ಶ್ರೀಲಂಕಾದ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕಾರ

ಶ್ರೀಲಂಕಾದ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಜುಲೈ 20 ರಂದು ಬುಧವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲ್ಲುವ ಮುಖೇನ ರಾನಿಲ್ ವಿಕ್ರಮಸಿಂಘೆ ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಹೊರಹೊಮ್ಮಿದ್ದಾರೆ.
ರಾನಿಲ್ ವಿಕ್ರಮಸಿಂಘೆ
ರಾನಿಲ್ ವಿಕ್ರಮಸಿಂಘೆ

ಕೊಲಂಬೊ: ಶ್ರೀಲಂಕಾದ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಜುಲೈ 20 ರಂದು ಬುಧವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲ್ಲುವ ಮುಖೇನ ರಾನಿಲ್ ವಿಕ್ರಮಸಿಂಘೆ ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಹೊರಹೊಮ್ಮಿದ್ದಾರೆ.

ರಾನಿಲ್ ವಿಕ್ರಮಸಿಂಘೆ ಅವರು ಎದುರಾಳಿಗಳ ಎದುರು ಸುಮಾರು 134 ಮತಗಳನ್ನು ಗಳಿಸಿ ಜಯಗಳಿಸಿದ್ದರು. ರಾನಿಲ್ ವಿಕ್ರಮಸಿಂಘೆ ಅವರ ವಿರುದ್ಧ ಭಾರೀ ಪ್ರತಿಭಟನೆಗಳ ನಡುವೆಯೇ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದರು.

ಬುಧವಾರ ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ ಅವರು ಸ್ಪೀಕರ್ ಅವರನ್ನು ಉದ್ದೇಶಿಸಿ ಸಂಸತ್ತಿನ ಸಂಕೀರ್ಣದ ಒಳಗೆ ಸಂಸತ್ತಿನ ಸಭಾಂಗಣದ ಹೊರಗೆ ಪ್ರಮಾಣವಚನ ಸ್ವೀಕರಿಸಲು ಸ್ಪೀಕರ್‌ಗೆ ಅನುಮತಿ ಕೋರಿದರು. ಶ್ರೀಲಂಕಾವನ್ನು ಅಭೂತಪೂರ್ವ ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಲು ಎಲ್ಲಾ ಪಕ್ಷಗಳೊಂದಿಗೆ ಕೆಲಸ ಮಾಡುವುದಾಗಿ ಅವರು ಪ್ರತಿಪಕ್ಷಗಳಿಗೆ ಭರವಸೆ ನೀಡಿದರು.

ಈ ಹಿಂದೆ, ರಾನಿಲ್ ಅವರ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಲಾಯಿತು ಮತ್ತು ಅವರು ಪ್ರಧಾನಿಯಾಗಿದ್ದಾಗ ಅವರ ಅಧಿಕೃತ ನಿವಾಸವನ್ನು ಪ್ರತಿಭಟನಾಕಾರರು ಮುತ್ತಿಗೆ ಹಾಕಿದರು, ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com