಿಸುತ್ತಿರುವ ವ್ಯಕ್ತಿಗಳು ಪಾಕಿಸ್ತಾನದ ಪ್ರಧಾನಿಯಾಗುತ್ತಿರುವುದು, ದೇಶಕ್ಕೆ ಮಾಡಿದ ಅಪಮಾನವಲ್ಲದೇ ಮತ್ತೇನೂ ಅಲ್ಲ ಎಂದು ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.

ಪಾಕಿಸ್ತಾನದ ನೂತನ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಅವರನ್ನು ಬೆಂಬಲಿಸಿರುವ ಇತರ ವಿರೋಧ ಪಕ್ಷಗಳ ನಾಯಕರ ಮೇಲೆ ಹತ್ತಾರು ಭ್ರಷ್ಟಾಚಾರ ಆರೋಪಗಳಿವೆ. ಇಂತಹ ಭ್ರಷ್ಟ ನಾಯಕರು ದೇಶದ ಚುಕ್ಕಾಣಿ ಹಿಡಿದಿರುವುದು ದುರ್ದೈವದ ಸಂಗತಿ. ಇಂತಹ ಕಳ್ಳರೊಂದಿಗೆ ನ್ಯಾಷನಲ್ ಅಸೆಂಬ್ಲಿಯಲ್ಲಿ ಕುಳಿತುಕೊಳ್ಳಲು ನನ್ನಿಂದ ಸಾಧ್ಯವಿಲ್ಲ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

ಈ ಕುರಿತಂತೆ ಪಿಟಿಐ ಪಕ್ಷ ಕೂಡ ಇಮ್ರಾನ್ ಖಾನ್ ಹೇಳಿಕೆಯ ವಿಡಿಯೋ ಅಪ್ಲೋಡ್ ಮಾಡಿದ್ದು, 'ಇದು ತನ್ನ ನಾಯಕನ ಬದ್ಧತೆಯನ್ನು ಪ್ರದರ್ಶಿಸುತ್ತದೆ ಎಂದು ಹೇಳಿಕೊಂಡಿದೆ.

ಇಮ್ರಾನ್ ಖಾನ್ ಅವರ ನಿರ್ಧಾರವನ್ನು ಬೆಂಬಲಿಸಿ ಮಾತನಾಡಿರುವ ಪಾಕಿಸ್ತಾನದ ಮಾಜಿ ಆಂತರಿಕ ಸಚಿವ ಶೇಕ್ ರಷೀದ್, ನ್ಯಾಷನಲ್ ಅಸೆಂಬ್ಲಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು ಎಂಬ ತಮ್ಮ ಸಲಹೆಯನ್ನು ಸಂಸದೀಯ ಪಕ್ಷದ ಸಭೆಯಲ್ಲಿ ಇಮ್ರಾನ್ ಖಾನ್ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಮುರಾದ್ ಸಯೀದ್ ಈಗಾಗಲೇ ಸ್ಪೀಕರ್‌ಗೆ ರಾಜೀನಾಮೆ ನೀಡಿದ್ದು, ನ್ಯಾಷನಲ್ ಅಸೆಂಬ್ಲಿಗೆ ರಾಜೀನಾಮೆ ನೀಡಿದ ಮೊದಲ ಪಿಟಿಐ ಸದಸ್ಯ ಎನಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲಾ ಪಿಟಿಐ ಸದಸ್ಯರೂ ನ್ಯಾಷನಲ್ ಅಸೆಂಬ್ಲಿಗೆ ರಾಜೀನಾಮೆ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

ಅವಿಶ್ವಾಸ ನಿರ್ಣಯದ ಮೂಲಕ ಪಟ್ಟ ಕಳೆದುಕೊಂಡ ಪಾಕಿಸ್ತಾನದ ಮೊದಲ ಪ್ರಧಾನಿ ಎಂಬ ಕುಖ್ಯಾತಿಗೆ ಇಮ್ರಾನ್ ಖಾನ್ ಪಾತ್ರರಾಗಿದ್ದು, ಇಮ್ರಾನ್ ಖಾನ್ ವಿರುದ್ಧ ಪಾಕ್‌ನ ವಿಪಕ್ಷಗಳು ಮೇಲುಗೈ ಸಾಧಿಸಿವೆ. ಶೆಹಬಾಜ್ ಷರೀಫ್ ಇದೀಗ ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
 


Stay up to date on all the latest ವಿದೇಶ news
Poll
Ashok Gehlot-Shashi Tharoor

ಕಾಂಗ್ರೆಸ್ ಎದುರಿಸುತ್ತಿರುವ ಸವಾಲುಗಳನ್ನು ನಿಭಾಯಿಸಲು ಯಾರು ಹೆಚ್ಚು ಸೂಕ್ತರು?


Result
ಅಶೋಕ್ ಗೆಹ್ಲೋಟ್
ಶಶಿ ತರೂರ್

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp