ಸಲ್ಮಾನ್ ರಶ್ದಿ
ವಿದೇಶ
ಸಲ್ಮಾನ್ ರಶ್ದಿ ಮೇಲಿನ ದಾಳಿಯಲ್ಲಿ ಭಾಗಿ: ಆರೋಪ ನಿರಾಕರಿಸಿದ ಇರಾನ್
ಲೇಖಕ ಸಲ್ಮಾನ್ ರಶ್ದಿ ಮೇಲಿನ ದಾಳಿಯಲ್ಲಿ ಇರಾನ್ ಭಾಗಿಯಾಗಿದೆ ಎಂಬ ಆರೋಪವನ್ನು ಅಲ್ಲಿನ ಸರ್ಕಾರಿ ಅಧಿಕಾರಿಯೊಬ್ಬರು ನಿರಾಕರಿಸಿದ್ದಾರೆ.
ಟೆಹ್ರಾನ್: ಲೇಖಕ ಸಲ್ಮಾನ್ ರಶ್ದಿ ಮೇಲಿನ ದಾಳಿಯಲ್ಲಿ ಇರಾನ್ ಭಾಗಿಯಾಗಿದೆ ಎಂಬ ಆರೋಪವನ್ನು ಅಲ್ಲಿನ ಸರ್ಕಾರಿ ಅಧಿಕಾರಿಯೊಬ್ಬರು ನಿರಾಕರಿಸಿದ್ದಾರೆ.
ಇತ್ತೀಚಿಗೆ ನ್ಯೂಯಾರ್ಕ್ ನಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆಯೇ ವ್ಯಕ್ತಿಯೊಬ್ಬನಿಂದ ಪದೇ ಪದೇ ಚಾಕು ಇರಿತಕ್ಕೊಳಗಾಗಿದ್ದ ಸಲ್ಮಾನ್ ರಶ್ದಿ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ.
ಅಮೆರಿಕದಲ್ಲಿ ಸಲ್ಮಾನ್ ರಶ್ದಿ ಅವರ ಮೇಲಿನ ದಾಳಿಯ ಘಟನೆಯಲ್ಲಿ ಇರಾನ್ ಭಾಗಿಯಾಗಿದೆ ಎಂಬ ಸಲ್ಮಾನ್ ರಶ್ದಿ ಬೆಂಬಲಿಗರ ಆರೋಪವನ್ನು ನಾವು ಪರಿಗಣಿಸುವುದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ನಾಸರ್ ಕನಾನಿ ಹೇಳಿದ್ದಾರೆ. ಈ ವಿಷಯದಲ್ಲಿ ಇರಾನ್ ನ್ನು ದೂಷಿಸುವ ಹಕ್ಕು ಯಾರಿಗೂ ಇಲ್ಲ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ