ಬ್ರಿಟನ್ ಪ್ರಧಾನ ಮಂತ್ರಿ ಆಯ್ಕೆ; 2ನೇ ಸುತ್ತಿನ ಮತದಾನದಲ್ಲೂ ರಿಷಿ ಸುನಕ್ ಗೆಲುವು

ಬ್ರಿಟನ್ ಪ್ರಧಾನಿ ಅಭ್ಯರ್ಥಿ ಸ್ಪರ್ಧೆಯಲ್ಲಿರುವ ಮಾಜಿ ಬ್ರಿಟಿಷ್ ಹಣಕಾಸು ಸಚಿವ, ಇನ್ಫೋಸಿಸ್ ನ ನಾರಾಯಣ ಮೂರ್ತಿಯವರ ಅಳಿಯ ರಿಷಿ ಸುನಕ್ ಎರಡನೇ ಸುತ್ತಿನ ಮತದಾನದಲ್ಲಿ ಹೆಚ್ಚು ಮತಗಳನ್ನು ಗಳಿಸಿದ್ದಾರೆ.
ರಿಷಿ ಸುನಕ್
ರಿಷಿ ಸುನಕ್

ಲಂಡನ್: ಬ್ರಿಟನ್ ಪ್ರಧಾನಿ ಅಭ್ಯರ್ಥಿ ಸ್ಪರ್ಧೆಯಲ್ಲಿರುವ ಮಾಜಿ ಬ್ರಿಟಿಷ್ ಹಣಕಾಸು ಸಚಿವ, ಇನ್ಫೋಸಿಸ್ ನ ನಾರಾಯಣ ಮೂರ್ತಿಯವರ ಅಳಿಯ ರಿಷಿ ಸುನಕ್ ಎರಡನೇ ಸುತ್ತಿನ ಮತದಾನದಲ್ಲಿ ಹೆಚ್ಚು ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಬೋರಿಸ್ ಜಾನ್ಸನ್ ನಂತರ ಕನ್ಸರ್ವೇಟಿವ್ ಪಕ್ಷದ ನಾಯಕ ಮತ್ತು ಪ್ರಧಾನ ಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ.

ಸುನಕ್ 101 ಮತಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಜೂನಿಯರ್ ಟ್ರೇಡ್ ಮಿನಿಸ್ಟರ್ ಪೆನ್ನಿ ಮೊರ್ಡಾಂಟ್ 83 ಮತಗಳನ್ನು ಮತ್ತು ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ 64 ಮತಗಳನ್ನು ಪಡೆದರು. ಅಟಾರ್ನಿ ಜನರಲ್ ಸುಯೆಲ್ಲಾ ಬ್ರಾವರ್‌ಮನ್ 27 ಮತಗಳೊಂದಿಗೆ ಹೊರಹಾಕಲ್ಪಟ್ಟರು. ಟಾಮ್ ತುಗೆಂಧತ್ 32 ಮತಗಳನ್ನು ಪಡೆದರೆ, ಕೆಮಿ ಬಡೆನೋಚ್ 49 ಮತಗಳನ್ನು ಪಡೆದರು.

ಕನ್ಸರ್ವೇಟೀವ್ ಪಕ್ಷದ ಸಂಸದರ ಪೈಕಿ ಮೊದಲ ಸುತ್ತಿನ ಮತದಾನದಲ್ಲಿ 88 ಮತಗಳನ್ನ ರಿಷಿ ಸುನಕ್ ಪಡೆದಿದ್ದರು. ಮೊದಲ ಹಂತದ ಮತದಾನದ ಬಳಿಕ ಅಭ್ಯರ್ಥಿಗಳ ಸಂಖ್ಯೆ 8 ರಿಂದ 6 ಕ್ಕೆ ಇಳಿಕೆಯಾಗಿತ್ತು. ಪ್ರಧಾನಿ ಹುದ್ದೆಯ ಸ್ಪರ್ಧೆಯಲ್ಲಿ ಅಂತಿಮವಾಗಿ ಇರಲಿರುವ ಮೂವರು ಅಭ್ಯರ್ಥಿಗಳ ಪೈಕಿ ಅತಿ ಹೆಚ್ಚು ಮತ ಪಡೆಯುವವರು ಪ್ರಧಾನಮಂತ್ರಿಯಾಗಲಿದ್ದಾರೆ.

ಸಚಿವರ ಸತತ ರಾಜೀನಾಮೆ, ಭಾರೀ ಪ್ರತಿರೋಧ ಹಿನ್ನೆಲೆ ಬೋರಿಸ್ ಜಾನ್ಸನ್ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com