ಗೋಟಬಯ ರಾಜಪಕ್ಸೆ ಸಹೋದರರಾದ ಮಹಿಂದಾ ಮತ್ತು ಬಸಿಲ್ ಲಂಕಾ ತೊರೆಯದಂತೆ ಸುಪ್ರೀಂ ಕೋರ್ಟ್ ನಿರ್ಬಂಧ
ಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ಗೋಟಬಯ ರಾಜಪಕ್ಸೆ ಅವರು ರಾಜೀನಾಮೆ ನೀಡಿದ ಮಾರನೇ ದಿನವೇ ಅವರ ಇಬ್ಬರು ಸಹೋದರರು ಜುಲೈ 28 ರವರೆಗೆ ದೇಶ ತೊರೆಯದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.
Published: 15th July 2022 06:51 PM | Last Updated: 15th July 2022 07:45 PM | A+A A-

ಮಹಿಂದಾ ರಾಜಪಕ್ಷೆ - ಗೋಟಬಯ ರಾಜಪಕ್ಸೆ
ಕೊಲಂಬೊ: ಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ಗೋಟಬಯ ರಾಜಪಕ್ಸೆ ಅವರು ರಾಜೀನಾಮೆ ನೀಡಿದ ಮಾರನೇ ದಿನವೇ ಅವರ ಇಬ್ಬರು ಸಹೋದರರು ಜುಲೈ 28 ರವರೆಗೆ ದೇಶ ತೊರೆಯದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.
ಶ್ರೀಲಂಕಾ ಮಾಜಿ ಪ್ರಧಾನಿ ಮಹೀಂದ್ರ ರಾಜಪಕ್ಸೆ ಮತ್ತು ಮಾಜಿ ಸಚಿವ ಬಸಿಲ್ ರಾಜಪಕ್ಸೆ ಅವರು ಬಿಕ್ಕಟ್ಟು ಪೀಡಿತ ದ್ವೀಪ ರಾಷ್ಟ್ರವನ್ನು ತೊರೆಯದಂತೆ ನಿರ್ಬಂಧಿಸಲಾಗಿದೆ.
ಈ ಇಬ್ಬರು ರಾಜಕಾರಣಿಗಳ ವಿರುದ್ಧ ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಶನಲ್ ಶ್ರೀಲಂಕಾ(ಟಿಐಎಸ್‌ಎಲ್) ಮತ್ತು ಇತರ ಮೂವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಲಂಕಾ ಸುಪ್ರೀಂ ಕೋರ್ಟ್ ಈ ಮಧ್ಯಂತರ ಆದೇಶ ನೀಡಿದೆ.
ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನು ಓದಿ: ಕೊನೆಗೂ ರಾಜಪಕ್ಸೆ ರಾಜಿನಾಮೆ: ಶ್ರೀಲಂಕಾ ಹಂಗಾಮಿ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಪ್ರಮಾಣವಚನ ಸ್ವೀಕಾರ
ಗೋತಬಯ ರಾಜಪಕ್ಸೆ ಅವರ ರಾಜೀನಾಮೆಯನ್ನು ಅಧಿಕೃತವಾಗಿ ಅಂಗೀಕರಿಸಿದ ನಂತರ ಪ್ರಧಾನಿ ರನಿಲ್ ವಿಕ್ರಮಸಿಂಘೆ ಶುಕ್ರವಾರ ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಗೋಟಬಯ ರಾಜಪಕ್ಸೆ ಅವರ ರಾಜೀನಾಮೆಯನ್ನು ಅಧಿಕೃತವಾಗಿ ಅಂಗೀಕರಿಸಿದ ನಂತರ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಇಂದು ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.