ಪಾಕಿಸ್ತಾನದ ವಿದೇಶಾಂಗ ಸಚಿವರಾಗಿ ಬಿಲಾವಲ್ ಭುಟ್ಟೋ-ಜರ್ದಾರಿ ಪ್ರಮಾಣ ವಚನ ಸ್ವೀಕಾರ
ಪಾಕಿಸ್ತಾನದ ನೂತನ ವಿದೇಶಾಂಗ ಸಚಿವರಾಗಿ ಬಿಲಾವಲ್ ಭುಟ್ಟೋ ಜರ್ದಾರಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಪ್ರಧಾನಿ ಶೆಹಬಾಜ್ ಷರೀಫ್ ನೇತೃತ್ವದ ಹೊಸ ಸರ್ಕಾರದಲ್ಲಿ ಅವರ ಪಾತ್ರದ ಬಗೆಗಿನ ಊಹಾಪೋಹಗಳಿಗೆ ಅಂತ್ಯ ಹಾಡಿದ್ದಾರೆ.
Published: 28th April 2022 01:58 PM | Last Updated: 28th April 2022 01:58 PM | A+A A-

ಬಿಲಾವಲ್ ಭುಟ್ಟೋ ಜರ್ದಾರಿ
ಇಸ್ಲಾಮಾಬಾದ್: ಪಾಕಿಸ್ತಾನದ ನೂತನ ವಿದೇಶಾಂಗ ಸಚಿವರಾಗಿ ಬಿಲಾವಲ್ ಭುಟ್ಟೋ ಜರ್ದಾರಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಪ್ರಧಾನಿ ಶೆಹಬಾಜ್ ಷರೀಫ್ ನೇತೃತ್ವದ ಹೊಸ ಸರ್ಕಾರದಲ್ಲಿ ಅವರ ಪಾತ್ರದ ಬಗೆಗಿನ ಊಹಾಪೋಹಗಳಿಗೆ ಅಂತ್ಯ ಹಾಡಿದ್ದಾರೆ.
ಪಾಕಿಸ್ತಾನದ ರಾಷ್ಟ್ರಾಧ್ಯಕ್ಷರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ 33 ವರ್ಷದ ಬಿಲಾವಲ್ ಭುಟ್ಟೋ ಜರ್ದಾರಿ ಅವರಿಗೆ ಪಾಕ್ ಅಧ್ಯಕ್ಷ ಆರಿಫ್ ಅಲ್ವಿ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಶೆಹಬಾಜ್ ಷರೀಫ್, ಮಾಜಿ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ , ಪಿಪಿಪಿ ಪಕ್ಷದ ಮುಖಂಡರು ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಮೊದಲ ಬಾರಿಗೆ ಬಿಲಾವಲ್ ಅವರಿಗೆ ಸರ್ಕಾರದಲ್ಲಿ ಪ್ರಮುಖ ಹುದ್ದೆ ನೀಡಲಾಗಿದೆ. ದೇಶದ ವಿದೇಶಾಂಗ ಸಚಿವ ಖಾತೆಯನ್ನು ನೀಡಲಾಗಿದೆ. ಬಿಲಾವಲ್ 2018ರಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಅಸೆಂಬ್ಲಿಗೆ ಆಯ್ಕೆಯಾಗಿದ್ದರು. ಪಾಕಿಸ್ತಾನ ವಿದೇಶಾಂಗ ನೀತಿ ದುರ್ಬಲಗೊಂಡು ಸಮರ್ಥರ ಅಗತ್ಯವಿದ್ದಾಗ ಬಿಲಾವಲ್ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮುಖ್ಯಸ್ಥರಾಗಿದ್ದಾರೆ.
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಂಚಿನ ಆರೋಪ ಮಾಡಿದ್ದ ಅಮೆರಿಕದೊಂದಿಗೆ ಬಿಗಿಯಾದ ಸಂಬಂಧ ಹಾಗೂ ನೆರೆಯ ರಾಷ್ಟ್ರ ಭಾರತದೊಂದಿಗೆ ಶಾಂತಿ ಪ್ರಕ್ರಿಯೆ ಪುನರ್ ಆರಂಭಕ್ಕೆ ಪರ್ಯಾಯ ಮಾರ್ಗ ಹುಡುಕಾಟ ಮತ್ತಿತರ ಪ್ರಮುಖ ಸವಾಲುಗಳು ನೂತನ ವಿದೇಶಾಂಗ ಸಚಿವರ ಮೇಲಿದೆ. ಅದನ್ನು ಬಿಲಾವಲ್ ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.