
ಸಾಂದರ್ಭಿಕ ಚಿತ್ರ
ಸಿಂಧ್: ಹಿಂದೂ ಉದ್ಯಮಿಯೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿರುವ ಘಟನೆ ಪಾಕಿಸ್ತಾನದ ಸಿಂಧ್ ನ ಘೋಟ್ಕಿ ಜಿಲ್ಲೆಯ ದಹರ್ಕಿ ಟೌನ್ನಲ್ಲಿ ಸೋಮವಾರ ರಾತ್ರಿ ನಡೆದಿದೆ.
ಹತ್ಯೆಗೆ ಒಳಗಾದ ವ್ಯಕ್ತಿಯನ್ನು ಸೈತಾನ್ ಲಾಲ್ ಎಂದು ಗುರುತಿಸಲಾಗಿದೆ. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ದೌರ್ಜನ್ಯ ಎಸಗಿದ ಇತ್ತೀಚಿನ ಘಟನೆ ಇದಾಗಿದೆ. ಜನವರಿ 4 ರಂದು, ಸಿಂಧ್ ಪ್ರಾಂತ್ಯದ ಅನಾಜ್ ಮಂಡಿಯಲ್ಲಿ ಇನ್ನೊಬ್ಬ ಹಿಂದೂ ಉದ್ಯಮಿ ಸುನೀಲ್ ಕುಮಾರ್ ಅವರನ್ನು ಅಪರಿಚಿತ ಜನರು ಗುಂಡಿಕ್ಕಿ ಕೊಂದರು. ಉದ್ಯಮಿಯ ಹತ್ಯೆಯಿಂದ ನಗರದಲ್ಲಿ ಬಂದ್ ಮಾಡಲಾಗಿತ್ತು.
ಜನವರಿ 30 ರಂದು, ಪಾಕಿಸ್ತಾನದ ವಾಯುವ್ಯ ಪೇಶಾವರ್ ನಗರದಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಒಬ್ಬ ಕ್ರಿಶ್ಚಿಯನ್ ಪಾದ್ರಿಯನ್ನು ಗುಂಡಿಕ್ಕಿ ಕೊಂದಿದ್ದರು. ಇದೇ ವೇಳೆ ಜೊತೆಯಲ್ಲಿದ್ದ ಇನ್ನೊಬ್ಬರು ಗಾಯಗೊಂಡಿದ್ದರು.