ಕರಾಚಿ ವಿಶ್ವವಿದ್ಯಾನಿಲಯದ ಬಳಿ ಸ್ಫೋಟ: ಚೀನಾದ ಶಿಕ್ಷಕರಿಬ್ಬರು ಸೇರಿ ಐವರ ಸಾವು
ಕರಾಚಿ ವಿಶ್ವವಿದ್ಯಾನಿಲಯದ ಕನ್ಫ್ಯೂಷಿಯಸ್ ಇನ್ಸ್ಟಿಟ್ಯೂಟ್ ಬಳಿ ನಡೆದ ಸ್ಫೋಟದಲ್ಲಿ ವ್ಯಾನ್‌ಗೆ ಬೆಂಕಿ ತಗುಲಿದ ಪರಿಣಾಮ ಇಬ್ಬರು ಚೀನಾದ ಶಿಕ್ಷಕರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
Published: 26th April 2022 05:32 PM | Last Updated: 26th April 2022 06:48 PM | A+A A-

ಪ್ರತ್ಯಕ್ಷ ದೃಶ್ಯ
ಇಸ್ಲಾಮಾಬಾದ್: ಕರಾಚಿ ವಿಶ್ವವಿದ್ಯಾನಿಲಯದ ಕನ್ಫ್ಯೂಷಿಯಸ್ ಇನ್ಸ್ಟಿಟ್ಯೂಟ್ ಬಳಿ ನಡೆದ ಸ್ಫೋಟದಲ್ಲಿ ವ್ಯಾನ್‌ಗೆ ಬೆಂಕಿ ತಗುಲಿದ ಪರಿಣಾಮ ಇಬ್ಬರು ಚೀನಾದ ಶಿಕ್ಷಕರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಚೀನಾದ ಪ್ರಜೆಗಳು ಎಂದು ಆರಂಭಿಕ ವರದಿಗಳನ್ನು ಉಲ್ಲೇಖಿಸಿ ಎಆರ್ ವೈ ನ್ಯೂಸ್ ಹೇಳಿದೆ.
ಇದನ್ನೂ ಓದಿ: ಕಾಬೂಲ್: ಶಾಲೆ ಬಳಿ ತ್ರಿವಳಿ ಸ್ಫೋಟ; 6 ಸಾವು, 14 ಮಂದಿಗೆ ಗಾಯ!
ವ್ಯಾನ್ ಕರಾಚಿ ವಿಶ್ವವಿದ್ಯಾಲಯದ ಆವರಣದಲ್ಲಿರುವ ಅವರ ನಿವಾಸದಿಂದ ಕನ್ಫ್ಯೂಷಿಯಸ್ ಇನ್ಸ್ಟಿಟ್ಯೂಟ್ ಗೆ ಚೀನಾದ ಪ್ರಜೆಗಳನ್ನು ಹೊತ್ತೊಯ್ಯುತ್ತಿತ್ತು. ಸ್ಫೋಟದಲ್ಲಿ ಕನಿಷ್ಠ ಇಬ್ಬರು ಚೀನಾದ ಶಿಕ್ಷಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕರಾಚಿ ವಿಶ್ವವಿದ್ಯಾಲಯದ ವಕ್ತಾರರು ತಿಳಿಸಿದ್ದಾರೆ.
ಸ್ಫೋಟವನ್ನು ಖಂಡಿಸಿದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಸಂತ್ರಸ್ತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಪೊಲೀಸರ ಪ್ರಕಾರ, ಸ್ಫೋಟದ ಕುರಿತಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.