ಆರೋಗ್ಯ ರಕ್ಷಣೆಗೆ ಆದ್ಯತೆ: ಪ್ರಧಾನಿ ಮೋದಿ ಶ್ಲಾಘಿಸಿದ 'ಟೆಕ್ ದೈತ್ಯ' ಬಿಲ್ ಗೇಟ್ಸ್

ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿರುವ ಪ್ರಧಾನಿ ಮೋದಿ ಅವರಿಗೆ ಟೆಕ್ ದೈತ್ಯ ಮೈಕ್ರೋಸಾಫ್ಟ್ ಸಂಸ್ಥೆಯ ಸಂಸ್ಥಾಪಕ ಬಿಲ್ ಗೇಟ್ಸ್ ಶ್ಲಾಘಿಸಿದ್ದಾರೆ.
ಬಿಲ್ ಗೇಟ್ಸ್ ಮತ್ತು ಪ್ರಧಾನಿ ಮೋದಿ
ಬಿಲ್ ಗೇಟ್ಸ್ ಮತ್ತು ಪ್ರಧಾನಿ ಮೋದಿ

ನವದೆಹಲಿ: ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿರುವ ಪ್ರಧಾನಿ ಮೋದಿ ಅವರಿಗೆ ಟೆಕ್ ದೈತ್ಯ ಮೈಕ್ರೋಸಾಫ್ಟ್ ಸಂಸ್ಥೆಯ ಸಂಸ್ಥಾಪಕ ಬಿಲ್ ಗೇಟ್ಸ್ ಶ್ಲಾಘಿಸಿದ್ದಾರೆ.

ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಮತ್ತು ಬಿಲಿಯನೇರ್ ಬಿಲ್ ಗೇಟ್ಸ್ ಅವರು ಸೋಮವಾರ ಭಾರತದ ಅಭಿವೃದ್ಧಿಯ ಮುನ್ನಡೆಯಲ್ಲಿ ಆರೋಗ್ಯ ರಕ್ಷಣೆ ಮತ್ತು ಡಿಜಿಟಲ್ ರೂಪಾಂತರಕ್ಕೆ ಆದ್ಯತೆ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ.

ಇದನ್ನೂ ಓದಿ: 'ಭ್ರಷ್ಟಾಚಾರ, ವಂಶ ಆಳ್ವಿಕೆ ಭಾರತದ 2 ದೊಡ್ಡ ಸವಾಲುಗಳು': ಸ್ವಾತಂತ್ರ್ಯೋತ್ಸವ ಭಾಷಣದಲ್ಲೂ ಕಾಂಗ್ರೆಸ್ ಗೆ ತಿವಿದ ಪ್ರಧಾನಿ ಮೋದಿ
  
ಭಾರತದ 76 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ಆರೋಗ್ಯ ರಕ್ಷಣೆ ಮತ್ತು ಡಿಜಿಟಲ್ ರೂಪಾಂತರಕ್ಕೆ ಆದ್ಯತೆ ನೀಡುವಂತೆ ಕರೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಲ್ ಗೇಟ್ಸ್ ಪ್ರಧಾನಿ ಮೋದಿ ನಡೆಯನ್ನು ಸ್ವಾಗತಿಸಿದ್ದಾರೆ.

"ಭಾರತದ ಅಭಿವೃದ್ಧಿಯನ್ನು ಮುನ್ನಡೆಸುವಾಗ ಆರೋಗ್ಯ ರಕ್ಷಣೆ ಮತ್ತು ಡಿಜಿಟಲ್ ಪರಿವರ್ತನೆಗೆ ಆದ್ಯತೆ ನೀಡಿದ್ದಕ್ಕಾಗಿ ನರೇಂದ್ರ ಅವರನ್ನು ನಾನು ಅಭಿನಂದಿಸುತ್ತೇನೆ. ಈ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯು ಸ್ಪೂರ್ತಿದಾಯಕವಾಗಿದೆ ಮತ್ತು ಈ ಪ್ರಯಾಣದಲ್ಲಿ ಪಾಲುದಾರರಾಗಲು ನಾವು ಅದೃಷ್ಟವಂತರು" ಎಂದು ಅವರು 'ಅಮೃತಮಹೋತ್ಸವ' ಹ್ಯಾಶ್‌ಟ್ಯಾಗ್ ಬಳಸಿ ಬಿಲ್ ಗೇಟ್ಸ್ ಟ್ವೀಟ್ ಮಾಡಿದ್ದಾರೆ.

ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವವನ್ನು ಗುರುತಿಸಲು ಭಾರತವು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸುತ್ತಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com