ರಷ್ಯಾ ಜೊತೆ ಎಸ್-400 ಕ್ಷಿಪಣಿ ಒಪ್ಪಂದದ ನಿರ್ಬಂಧಗಳಿಂದ ಭಾರತಕ್ಕೆ ವಿನಾಯಿತಿ; ತಿದ್ದುಪಡಿ ಮಸೂದೆಗೆ ಅಮೆರಿಕ ಅಂಗೀಕಾರ

ಚೀನಾದಂತಹ ಆಕ್ರಮಣಕಾರರನ್ನು ತಡೆಯಲು ನೆರವಾಗಲು ರಷ್ಯಾದಿಂದ ಭಾರತ ಖರೀದಿಸುತ್ತಿರುವ ಎಸ್-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಗೆ ಸಿಎಎಟಿಎಸ್ ಎಸ್ (ಕಾಟ್ಸಾ) ಕಾಯ್ದೆಯಿಂದ ವಿನಾಯಿತಿ ನೀಡುವ ತಿದ್ದುಪಡಿ ಮಸೂದೆಗೆ ಅಮೆರಿಕದ ಪ್ರಜಾ ಪ್ರತಿನಿಧಿ ಸಭೆಯಲ್ಲಿ ಗುರುವಾರ ಧ್ವನಿಮತದ ಅಂಗೀಕಾರ ದೊರೆತಿದೆ.
ಅಮೆರಿಕ ಪ್ರಜಾ ಪ್ರತಿನಿಧಿ ಸಭೆ ಸಾಂದರ್ಭಿಕ ಚಿತ್ರ
ಅಮೆರಿಕ ಪ್ರಜಾ ಪ್ರತಿನಿಧಿ ಸಭೆ ಸಾಂದರ್ಭಿಕ ಚಿತ್ರ

ವಾಷಿಂಗ್ಟನ್: ಚೀನಾದಂತಹ ಆಕ್ರಮಣಕಾರರನ್ನು ತಡೆಯಲು ನೆರವಾಗಲು ರಷ್ಯಾದಿಂದ ಭಾರತ ಖರೀದಿಸುತ್ತಿರುವ ಎಸ್-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಗೆ ಸಿಎಎಟಿಎಸ್ ಎಸ್ (ಕಾಟ್ಸಾ) ಕಾಯ್ದೆಯಿಂದ ವಿನಾಯಿತಿ ನೀಡುವ ತಿದ್ದುಪಡಿ ಮಸೂದೆಗೆ ಅಮೆರಿಕದ ಪ್ರಜಾ ಪ್ರತಿನಿಧಿ ಸಭೆಯಲ್ಲಿ ಗುರುವಾರ ಧ್ವನಿಮತದ ಅಂಗೀಕಾರ ದೊರೆತಿದೆ.

ಭಾರತೀಯ-ಅಮೆರಿಕನ್ ಕಾಂಗ್ರೆಸ್ ಸದಸ್ಯ ರೋ ಖನ್ನಾ ಅವರು ತಿದ್ದುಪಡಿ ಮಸೂದೆ ಮಂಡಿಸಿದರು. ಈ ತಿದ್ದುಪಡಿ ಕಾಯ್ದೆಯು ಚೀನಾದಂತಹ ಆಕ್ರಮಣಕಾರರನ್ನು ತಡೆಯಲು ಸಹಾಯ ಮಾಡುವ ನಿಟ್ಟಿನಲ್ಲಿ ವಿನಾಯಿತಿಯನ್ನು ಭಾರತಕ್ಕೆ ಒದಗಿಸಲು ಬೈಡನ್ ಆಡಳಿತ ಅನುವು ಮಾಡಿಕೊಟ್ಟಿದೆ.

2014ರಲ್ಲಿ ಕ್ರೈಮಿಯಾವನ್ನು ಸ್ವಾಧೀನಪಡಿಸಿಕೊಂಡ ಮತ್ತು 2016ರ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಧ್ಯ ಪ್ರವೇಶಿಸಿದ್ದ ರಷ್ಯಾ ಕ್ರಮಕ್ಕೆ ಪ್ರತಿಯಾಗಿ ಆ ದೇಶದಿಂದ ಪ್ರಮುಖ ರಕ್ಷಣಾ ಯಂತ್ರಗಳನ್ನು ಖರೀದಿಸುವ ದೇಶಗಳ ಮೇಲೆ ನಿರ್ಬಂಧಗಳನ್ನು ವಿಧಿಸಲು ಕಾಟ್ಸಾ ಅಮೆರಿಕ ಆಡಳಿತಕ್ಕೆ ಅಧಿಕಾರ ನೀಡುವ ಕಠಿಣ ಕಾನೂನು ಆಗಿದೆ. 

ಚೀನಾದಿಂದ ಆಕ್ರಮಣವನ್ನು ಎದುರಿಸುವಲ್ಲಿ ಭಾರತದೊಂದಿಗೆ ಅಮೆರಿಕ ನಿಲ್ಲಲಿದೆ. ಇಂಡಿಯಾ ಕಾಕಸ್ ನ ಉಪಾಧ್ಯಕ್ಷನಾಗಿ ನಮ್ಮ ದೇಶಗಳ ನಡುವಿನ ಪಾಲುದಾರಿಕೆಯನ್ನು ಬಲಪಡಿಸಲು ಮತ್ತು ಚೀನಾದ ಗಡಿಯಲ್ಲಿ ಭಾರತವು ತನ್ನನ್ನು ತಾನು ರಕ್ಷಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಕೆಲಸ ಮಾಡುತ್ತಿದ್ದೇನೆ ಎಂದು ಕ್ಯಾಲಿಫೋರ್ನಿಯಾದ 17ನೇ ಕಾಂಗ್ರೆಸ್ ಜಿಲ್ಲೆಯ ಅಮೆರಿಕದ ಪ್ರತಿನಿಧಿ ಖನ್ನಾ ಹೇಳಿದರು.

ಈ ತಿದ್ದುಪಡಿಯು ಅತ್ಯಂತ ಮಹತ್ವದ್ದಾಗಿದ್ದು, ದ್ವಿಪಕ್ಷೀಯ ಆಧಾರದ ಮೇಲೆ ಸದನ ಅಂಗೀಕರಿಸಿದ್ದನ್ನು ಕಂಡು ನನ್ನಗೆ ಹೆಮ್ಮೆಯಾಗಿದೆ ಎಂದರು. ಅಕ್ಟೋಬರ್ 2018ರಲ್ಲಿ ಎಸ್ -400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಷೆಗಳ ಐದು ಘಟಕಗಳನ್ನು ಖರೀದಿಸಲು ಭಾರತ ರಷ್ಯಾದೊಂದಿಗೆ 5 ಶತಕೋಟಿ ಡಾಲರ್ ಮೊತ್ತದ ಒಪ್ಪಂದಕ್ಕೆ ಸಹಿ ಹಾಕಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com