ಉಕ್ರೇನ್ ಬಿಕ್ಕಟ್ಟಿನ ಮಧ್ಯೆ ರಷ್ಯಾಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆಗಮನ
ಉಕ್ರೇನ್ ಬಿಕ್ಕಟ್ಟಿನ ನಡುವೆ ರಷ್ಯಾಕ್ಕೆ ಎರಡು ದಿನಗಳ ಭೇಟಿ ಕೈಗೊಂಡಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್, ರಾಜಧಾನಿ ಮಾಸ್ಕೋಗೆ ಆಗಮಿಸಿದ್ದಾರೆ. ರಷ್ಯಾದ ಮಿಲಿಟರಿ ಕಾರ್ಯಾಚರಣೆ ನಡುವೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಭೇಟಿ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.
Published: 24th February 2022 01:57 PM | Last Updated: 24th February 2022 03:30 PM | A+A A-

ಪಾಕ್ ಪ್ರಧಾನಿ ಇಮ್ರಾನ್ ಖಾನ್
ಮಾಸ್ಕೋ: ಉಕ್ರೇನ್ ಬಿಕ್ಕಟ್ಟಿನ ನಡುವೆ ರಷ್ಯಾಕ್ಕೆ ಎರಡು ದಿನಗಳ ಭೇಟಿ ಕೈಗೊಂಡಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್, ರಾಜಧಾನಿ ಮಾಸ್ಕೋಗೆ ಆಗಮಿಸಿದ್ದಾರೆ. ರಷ್ಯಾದ ಮಿಲಿಟರಿ ಕಾರ್ಯಾಚರಣೆ ನಡುವೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಭೇಟಿ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.
ರಷ್ಯಾದ ಉಪ ವಿದೇಶಾಂಗ ಸಚಿವ ಇಗೊರ್ ಮಾರ್ಗುಲೋವ್ ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಇಮ್ರಾನ್ ಖಾನ್ ಅವರನ್ನು ಬರಮಾಡಿಕೊಂಡರು. ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರನ್ನು ಇಮ್ರಾನ್ ಖಾನ್ ಭೇಟಿ ಮಾಡುವ ನಿರೀಕ್ಷೆಯಿದೆ.
ನವಾಜ್ ಷರೀಫ್ ಮಾರ್ಚ್ 1999ರಲ್ಲಿ ರಷ್ಯಾಕ್ಕೆ ಭೇಟಿ ನೀಡಿದ್ದರು. ಪಾಕಿಸ್ತಾನದ ಮಾಜಿ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ 2011ರಲ್ಲಿ ಮಾಸ್ಕೋಗೆ ಭೇಟಿ ನೀಡಿದ್ದರು. 11 ವರ್ಷಗಳ ನಂತರ ಪಾಕಿಸ್ತಾನ ಪ್ರಧಾನಿ ರಷ್ಯಾಕ್ಕೆ ಭೇಟಿ ನೀಡಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ಪಾಕಿಸ್ತಾನ: ಇಮ್ರಾನ್ ಖಾನ್ ಸರ್ಕಾರಕ್ಕೆ ಸಂಕಷ್ಟ; ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳು ನಿರ್ಧಾರ
ಇಮ್ರಾನ್ ಖಾನ್ ಅವರ ಭೇಟಿಯು ಅಮೆರಿಕ ಮತ್ತು ಪಾಶ್ಚಿಮಾತ್ಯ ದೇಶಗಳೊಂದಿಗಿನ ಸಂಬಂಧಗಳ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದರ ಬಗ್ಗೆಯೂ ಸಾಕಷ್ಟು ಕೂತೂಹಲ ಕೆರಳಿಸಿದೆ. ದ್ವಿಪಕ್ಷೀಯ ಸಂಬಂಧ ಬಲವರ್ದನೆ ಕುರಿತು ಉಭಯ ನಾಯಕರ ನಡುವೆ ಚರ್ಚೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.