ಹಿಜಾಬ್ ಧರಿಸದಂತೆ ಮುಸ್ಲಿಂ ಹೆಣ್ಣುಮಕ್ಕಳನ್ನು ತಡೆಯುವುದು ದಬ್ಬಾಳಿಕೆ ಕ್ರಮ: ಪಾಕ್ ವಿದೇಶಾಂಗ ಸಚಿವ ಆಕ್ಷೇಪ
ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುವ ಕುರಿತು ಕರಾವಳಿಯ ಉಡುಪಿ ಜಿಲ್ಲೆಯ ಕಾಲೇಜಿನಲ್ಲಿ ಆರಂಭವಾದ ವಿವಾದ ಸಂಘರ್ಷಕ್ಕೆ ಕಾರಣವಾಗಿ ಈಗ ನೆರೆಯ ಪಾಕಿಸ್ತಾನದಲ್ಲಿಯೂ ಸದ್ದು ಮಾಡುತ್ತಿದೆ. ಈ ಕುರಿತು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
Published: 09th February 2022 11:55 AM | Last Updated: 09th February 2022 01:35 PM | A+A A-

ಶಾ ಮಹಮ್ಮೂದ್ ಖುರೇಷಿ
ಇಸ್ಲಾಮಾಬಾದ್: ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುವ ಕುರಿತು ಕರಾವಳಿಯ ಉಡುಪಿ ಜಿಲ್ಲೆಯ ಕಾಲೇಜಿನಲ್ಲಿ ಆರಂಭವಾದ ವಿವಾದ ಸಂಘರ್ಷಕ್ಕೆ ಕಾರಣವಾಗಿ ಈಗ ನೆರೆಯ ಪಾಕಿಸ್ತಾನದಲ್ಲಿಯೂ ಸದ್ದು ಮಾಡುತ್ತಿದೆ. ಈ ಕುರಿತು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ(Shah Mahmood Qureshi)ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಟ್ವೀಟ್ ಮಾಡಿರುವ ಅವರು, ಮುಸ್ಲಿಂ ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ದೂರವಿರುವಂತೆ ಮಾಡುವುದು ಮೂಲಭೂತ ಮಾನವ ಹಕ್ಕುಗಳ ಅತ್ಯುನ್ನತ ಉಲ್ಲಂಘನೆಯಾಗಿದೆ. ಶಿಕ್ಷಣ ಪಡೆಯುವ ಮೂಲಭೂತ ಹಕ್ಕನ್ನು ನಿರಾಕರಿಸುವುದು ಮತ್ತು ಹಿಜಾಬ್ ಧರಿಸದಂತೆ ಭಯಭೀತಗೊಳಿಸುವುದು, ಹತ್ತಿಕ್ಕುವುದು ಖಂಡಿತವಾಗಿಯೂ ದಬ್ಬಾಳಿಕೆಯ ಕ್ರಮವಾಗಿದೆ.
ಇದನ್ನೂ ಓದಿ: ಹಿಜಾಬ್ ಕಾರಣಕ್ಕೆ ಹೆಣ್ಣುಮಕ್ಕಳಿಗೆ ಶಾಲೆ ಪ್ರವೇಶ ನಿರ್ಬಂಧ ಅತ್ಯಂತ ಭೀಕರ: ಮಲಾಲಾ
ಇದು ಮುಸ್ಲಿಂರ ಮೂಲಭೂಕ ಹಕ್ಕು, ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ವಂಚಿತರಾಗಿಸುವ ಭಾರತದ ವ್ಯವಸ್ಥಿತ ಯೋಜನೆಯಾಗಿದೆ ಎಂದು ಆರೋಪಿಸಿದ್ದಾರೆ.
Depriving Muslim girls of an education is a grave violation of fundamental human rights. To deny anyone this fundamental right & terrorise them for wearing a hijab is absolutely oppressive. World must realise this is part of Indian state plan of ghettoisation of Muslims.
— Shah Mahmood Qureshi (@SMQureshiPTI) February 9, 2022